ಕಾಂಗ್ರೆಸ್‌-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು: ಜೆ.ಪಿ.ನಡ್ಡಾ ಟೀಕಾ ಪ್ರಹಾರ

ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಈ ಎರಡೂ ಪಕ್ಷಗಳಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಜಾತಿ-ಕೋಮು ರಾಜಕಾರಣ ಮಾಡುತ್ತಿವೆ. 

BJP National President JP Nadda Slams On Congress And JDS gvd

ಬೆಂಗಳೂರು (ಮಾ.09): ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಈ ಎರಡೂ ಪಕ್ಷಗಳಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಜಾತಿ-ಕೋಮು ರಾಜಕಾರಣ ಮಾಡುತ್ತಿವೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳನ್ನು ತಿರಸ್ಕರಿಸಿ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮನವಿ ಮಾಡಿದ್ದಾರೆ. 

ಗುರುವಾರ ನಗರದ ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷದ ‘ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಪಾಲ್ಗೊಂಡ ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ಮಾಡಿದರೆ, ಕಾಂಗ್ರೆಸ್‌ ಪಕ್ಷ ಪರಿವಾರ ಲಿಮಿಟೆಡ್‌ ಆಗಿದೆ. ರಾಜ್ಯ ಕಾಂಗ್ರೆಸ್‌ನ ಮುಖ್ಯಸ್ಥರೇ ಭ್ರಷ್ಟಾಚಾರ ಪ್ರಕರಣದಲ್ಲಿ ತಿಹಾರ್‌ ಜೈಲು ಸೇರಿದ್ದರು. ಭ್ರಷ್ಟಾಚಾರ, ಕಮಿಷನ್‌ ವಿಚಾರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಅಣ್ಣ ತಮ್ಮ ಇದ್ದಂತೆ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ. ಬಿ.ಎಸ್‌.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಅಭಿವೃದ್ಧಿ ಗರಿಷ್ಠ ಕೊಡುಗೆ ನೀಡಿದ್ದಾರೆ. 

ಸಚಿವ ನಾರಾಯಣ ಗೌಡ ಮಾ.21ಕ್ಕೆ ಕಾಂಗ್ರೆಸ್‌ ಸೇರ್ಪಡೆ ಅಧಿಕೃತ

ಸಚಿವ ಬೈರತಿ ಬಸವರಾಜು ಉತ್ತಮ ಕೆಲಸ ಮಾಡಿದ್ದಾರೆ. ಪ್ರಜಾತಂತ್ರದಲ್ಲಿ ಸಿದ್ಧಾಂತಗಳಡಿ ಹೋರಾಡಬೇಕು. ಆದರೆ, ಮಾನಸಿಕವಾಗಿ ದಿವಾಳಿಯಾಗಿರುವ ಕಾಂಗ್ರೆಸ್‌ ಪ್ರಧಾನಿ ಮೋದಿ ಅವರನ್ನು ವಿರೋಧ ಮಾಡುತ್ತಿದೆ. ಪ್ರಧಾನಿ ಮೋದಿ ಅವರನ್ನು ವಿರೋಧಿಸಿದರೆ, ದೇಶವನ್ನು ವಿರೋಧಿಸಿದಂತೆ. ಮುಂಬರುವ ಚುನಾವಣೆಯಲ್ಲಿ ದೇಶ ಮತ್ತು ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸಬೇಕು. ಈ ಮೂಲಕ ಮೋದಿ ಅವರಿಗೆ ಅಶೀರ್ವದಿಸಬೇಕು ಎಂದು ಮನವಿ ಮಾಡಿದರು. ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ, ಸಚಿವರಾದ ಆರ್‌.ಅಶೋಕ್‌, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಬೈರತಿ ಬಸವರಾಜು, ಮುನಿರತ್ನ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ಉಪಸ್ಥಿತರಿದ್ದರು.

ಬೆಂಗಳೂರು ನಂಬರ್‌ ಒನ್‌: ಕರ್ನಾಟಕ ರಾಜ್ಯದ ಜ್ಞಾನ, ಆಧ್ಯಾತ್ಮ, ವಿಜ್ಞಾನದ ನಾಡು. ದೇಶದಲ್ಲಿ ಬೆಂಗಳೂರು ನಗರಕ್ಕೆ ವಿಶೇಷ ಸ್ಥಾನವಿದೆ. ಪ್ರತಿಭೆ, ಇನೋವೇಶನ್‌, ಸ್ಟಾರ್ಟಾಪ್‌, ತಂತ್ರಜ್ಞಾನದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿದೆ. ಎಲೆಕ್ಟ್ರಾನಿಕ್ಸ್‌ ಉಪಕರಣಗಳ ಉತ್ಪಾದನೆಯಲ್ಲಿ ಬೆಂಗಳೂರು ಶೇ.50ರಸ್ಟುಕೊಡುಗೆ ನೀಡುತ್ತಿದೆ ಎಂದು ಜೆ.ಪಿ.ನಡ್ಡಾ ಹೇಳಿದರು. 2014ಕ್ಕೂ ಮುಂಚೆ ಭಾರತದಲ್ಲಿ ಶೇ.92ರಷ್ಟುಮೊಬೈಲ್‌ಗಳು ವಿದೇಶಗಳಿಂದ ಆಮದಾಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲೇ ಶೇ.97ರಷ್ಟುಮೊಬೈಲ್‌ ಉತ್ಪಾದನೆಯಾಗುತ್ತಿದೆ. 

ಆ್ಯಪಲ್‌ ಮೊಬೈಲ್‌ ತಯಾರಿಕಾ ಕಂಪನಿ ಫಾಕ್ಸ್‌ ಕಾನ್‌ ಶೀಘ್ರದಲ್ಲೇ ಕರ್ನಾಟಕದಲ್ಲಿ ಮೊಬೈಲ್‌ ಉತ್ಪಾದನಾ ಘಟಕ ಸ್ಥಾಪಿಸಲಿದೆ ಎಂದರು. ಕೊರೋನಾ, ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಇಟಲಿ, ರಷ್ಯಾ, ಯುಕೆ, ಆಸ್ಪ್ರೇಲಿಯಾ ಆರ್ಥಿಕತೆ ಕುಸಿದಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಆರ್ಥಿಕತೆ ಸ್ಥಿರವಾಗಿತ್ತು. ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದ ಆರ್ಥಿಕತೆಯ ಬೆಳವಣಿಗೆ ದರ ಉತ್ತಮವಾಗಿದೆ. 2014ಕ್ಕೂ ಮುಂಚೆ ಶೇ.3ರಷ್ಟಿದ್ದ ಡಿಜಿಟಲ್‌ ವ್ಯವಹಾರ ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ಶೇ.40ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಐಟಿ ಆಕ್ಟ್‌ಗೆ ಪರ್ಯಾಯವಾಗಿ ಡಿಜಿಟಲ್ ಇಂಡಿಯಾ ಬಿಲ್: ರಾಜೀವ್ ಚಂದ್ರಶೇಖರ್

‘ಕಾಂಗ್ರೆಸ್‌ ನಾಯಕರಿಗೆ ಜೈಲು ಅಥವಾ ಬೇಲು’: ಕಾಂಗ್ರೆಸ್‌ ಆಡಳಿತದಲ್ಲಿ ಲೂಟಿ ನಡೆದಿದೆ. ಕಾಂಗ್ರೆಸ್‌ ನಾಯಕರು ಬೇಲ್‌ ಅಥವಾ ಜೈಲಲ್ಲಿ ಇದ್ದಾರೆ. ಇಂಥವರು ನಾಚಿಕೆ ಇಲ್ಲದೆ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಇನ್ನು ಜೆಡಿಎಸ್‌ ಪಕ್ಷ ಕಾಂಗ್ರೆಸ್‌ನ ಬಿ ಟೀಂ ಆಗಿದೆ. ಈ ಎರಡೂ ಪಕ್ಷಗಳು ಸೇರಿ 14 ತಿಂಗಳು ಸರ್ಕಾರ ಮಾಡಿದರೂ 15 ಜನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಇದೀಗ ಮತ್ತೊಂದು ಅವಕಾಶ ಕೇಳಿ ಜನರ ಬಳಿ ಹೋಗುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಡೆದಾಟ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಟವಲ್‌ ಹಾಕಿಕೊಂಡು ಕುಳಿತಿದ್ದಾರೆ. ಈ ಬಾರಿ ಬೆಂಗಳೂರಿನಲ್ಲಿ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಬೇಕು ಎಂದು ಜೆ.ಪಿ.ನಡ್ಡಾ ಕರೆ ನೀಡಿದರು.

Latest Videos
Follow Us:
Download App:
  • android
  • ios