ಅವಧಿ ಪೂರ್ವ ಚುನಾವಣೆಗೆ ಬಿಜೆಪಿ ಸಿದ್ಧತೆ’ ಕಾಂಗ್ರೆಸ್‌ ಪಕ್ಷ ಸರ್ವ ರೀತಿಯಲ್ಲೂ ಸಜ್ಜು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿಕೆ

ಬೆಂಗಳೂರು(ಮಾ.30): ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆಸಿದರೂ ಎದುರಿಸಲು ಕಾಂಗ್ರೆಸ್‌ ಪಕ್ಷ ಸಿದ್ಧವಾಗಿದೆ. ನಮ್ಮ ಮೂಲಗಳ ಪ್ರಕಾರ ನ.27ರಂದು ವಿಧಾನಸಭೆ ಚುನಾವಣೆ ನಡೆಸಲು ಸಿದ್ಧತೆ ನಡೆದಿದೆ. ನಾಳೆಯೇ ಚುನಾವಣೆ ನಡೆದರೂ ನಾವು ಸಿದ್ಧವಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅವಧಿಪೂರ್ವ ಚುನಾವಣೆ ಬಗ್ಗೆ ಮಾಹಿತಿ ಬಂದಿದೆ. ಅವರು ಯಾವಾಗ ಬೇಕಾದರೂ ಚುನಾವಣೆ ಮಾಡಲಿ, ಈ ತಿಂಗಳು ಮಾಡಲಿ ಅಥವಾ ನಾಳೆಯೇ ಮಾಡಲಿ. ನವೆಂಬರ್‌ 27ಕ್ಕೆ ಚುನಾವಣೆ ದಿನಾಂಕ ಪ್ರಕಟಿಸಲಿ. ಎಲ್ಲದಕ್ಕೂ ಕಾಂಗ್ರೆಸ್‌ ಪಕ್ಷ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದು ಸ್ಪಷ್ಟಪಡಿಸಿದರು.

ನಿಜವಾಗ್ಲೂ ಡಿಕೆಶಿ, ಸಿದ್ದು ಮಧ್ಯೆ ಭಿನ್ನಾಭಿಪ್ರಾಯ ಇದ್ಯಾ?: ಜಾರಕಿಹೊಳಿ ಹೇಳಿದ್ದಿಷ್ಟು

ನ.27 ಎಂದು ಹೇಗೆ ಹೇಳುತ್ತೀರಿ ಎಂಬ ಪ್ರಶ್ನೆಗೆ, ‘ನಿಮಗೆ ಮಾಹಿತಿ ನೀಡಲು ಮೂಲಗಳು ಇರುವಂತೆ ನಮಗೂ ಇದ್ದಾರೆ. ನಮಗೂ ಮಾಹಿತಿ ಬರುತ್ತದೆ. ಇದು ನಮ್ಮ ಮೂಲಗಳ ಮಾಹಿತಿ’ ಎಂದು ಹೇಳಿದರು. ತನ್ಮೂಲಕ ಅವಧಿಪೂರ್ವ ಚುನಾವಣೆಯ ಮುನ್ಸೂಚನೆ ನೀಡಿದರು.

