ಸಿದ್ದು ಸರ್ಕಾರದಿಂದ 6 ತಿಂಗಳಲ್ಲಿ 60 ತಪ್ಪು: ಆರ್.ಅಶೋಕ್ ವಾಗ್ದಾಳಿ
ಕಾಂಗ್ರೆಸ್ ಸರ್ಕಾರ 6 ತಿಂಗಳ ಹಿಂದೆ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಪ್ರಕರಣ ಸಿಬಿಐ ತನಿಖೆ ಹಿಂಪಡೆದದ್ದು ಸೇರಿದಂತೆ 60 ತಪ್ಪುಗಳನ್ನು ಮಾಡಿದೆ.
ಬೆಂಗಳೂರು (ಡಿ.03): ಕಾಂಗ್ರೆಸ್ ಸರ್ಕಾರ 6 ತಿಂಗಳ ಹಿಂದೆ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಪ್ರಕರಣ ಸಿಬಿಐ ತನಿಖೆ ಹಿಂಪಡೆದದ್ದು ಸೇರಿದಂತೆ 60 ತಪ್ಪುಗಳನ್ನು ಮಾಡಿದೆ. ಸರ್ಕಾರದ ತಪ್ಪುಗಳು, ಆಡಳಿತ ವೈಫಲ್ಯಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದರು.
ಐಟಿ ದಾಳಿಯಾಗಿ ಇವರ ಲೂಟಿ ಹಣ ಸಿಕ್ಕಿದೆ. ಬರಪರಿಸ್ಥಿತಿ ನಿರ್ವಹಣೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಗ್ಯಾರಂಟಿ ಜಾರಿಗೊಳಿಸದೆ ಟೋಪಿ ಹಾಕಿದೆ. ಸಿಬಿಐ ತನಿಖೆಗೆ ವಹಿಸಲಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆದು ಸ್ವಜನಪಕ್ಷಪಾತ ಮಾಡಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಇಂತಹ ಅರವತ್ತು ತಪ್ಪುಗಳು ಆಗಿವೆ. ಈ ಬಗ್ಗೆ ಸದನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ನಿಲುವಳಿ ಮಂಡಿಸಿ ಸರ್ಕಾರಕ್ಕೆ ಚಾಟಿ ಬೀಸುವ ಕೆಲಸ ಮಾಡಲಿವೆ ಎಂದರು.
ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ: ಕಿಡ್ನಾಪ್ ಶಂಕೆ
ಇವುಗಳ ಜೊತೆಗೆ ಕಾಂಗ್ರೆಸ್ ಗ್ಯಾರಂಟಿಗಳು ವಿಫಲವಾಗಿವೆ, ಇದರ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಗುತ್ತಿಗೆದಾರ ಅಂಬಿಕಾಪತಿ ಸಾವಿಗೆ ಬೇರೆಯೇ ಕಾರಣ ಇದೆ. ಅದರ ಬಗ್ಗೆಯೂ ಚರ್ಚೆ ಮಾಡ್ತೇವೆ. ನಿರುದ್ಯೋಗಿಗಳಿಗೆ ಆರು ತಿಂಗಳಿಂದ ಸರ್ಕಾರ ನಾಮ ಹಾಕಿದೆ. ಶಾಲೆಗಳಿಗೆ ಹುಸಿ ಬಾಂಬ್ ಮೇಲ್, ಜಮೀರ್ ಅಹಮದ್ ಅಸಂಬದ್ಧ ಹೇಳಿಕೆ, ರಾಷ್ಟ್ರೀಯ ಶಿಕ್ಷಣ ನೀತಿ ರದ್ದು, ಜಾತಿಜನಗಣತಿ ವರದಿ, ನೀರಾವರಿ ಯೋಜನೆಗಳು, ಸೇರಿದಂತೆ ಇನ್ನೂ ಹಲವು ವಿಚಾರಗಳ ಬಗ್ಗೆ ನಿಲುವಳಿ ಸೂಚನೆ ಮಂಡಿಸಿ ಚರ್ಚೆ ಮಾಡುತ್ತೇವೆ ಎಂದರು.
ವಿಧಾನ ಪರಿಷತ್ ವಿಪಕ್ಷ ನಾಯಕ, ವಿಧಾನಸಭೆ ಉಪನಾಯಕ, ಉಭಯ ಸದನಗಳ ವಿಪ್ ಗಳ ನೇಮಕ ವಿಳಂಬ ಕುರಿತ ಪ್ರಶ್ನೆಗೆ, ಕೇಂದ್ರದ ನಾಯಕರ ಜತೆ ನಾನು ಮತ್ತು ಬಿ.ವೈ.ವಿಜಯೇಂದ್ರ ಮಾತಾಡಿದ್ದೇವೆ. ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ತೆಗೆದುಕೊಂಡಿದೆ. ಅಧಿವೇಶನ ಆರಂಭಕ್ಕೂ ಮುಂಚೆ ಆಯ್ಕೆ ಮಾಡುತ್ತೇವೆ ಎಂದರು.
ಆಸ್ತಿಗಳ ಡಿಜೀಟಲೀಕರಣ ಯೋಜನೆ ಕನಕಪುರಕ್ಕೆ ವಿಸ್ತರಣೆ: ಡಿ.ಕೆ.ಶಿವಕುಮಾರ್
ಡಿಕೆಶಿಗೆ ಬಿರಿಯಾಮಿ ಕೊಡಿಸುವ ಕೆಲಸವೇ?: ಡಿ.ಕೆ.ಶಿವಕುಮಾರ್ ಅವರ ತೆಲಂಗಾಣ ಭೇಟಿ ಬಗ್ಗೆ ವಾಗ್ದಾಳಿ ನಡೆಸಿದ ಅಶೋಕ್ ಅವರು, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನರ ಹಿತ, ಕಷ್ಟ ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ. ಅವರಿಗೆ ತೆಲಂಗಾಣ ಶಾಸಕರ ಯೋಗಕ್ಷೇಮ, ಅವರನ್ನು ಯಾವ ಹೊಟೇಲ್ ನಲ್ಲಿ ಇರಿಸಬೇಕು? ಮಟನ್ ಬಿರಿಯಾನಿ, ಚಿಕನ್ ಬಿರಿಯಾನಿ ಕೊಡಿಸಬೇಕಾ? ಯೋಗಕ್ಷೇಮ ಹೇಗೆ ಮಾಡಬೇಕು ಅನ್ನೋದೇ ಮುಖ್ಯ. ಇವರಿಗೆ ರಾಜ್ಯದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.