ಕೇಂದ್ರ ಮತ್ತು ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಸರ್ಕಾರ ಪವರ್‌ಫುಲ್‌ ಸರ್ಕಾರವಾಗಿದೆ. ಮತದಾರರು ಒಂದು ವೇಳೆ ಎಚ್ಚರ ತಪ್ಪಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದಲ್ಲಿ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕಾದರೆ ಈ ಡಬಲ್‌ ಎಂಜಿನ್‌ ಸರ್ಕಾರ ಬೇಕು. ಹೀಗಾಗಿ, ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ ಜೆ.ಪಿ.ನಡ್ಡಾ. 

ಮದ್ದೂರು(ಮೇ.07):  ರಾಜ್ಯದಲ್ಲಿ ಚುನಾವಣೆ ನಂತರ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ. ಇನ್ನು, ಆ ಪಕ್ಷದ ನಾಯಕರು ಘೋಷಣೆ ಮಾಡಿರುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವ ಬೆಲೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನಿಸಿದ್ದಾರೆ.

ಪಟ್ಟಣದಲ್ಲಿ ರೋಡ್‌ ಶೋ ನಡೆಸುವ ಮೂಲಕ ಮದ್ದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಪಿ.ಸ್ವಾಮಿ ಪರ ಮತಯಾಚಿಸಿದರು. ಈ ವೇಳೆ, ಮಾತನಾಡಿ, ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಗಳು ಮಾಡಿರುವ ಸಾಧನೆಯ ರಿಪೋರ್ಟ್‌ ಕಾರ್ಡ್‌ ಬಿಜೆಪಿ ಬಳಿ ಇದೆ. ಕೋಟ್ಯಂತರ ರು.ಭ್ರಷ್ಟಾಚಾರದ ಹಗರಣಗಳಲ್ಲಿ ಸಿಲುಕಿ ಜಾಮೀನಿನ ಮೇಲಿರುವ ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕ ಹಕ್ಕಿಲ್ಲ ಎಂದು ಲೇವಡಿ ಮಾಡಿದರು.

ಜೆಡಿಎಸ್‌ ಮುಗಿಸ್ತೇನೆ ಎನ್ನುವವರ ಕಂಡ್ರೆ ರಕ್ತ ಕುದಿಯುತ್ತೆ: ಎಚ್‌.ಡಿ.ದೇವೇಗೌಡ

ಕೇಂದ್ರ ಮತ್ತು ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಸರ್ಕಾರ ಪವರ್‌ಫುಲ್‌ ಸರ್ಕಾರವಾಗಿದೆ. ಮತದಾರರು ಒಂದು ವೇಳೆ ಎಚ್ಚರ ತಪ್ಪಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದಲ್ಲಿ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕಾದರೆ ಈ ಡಬಲ್‌ ಎಂಜಿನ್‌ ಸರ್ಕಾರ ಬೇಕು. ಹೀಗಾಗಿ, ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.