ಕಾಂಗ್ರೆಸ್ ನಾಯಕರಿಗೆ ದೇಶ ಮೊದಲು ಎಂಬ ತತ್ವದಲ್ಲಿ ನಂಬಿಕೆ ಇಲ್ಲ: ಸಿ.ಟಿ.ರವಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಾಲ್ಕು ಭಾಗಗಳಾಗಿ ದೊಡ್ಡ ಜನಬೆಂಬಲದೊಂದಿಗೆ ರಾಜ್ಯದಲ್ಲಿ ಮಾ. 1ರಿಂದ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದ್ದೇವೆ.
ಶಿಗ್ಗಾಂವಿ (ಮಾ.19): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಾಲ್ಕು ಭಾಗಗಳಾಗಿ ದೊಡ್ಡ ಜನಬೆಂಬಲದೊಂದಿಗೆ ರಾಜ್ಯದಲ್ಲಿ ಮಾ. 1ರಿಂದ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದ್ದೇವೆ. ನಮ್ಮ ಸಾಧನೆ ಜನರಿಗೆ ತಿಳಿಸುವ ಜತೆಗೆ ವಿಪಕ್ಷಗಳ ಅಧಿಕಾರ ದಾಹದ ಮನಸ್ಥಿತಿಯನ್ನು ಜನರಿಗೆ ತಿಳಿಸುತ್ತಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಸ್ಪಷ್ಟಬಹುಮತದೊಂದಿಗೆ ಮತ್ತೆ ಆಡಳಿತದ ಚುಕ್ಕಾಣಿ ಹಿಡಿಯುವ ಸಂಕಲ್ಪದೊಂದಿಗೆ ಈ ಯಾತ್ರೆ ಪ್ರಾರಂಭಿಸಿದ್ದೇವೆ.
ಈಗಾಗಲೇ 150 ಕ್ಷೇತ್ರಗಳಲ್ಲಿ ಯಾತ್ರೆ ಪೂರ್ಣಗೊಂಡಿದ್ದು ಮಾ. 21ರೊಳಗೆ ಎಲ್ಲ ಕ್ಷೇತ್ರಗಳಲ್ಲಿ ಯಾತ್ರೆ ಹಾಯ್ದು ಬರಲಿದೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದರು. ವಿಪಕ್ಷಗಳಿಗೆ ಅಧಿಕಾರ, ಜಾತಿ, ಕುಟುಂಬ ಮೊದಲು ಎನ್ನುವ ಮನಸ್ಥಿತಿ ಹೇಗಿದೆಯೋ ಹಾಗೆ ಬಿಜೆಪಿಗೆ ದೇಶ ಮೊದಲು ಎನ್ನುವ ಮನಸ್ಥಿತಿಯೊಂದಿಗೆ ದೇಶದಲ್ಲಿ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ನಾಯಕರಿಗೆ ದೇಶ ಮೊದಲು ಎಂಬ ತತ್ವದಲ್ಲಿ ನಂಬಿಕೆ ಇಲ್ಲ. ಅವರಿಗೆ ಕೇವಲ ಅಧಿಕಾರದ ದಾಹ ಮತ್ತು ಕುಟುಂಬ ನಿರ್ವಹಣೆ ಮಾತ್ರ ಮುಖ್ಯವಾಗಿದೆ ಎಂದು ಕಿಡಿಕಾರಿದರು.