ವಿಧಾ​ನ​ಸ​ಭೆ​ ಚುನಾವಣೆಯಲ್ಲಿ ಹೊಸ​ಬ​ರಿಗೆ ಟಿಕೆ​ಟ್‌ 
ಮುಂಬ​ರುವ ವಿಧಾ​ನ​ಸಭಾ ಚುನಾ​ವ​ಣೆ​ಯಲ್ಲಿ ಹೊಸ​ಬ​ರಿಗೆ ಟಿಕೆಟ್‌ ನೀಡ​ಲಾ​ಗು​ವುದು. ಜತೆಗೆ ಸ್ಥಳೀ​ಯ​ವಾಗಿ ಪಕ್ಷ​ಕ್ಕಾಗಿ ದುಡಿ​ದ​ವ​ರಿಗೆ ಆದ್ಯತೆ ನೀಡ​ಲಾ​ಗು​ವುದು ಎಂದು ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ್‌ ಹೇಳಿ​ದ​ರು. ಗುರು​ವಾರ ಸುದ್ದಿ​ಗೋ​ಷ್ಠಿ​ಯಲ್ಲಿ ಮಾತ​ನಾಡಿ, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಬಣಗಳಿಲ್ಲ. ಎಲ್ಲರೂ ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು. ವಿಧಾನಸಭೆ ಚುನಾವಣೆಯನ್ನೂ ಸಾಮೂಹಿಕ ನಾಯಕತ್ವದಲ್ಲೇ ಎದುರಿಸುತ್ತೇವೆ. ರಾಜ್ಯ​ದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದ್ದು, ಎಲ್ಲಾ ಮುಂಚೂಣಿ ಘಟಕಗಳ ಬಲವರ್ಧನೆಗೆ ಕ್ರಮ ಕೈಗೊಳ್ಳ​ಲಾ​ಗು​ತ್ತಿ​ದೆ. ಕೇಡರ್‌ ಪಾರ್ಟಿ ಮಾಡಲೂ ಆದ್ಯತೆ ನೀಡ​ಲಾ​ಗು​ತ್ತಿದೆ ಎಂದರು.

ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧಾರ

ಏಪ್ರಿಲ್‌ 2ನೇ ವಾರ ಬಿಜೆಪಿ ರಾಜ್ಯ ಪ್ರವಾಸ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ನಾಯಕರು ಬರುವ ಏಪ್ರಿಲ್‌ ಎರಡನೇ ವಾರದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.ಬಹುತೇಕ ಏ.12ರಿಂದ ನಾಲ್ಕು ದಿನಗಳ ಕಾಲ ರಾಜ್ಯ ನಾಯಕರು ಪ್ರವಾಸ ಕೈಗೊಳ್ಳಲಿದ್ದು, ಬಳಿಕ 16 ಮತ್ತು 17ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಮೂರು ಅಥವಾ ನಾಲ್ಕು ತಂಡಗಳನ್ನಾಗಿ ರಚಿಸಿ ಪ್ರವಾಸ ಕೈಗೊಳ್ಳುವ ಸಂಭವವಿದ್ದು, ಪ್ರವಾಸದ ರೂಪುರೇಷೆ ಇನ್ನಷ್ಟೇ ಅಂತಿಮಗೊಳ್ಳಬೇಕಿದೆ ಎಂದು ಮೂಲಗಳು ತಿಳಿಸಿವೆ.

ಜನರ ವಿಶ್ವಾಸ ಗಳಿಸಲು ಬಿಜೆಪಿ ಯಶಸ್ವಿ
ದೇಶದಲ್ಲಿ ಬಿಜೆಪಿ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳಿಪಟವಾಗಿದ್ದು, ಮುಂದಿನ ದಿನಗಳು ಬಿಜೆಪಿಯದ್ದಾಗಿದೆ ಎಂದು ರೋಣ ಮತಕ್ಷೇತ್ರದ ಡಂಬಳ ಮಂಡಳ ಅಧ್ಯಕ್ಷ ರವಿ ಕರಿಗಾರ ಹೇಳಿದರು.ದೇಶದ ರಕ್ಷಣೆ ಹಾಗೂ ಅಭಿವೃದ್ಧಿಗೆ ಬಿಜೆಪಿ ಅಧಿಕಾರದಲ್ಲಿರಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಆಡಳಿತವನ್ನು ಒಪ್ಪಿ ವಿವಿಧ ರಾಷ್ಟ್ರಗಳು ನಮ್ಮ ದೇಶದ ಸ್ನೇಹ ಬಯಸುತ್ತಿವೆ. ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ, ಗೋವಾ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯ ಗಳಿಸಿದೆ. ಈ ಫಲಿತಾಂಶ ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು.