Asianet Suvarna News Asianet Suvarna News

Free Hindu Temples: ಸರ್ಕಾರ ದೇವಾಲಯಗಳನ್ನು ಸಂಘ ಪರಿವಾರದ ಕಾರ‍್ಯಕರ್ತರಿಗೆ ಹಂಚಲು ಹೊರಟಿದೆ: ಡಿಕೆಶಿ!

*ದೇಗುಲಕ್ಕೆ ಕೈಹಾಕಿದರೆ ಬಿಜೆಪಿ ಸರ್ಕಾರ ಸುಟ್ಟು ಭಸ್ಮ!
*ಜನಪರವಾದ ಒಂದೇ ಒಂದು ಯೋಜನೆಯನ್ನು ನೀಡಲಿಲ್ಲ
*ಸಿಎಂಗೆ ಜನ ಉತ್ತರ ಕೊಡುತ್ತಿದ್ದಾರೆ: ಡಿಕೆ ಶಿವಕುಮಾರ್

BJP plannig to handover the temples are to RSS and Sangha Parivard activists DK Shivakumar mnj
Author
Bengaluru, First Published Jan 1, 2022, 7:22 AM IST

ಬೆಂಗಳೂರು (ಜ. 1): ರಾಜ್ಯದ ದೇವಾಲಯಗಳು (Temples) ಜನರ ಆಸ್ತಿ. ಸರ್ಕಾರವು ಈ ಆಸ್ತಿಯನ್ನು ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ (RSS) ವಹಿಸಲು ಮುಂದಾಗಿದ್ದು, ರಾಜ್ಯದ ಜನತೆ ಹಾಗೂ ದೇವರು ಇವರನ್ನು ಕ್ಷಮಿಸುವುದಿಲ್ಲ. ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಹಿಂದೂ ವಿರೋಧಿ ಬಿಜೆಪಿ ಸರ್ಕಾರ ಸುಟ್ಟು ಭಸ್ಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D K Shivakumar) ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರು ಹಾಗೂ ದೇವಾಲಯಗಳನ್ನೇ ಮಾರಲು ಹೊರಟಿರುವ ನೀವು ಎಂತಹ ಕ್ರೂರ ಕೃತ್ಯಕ್ಕೆ ಕೈಹಾಕಿದ್ದೀರಿ ಎಂಬುದನ್ನು ನೋಡಿಕೊಳ್ಳಿ. ದೇವಾಲಯಗಳು ನೂರಾರು ವರ್ಷದ ಆಸ್ತಿ. ಇದನ್ನು ತಮ್ಮ ಕಾರ್ಯಕರ್ತರಿಗೆ ಹಂಚಲು ಬಿಜೆಪಿ ಸರ್ಕಾರ ಹೊರಟಿದೆ. ಈ ರೀತಿ ಮಾಡಿದರೆ ಜನ ತಮಗೆ ಮತ ನೀಡುತ್ತಾರೆ ಎಂಬ ಭ್ರಮೆಯಿಂದ ಮುಖ್ಯಮಂತ್ರಿಗಳು ಹೊರಬರಬೇಕು ಎಂದು ಕಿಡಿಕಾರಿದರು.

ಜನಪರವಾದ ಒಂದೇ ಒಂದು ಯೋಜನೆಯನ್ನು ನೀಡಲಿಲ್ಲ!

ನಾವು ಹಿಂದೂ ಧರ್ಮ ಹಾಗೂ ಸಂಸ್ಕೃತಿಯಲ್ಲಿ ನಂಬಿಕೆ ಇಟ್ಟಿರುವವರು. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನಪರವಾದ ಒಂದೇ ಒಂದು ಯೋಜನೆಯನ್ನು ನೀಡಲಿಲ್ಲ. ಈಗ ಚುನಾವಣೆಯಲ್ಲಿ ಸೋಲುತ್ತಿದ್ದೇವೆ ಎಂಬ ಕಾರಣಕ್ಕೆ ಇವರು ಗೋಹತ್ಯೆ, ಮತಾಂತರ ನಿಷೇಧ, ದೇವಾಲಯಗಳ ಸ್ವಾಯತ್ತತೆ ಕಾನೂನು ತರಲು ಮುಂದಾಗಿದ್ದಾರೆ. ಚುನಾವಣೆ ಸೋಲನ್ನು ಮರೆಮಾಚಲು ಹಾಗೂ ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದು, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ. ಜ.4ರಂದು ಪಕ್ಷದ ನಾಯಕರ ಸಭೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಸಿಎಂಗೆ ಜನ ಉತ್ತರ ಕೊಡುತ್ತಿದ್ದಾರೆ

ಬಸವರಾಜ ಬೊಮ್ಮಾಯಿ‌ (Basvaraj Bommai) ಅವರು ಮುಖ್ಯಮಂತ್ರಿ ಆಗಿರುವ ಸಂತೋಷದಲ್ಲಿ ತೇಲಾಡುತ್ತಿದ್ದಾರೆ. ಅವರಿಗೆ ಜನರು ಈಗಾಗಲೇ ಉತ್ತರ ಕೊಡುತ್ತಿದ್ದು, ಮುಂದೆಯೂ ನೀಡುತ್ತಾರೆ ಎಂದೂ ಡಿ.ಕೆ.ಶಿವಕುಮಾರ್‌ ಹೇಳಿದರು.

ನಾವು ದೇವಾಲಯಗಳನ್ನು ಭಕ್ತರಿಗೆ ನೀಡುತ್ತಿದ್ದೇವೆ. ಡಿ.ಕೆ.ಶಿವಕುಮಾರ್‌ ಅವರು ಬೆಕ್ಕಿನ ಕನಸಲ್ಲಿ ಇಲಿ ಕಂಡಂತಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಬಗ್ಗೆ ಏನಾದರೂ ಹೇಳಲಿ, ನನ್ನನ್ನು ಬೆಕ್ಕು, ಇಲಿ, ಹುಲಿ ಯಾವುದರ ಕಣ್ಣಿಗಾದರೂ ಹಾಕಲಿ. ಸಗಣಿಗೆ ಗರಿಕೆ ಚುಚ್ಚಿ ಪಿಳ್ಳಾರತಿ ಮಾಡಿದರೆ ಗಣೇಶ ಆಗುತ್ತದೆ. ಇಲಿ ಗಣೇಶನ ವಾಹನ. ಅವರು ಏನೇ ಹೇಳಿದರೂ ಹಿಂದೂ ದೇವಾಲಯ ಮಾರಾಟ ಮಾಡಲು ಬಿಡಲ್ಲ ಎಂದರು.

ಡಿಕೆಶಿ ಯಾವಾಗಲೂ ಹಿಂದುತ್ವದ ವಿರುದ್ಧವೇ ಚಿಂತಿಸುತ್ತಾರೆ

ಬೆಕ್ಕಿನ ಕನಸಲ್ಲಿ ಸದಾ ಇಲಿ ಎಂಬಂತೆ ಡಿ.ಕೆ.ಶಿವಕುಮಾರ್‌(DK Shivakumar) ಯಾವಾಗಲೂ ಹಿಂದುತ್ವದ(Hindutva) ವಿರುದ್ಧವೇ ಚಿಂತಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಟಾಂಗ್ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಹಿಂದು ದೇಗುಲಗಳನ್ನು(Temples) ಸ್ವತಂತ್ರಗೊಳಿಸಿ ಬಿಜೆಪಿ ಕಾರ್ಯಕರ್ತರಿಗೆ ಹಸ್ತಾಂತರಿಸಲು ಸರಕಾರ ಹೊರಟಿದೆ ಎಂದು ಡಿ.ಕೆ.ಶಿವಕುಮಾರ್‌ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದರು.

ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಸದಾ ಹಿಂದುತ್ವದ ವಿರುದ್ಧವೇ ಚಿಂತನೆ ನಡೆಸುತ್ತಾರೆ. ಬೆಕ್ಕಿನ ಕನಸಲ್ಲಿ ಸದಾ ಇಲಿ ಎಂಬ ಮಾತಿನಂತೆ, ಇವರು ಕನಸು ಮನಸಿನಲ್ಲೂ ಹಿಂದು ಧಾರ್ಮಿಕ ಭಾವನೆಯ ವಿರುದ್ಧ ಚಿಂತನೆ ನಡೆಸುತ್ತಾರೆ. ದೇಗುಲಗಳನ್ನು ಸರಕಾರದ ಹಿಡಿತದಿಂದ ಸ್ವತಂತ್ರಗೊಳಿಸುವುದು ಎಂದರೆ ಅದನ್ನು ಖಾಸಗಿ ಪರಭಾರೆ ಮಾಡುವುದಲ್ಲ. ಎಲ್ಲದಕ್ಕೂ ಒಂದು ವ್ಯವಸ್ಥೆ ಇರುತ್ತದೆ. ಇಂಥ ಹೇಳಿಕೆ ನೀಡುವ ಮೂಲಕ ಶಿವಕುಮಾರ್‌ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:

1) Temple Politics: ಡಿಕೆಶಿ ಯಾವಾಗಲೂ ಹಿಂದುತ್ವದ ವಿರುದ್ಧವೇ ಚಿಂತಿಸುತ್ತಾರೆ, ಸಿಎಂ ತಿರುಗೇಟು

2) ಇಷ್ಟವಿದ್ರೆ ಕೆಲ್ಸ ಮಾಡಿ, ಇಲ್ಲಾಂದ್ರೆ ಬೇರೆ ದಾರಿ ನೋಡ್ಕೊಳ್ಳಿ: ಅತಿಥಿ ಉಪನ್ಯಾಸಕರಿಗೆ ಸಚಿವ ನಾಗೇಶ್‌ ತರಾಟೆ!

3) Free Hindu Temples: ಡಿಕೆಶಿ ವಿರುದ್ಧ ಹರಿಹಾಯ್ದ ಸಚಿವ ಕೋಟಾ

Follow Us:
Download App:
  • android
  • ios