ಬಿಜೆಪಿ ಪರ ಕೆಲಸ ಮಾಡುವ ಬದಲು ಕಾಂಗ್ರೆಸ್ ಪರ ಕೆಲಸ ಮಾಡುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಅಲ್ಲದೇ, ಸಭಾಧ್ಯಕ್ಷರಿಗೂ ಸಹ ದೂರು ಕೊಡಲಾಗಿದೆ: ವಿಧಾನಸಭೆ ಪ್ರತಿಪಕ್ಷ ನಾಯಕ ಆ‌ರ್.ಅಶೋಕ್ 

ಬೆಂಗಳೂರು(ಏ.07): ಪಕ್ಷದ ವಿರುದ್ಧ ಕೆಲಸ ಮಾಡುತ್ತಿರುವ ಬಿಜೆಪಿ ಬಂಡುಕೋರ ಶಾಸಕ ಎಸ್.ಟಿ. ಸೋಮಶೇಖರ್‌ ಅವರಿಗೆ ನೋಟಿಸ್ ಕೊಡಲಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆ‌ರ್.ಅಶೋಕ್ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅಶೋಕ್, ಬಿಜೆಪಿ ಪರ ಕೆಲಸ ಮಾಡುವ ಬದಲು ಕಾಂಗ್ರೆಸ್ ಪರ ಕೆಲಸ ಮಾಡುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಅಲ್ಲದೇ, ಸಭಾಧ್ಯಕ್ಷರಿಗೂ ಸಹ ದೂರು ಕೊಡಲಾಗಿದೆ ಎಂದು ಹೇಳಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಬೆಂಬಲ ಕಾಂಗ್ರೆಸ್‌ಗೆ: ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌

ಈಗಲೂ ಬಿಜೆಪಿ ಪರವಾಗಿ ಕೆಲಸ ಮಾಡಲು ಸೋಮಶೇಖ‌ರ್ ಅವರಿಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ.