ಸಚಿವರ ಅಯೋಗ್ಯ ಪದ ಬಳಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿ ಮಾತಿನ ಜಟಾಪಟಿ ನಡೆಯಿತು. ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್ ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿ ತಂದು ಚರ್ಚೆ ಮುಂದುವರಿಯಲು ಅನುವು ಮಾಡಿಕೊಟ್ಟರು.

ವಿಧಾನಸಭೆ(ಫೆ.29):  ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಸಂಬಂಧ ಸದನದಲ್ಲಿ ನಡೆದ ಚರ್ಚೆ ವೇಳೆ ಕಂದಾಯ ಸಚಿವ ಕೃಷ್ಣಬೈರೇಗೌಡ ಬಿಜೆಪಿ ವಿರುದ್ಧ ಅಯೋಗ್ಯ ಪದ ಬಳಸಿದ್ದು ಕೋಲಾಹಲಕ್ಕೆ ಕಾರಣವಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುಧವಾರ ಚರ್ಚೆ ವೇಳೆ ಬಿಜೆಪಿ ಸದಸ್ಯ ವಿ.ಸುನಿಲ್‌ಕುಮಾರ್ ಅವರು 1947ರಲ್ಲಿ ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೃಷ್ಣಬೈರೇಗೌಡ ಅವರು, ಪುಲ್ವಾಮಾ ಘಟನೆಯಲ್ಲಿ 40 ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು ಎಂಬುದನ್ನು ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ ಎಂದು ಕಿಡಿಕಾರಿದರು. 

ಗ್ರಾಪಂ ಮಟ್ಟದಲ್ಲೇ ಸಿಗುತ್ತೆ ವಿವಾಹ ನೋಂದಣಿ ಸರ್ಟಿಫಿಕೇಟ್: ಸಚಿವ ಕೃಷ್ಣ ಬೈರೇಗೌಡ

ಸಚಿವರ ಅಯೋಗ್ಯ ಪದ ಬಳಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿ ಮಾತಿನ ಜಟಾಪಟಿ ನಡೆಯಿತು. ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್ ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿ ತಂದು ಚರ್ಚೆ ಮುಂದುವರಿಯಲು ಅನುವು ಮಾಡಿಕೊಟ್ಟರು.