ಸರ್ಕಾರಕ್ಕೆ ತಾಕತ್ತಿದ್ದರೆ ಜಿಪಂ, ಬಿಬಿಎಂಪಿ ಚುನಾವಣೆ ಘೋಷಿಸಲಿ: ಆರ್.ಅಶೋಕ್ ಸವಾಲು
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ದಮ್ಮು, ತಾಕತ್ತಿದ್ದರೆ ಜಿಲ್ಲಾ, ತಾಲ್ಲೂಕು ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆ ದಿನಾಂಕವನ್ನು ತಕ್ಷಣವೇ ಘೋಷಣೆ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಬೆಂಗಳೂರು (ಜೂ.23): ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ದಮ್ಮು, ತಾಕತ್ತಿದ್ದರೆ ಜಿಲ್ಲಾ, ತಾಲ್ಲೂಕು ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆ ದಿನಾಂಕವನ್ನು ತಕ್ಷಣವೇ ಘೋಷಣೆ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿಯಾಗಿದ್ದಾರೆಂದು ಕಾಂಗ್ರೆಸ್‌ನಾಯಕರು ಸುಳ್ಳು ಹೇಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಣೆಬರಹ ಏನೆಂಬುದು ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ. ಇಲ್ಲೂ ಸಹ ಗೆದ್ದು ತೋರಿಸಬೇಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್‌ಗೆ ನಡುಕ ಹುಟ್ಟಿಸಿದೆ ಎಂದರು. ಅದು ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ಕಸದ ಬುಟ್ಟಿ ಸೇರಿದೆ. ಕಾಂಗ್ರೆಸ್ ಬೆಲೆ ಏರಿಕೆ ಯುಗವನ್ನು ಪ್ರಾರಂಭಿಸಿದೆ. ಬಿಜೆಪಿ- ಜೆಡಿಎಸ್ ಹೊಂದಾಣಿಕೆಯಿಂದ ರಾಜ್ಯದಲ್ಲಿ ಅಭೂತಪೂರ್ವ ಜಯವನ್ನು ಸಾಧಿಸಲಾಗಿದೆ. 20 ಸ್ಥಾನ ಗೆಲ್ಲುವುದಾಗಿ ಕಾಂಗ್ರೆಸ್ ಪಕ್ಷವು ಹೇಳುತ್ತಿತ್ತು. ಪೆಟ್ರೋಲ್- ಡೀಸೆಲ್ ದರ ಏರಿಸಿದ ಕಾಂಗ್ರೆಸ್ಸಿಗೆ ಈಗ ಕೇಡುಗಾಲ ಬಂದಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಗ್ಯಾರಂಟಿಯೇ ಬೆಲೆ ಹೆಚ್ಚಳಕ್ಕೆ ಮೂಲ ಕಾರಣ: ಎಚ್.ಡಿ.ಕುಮಾರಸ್ವಾಮಿ
ಜಯದೇವ ಸಂಸ್ಥೆ ಕೀರ್ತಿಗೆ ಮಸಿ ಬಳಿದ ಕಾಂಗ್ರೆಸ್: ನೀರಿಲ್ಲವೆಂದು ಶಸ್ತ್ರಚಿಕಿತ್ಸೆಗಳನ್ನು ಮುಂದೂಡಿರುವ ಇಲ್ಲಿನ ಜಿಮ್ಸ್ ಜಿಲ್ಲಾಸ್ಪತ್ರೆ ಹಾಗೂ ಜಯದೇವ ಹೃದ್ರೋಗ ವಿಜ್ಞಾನ- ಸಂಶೋಧನಾ ಸಂಸ್ಥೆಗೆ ಗುರುವಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಎರಡೂ ಕಡೆ ರೋಗಿಗಳು, ಅವರ ಸಹಾಯಕರೊಂದಿಗೆ ಮಾತುಕತೆ ನಡೆಸಿ ವಾಸ್ತವಾಂಶಗಳನ್ನು ಪರಿಶೀಲಿಸಿದರು. ಉಭಯ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳು ಹಾಗೂ ಸಹಾಯಕರು ಕಳೆದ 1 ವಾರದಿಂದ ನೀರಿನ ಸಮಸ್ಯೆ ಕಾಡುತ್ತಿದೆ.
ತಾವು ಬಾಟಲ್ ನೀರನ್ನೇ ಬಳಸುತ್ತಿರೋದಾಗಿ ಹೇಳಿದರಲ್ಲದೆ ಅನೇಕರ ಎಮರ್ಜೆನ್ಸಿ ಶಸ್ತ್ರ ಚಿಕಿತ್ಸೆಗಳನ್ನೆಲ್ಲ ಮುಂದೂಡಿ ವೈದ್ಯರು ಹೇಳಿದ್ದಾರೆ. ನಮಗೆಲ್ಲರಿಗೂ ತೊಂದರೆ ಕಾಡುತ್ತಿದೆ ಎಂದು ಆಸ್ಪತ್ರೆಯಲ್ಲಿನ ನೀರಿನ ಹಾಹಾಕಾರದಿಂದ ತಮಗೆ ಎದುರಾಗಿರುವ ಸಮಸ್ಯೆಗಳನ್ನು ಅಶೋಕ ಮುಂದೆ ಕಣ್ಣಿಗೆ ಕಟ್ಟುವಂತೆ ವಿವರಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಬದುಕಿದೆಯಾ? ಸತ್ತಿದೆಯಾ? ಎಂದೇ ಅರ್ಥವಾಗ್ತಿಲ್ಲ. ಇಲ್ಲಿನ ಆಸ್ಪತ್ರೆ ದುರವಸ್ಥೆ ನೋಡಿದರೆ ಈ ಸರಕಾರ ಐಸಿಯೂನಲ್ಲಂತೂ ಇದೆ ಎಂಬುದು ಖಚಿತವಾಗ್ತಿದೆ ಎಂದರು.
ಚನ್ನಪಟ್ಟಣದಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ: ಡಿಸಿಎಂ ಡಿಕೆಶಿ
ಜೂ.16, 17, 18 ಮೂರು ದಿನ ಮಳೆಯಿಂದಾಗಿ ರಾಡಿ ನೀರು ಬಂತೆಂದು ತುರ್ತು ಶಸ್ತ್ರ ಚಿಕಿತ್ಸೆಗಳನ್ನೇ ನಿಲ್ಲಿಸಿದ್ದಾರೆ. ಹೀಗಾದರೆ ಬಡ ರೋಗಿಗಳು ಹೋಗೋದೆಲ್ಲಿ? ಇದು ಘೋರ ಅಲಕ್ಷತನ, ಇದಕ್ಕೆ ಯಾರು ಹೊಣೆ? ತಕ್ಷಣ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಇಡೀ ಬೆಳವಣಿಗೆಯ ಸಮಗ್ರ ತನಿಖೆಗೆ ಆಗ್ರಹಿಸುವೆ, ಅಲಕ್ಷತನಕ್ಕೆ ಪಾಲಿಕೆಯ ಕಮೀಷ್ನರ್, ಜಿಲ್ಲಾಡಳಿತದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿಸುವಂತೆ ಆಗ್ರಹಿಸುವೆ ಎಂದರು.