ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸುವ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಭಾಗವಹಿಸಲಿರುವ ಜೆ.ಪಿ.ನಡ್ಡಾ. 

ಬೆಂಗಳೂರು(ಮಾ.17): ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಶುಕ್ರವಾರ ಮಧ್ಯಾಹ್ನದ ವೇಳೆಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಬಳ್ಳಾರಿ ಜಿಲ್ಲೆಯ ತೋರಣಗಲ್‌ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವ ನಡ್ಡಾ ಅವರು ಮಧ್ಯಾಹ್ನ 3ಗಂಟೆಯಿಂದ ಚಳ್ಳಕೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.20ಕ್ಕೆ ಮೊಳಕಾಲ್ಮೂರಿನಲ್ಲಿ ಬೈಕ್‌ ರಾರ‍ಯಲಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ, ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರದಂದು ಬೆಳಗ್ಗೆ 11ಗಂಟೆಯಿಂದ ತಿಪಟೂರಿನಲ್ಲಿ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಚಿಕ್ಕನಾಯಕನಹಳ್ಳಿಯಲ್ಲಿ ರೋಡ್‌ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳು: ಜೆ.ಪಿ.ನಡ್ಡಾ ಟೀಕಾ ಪ್ರಹಾರ

ಚುನಾವಣಾ ಪ್ರಚಾರ ಸಮಿತಿ ಸಭೆ:

ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸುವ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ ಭೋಜನ ಸ್ವೀಕರಿಸಿ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.