ಸೀರೆ, ಸಕ್ಕರೆಗೆ ಮರಳಾಗಬೇಡಿ: ಮತದಾರರಿಗೆ ಶಾಸಕ ಬಸನಗೌಡ ಯತ್ನಾಳ ಕಿವಿಮಾತು
ರಾಜ್ಯ ಸರ್ಕಾರ ಯಾವುದೇ ಯೋಜನೆ ಜಾರಿಗೊಳಿಸುವಾಗ ಜಾತಿ ತಾರತಮ್ಯ ಮಾಡಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದಲ್ಲಿ ಜಾತಿ ಆಧಾರದ ಮೇಲೆ ಕೆಲ ಯೋಜನೆ ಜಾರಿಗೆ ತಂದರು. ಆದರೆ ಬಡವರಿಗೆ, ದಲಿತರಿಗೆ ನಮ್ಮ ನಿಯತ್ತು. ಬಡವರಿಗೆ ಶೌಚಾಲಯ, ವಿದ್ಯುತ್ ಸಂಪರ್ಕ ಕೊಟ್ಟಿದ್ದೆವೆ. ದಲಿತರ ಬಗ್ಗೆ ಕಾಳಜಿ ಇರುವುದುಕ್ಕೆ ಮೀಸಲಾತಿ ಜಾರಿಗೆ ತಂದಿದ್ದೇವೆ. ರೈತರ ಬಗ್ಗೆ ಕಾಳಜಿ ಇರುವುದಕ್ಕೆ ರೈತ ವಿದ್ಯಾನಿಧಿ, ರೈತ ಸಂಜೀವಿನಿ ಜಾರಿಗೆ ತಂದಿದ್ದೇವೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವ ಸಿ.ಸಿ. ಪಾಟೀಲ, ಮಾಜಿ ಶಾಸಕ ಶಿವರಾಜ ಸಜ್ಜನ, ಅರುಣ ಶಾಹಪುರ, ವಿವೇಕಾನಂದ ಗಡ್ಡಿ, ವಾಯುವ ಕರ್ನಾಟಕ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ, ಶಶಿಧರ ಹೊಸಳ್ಳಿ, ಪ್ರಕಾಶ ಗೀಳಂಜಿ, ಶೋಭಾ ಮಿಸ್ಸಿಮಗೌಡ್ರ, ರೂಪಾ ಬನ್ನಿಕೊಪ್ಪ, ಸಂಗೀತಾ ವಾಲ್ಮೀಕಿ ಅನೇಕರಿದ್ದರು.
ದಲಿತರ ಉದ್ಧಾರ ಆಗಿಲ್ಲ. ದೀನ ದಲಿತರ ಉದ್ಧಾರ ಮಾಡುತ್ತೇವೆ ಎಂದು ಆಡಳಿತ ನಡೆಸಿದ ಕಾಂಗ್ರೆಸ್ ಆಡಳಿತದಿಂದ ದಲಿತರ ಉದ್ಧಾರ ಆಗಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆರೋಪಿಸಿದರು. ಹಲವು ವರ್ಷಗಳ ಕಾಲ ದೇಶವನ್ನಾವಳಿದ ಕಾಂಗ್ರೆಸ್ ಅಭಿವೃದ್ಧಿ ಮಾಡದೆ ಕೇವಲ ಧರ್ಮ-ಧರ್ಮಗಳ, ಜಾತಿ-ಜಾತಿಗಳ ಮಧ್ಯೆ ವಿಷ ಬೀಜ ಬಿತ್ತಿದೆ. ಈ ಮೂಲಕ ವೋಟ್ ಬ್ಯಾಂಕ್ ರಾಜಕಾರಣ, ಕುಟುಂಬ ಹಿತಾಸಕ್ತಿಯೊಂದಿಗೆ ಆಡಳಿತ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನಮ್ಮ ಮೇಲೆ ಎಷ್ಟೇ ಆರೋಪ ಮಾಡಿದರೂ ಅಧಿಕಾರಕ್ಕೆ ಬರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ವಿಶ್ವಕ್ಕೆ ಭಾರತ ಗುರುವಾಗಿದೆ.
ಕಾಂಗ್ರೆಸ್ ಈಗ ಡೇಟ್ ಬಾರ್ ಆದ ಪಕ್ಷ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ದೇಶ ಭದ್ರತೆ ಕಾಪಾಡುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಿಜೆಪಿ ಮತ ನೀಡಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಮೇಲೆ ಉತ್ತರ ಕರ್ನಾಟಕಕ್ಕೆ ಅಂಟಿದ ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿಕಳಚಿದೆ. ಈ ಭಾಗದ ಸಮಗ್ರ ಅಭಿವೃದ್ಧಿಗೆ ಅವರು ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ ಎಂದರು. ನೀರಾವರಿ ಕ್ಷೇತ್ರಕ್ಕೆ . 75000 ಕೋಟಿ ಅನುದಾನ ನೀಡಿದ್ದಾರೆ. ಇಷ್ಟೊಂದು ಹಣವನ್ನು ಯಾವ ಸರ್ಕಾರವು ನೀಡಿರಲಿಲ್ಲ. ಶಿಗ್ಗಾಂವಿ, ಬಂಕಾಪುರ, ಸವಣೂರು ಭಾಗಗದಲ್ಲಿ ನೀರಾವರಿ ಯೋಜನೆ ಮೂಲಕ ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ಹೆಚ್ಚಿದ್ದಾರೆ. ಇದು ನಮ್ಮ ಸರ್ಕಾರದ ಸಾಧನೆ ಎಂದು ಹೇಳಿದರು.