Asianet Suvarna News Asianet Suvarna News

ಡಿಕೆಶಿ ಪ್ರಾಮಾಣಿಕರಾಗಿದ್ದರೆ ಸಂಪುಟ ನಿರ್ಧಾರ ವಿರೋಧಿಸಬೇಕಿತ್ತು: ವಿಜಯೇಂದ್ರ

ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿದ್ದರೆ ಸಚಿವ ಸಂಪುಟ ಕೈಗೊಂಡ ತೀರ್ಮಾವನ್ನು ವಿರೋಧಿಸಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

BJP President BY Vijayendra Slams On DK Shivakumar gvd
Author
First Published Nov 26, 2023, 1:30 AM IST

ಬೆಂಗಳೂರು (ನ.26): ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿದ್ದರೆ ಸಚಿವ ಸಂಪುಟ ಕೈಗೊಂಡ ತೀರ್ಮಾವನ್ನು ವಿರೋಧಿಸಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧಿಸದೆ ಇರುವುದರಿಂದ ಶಿವಕುಮಾರ್‌ ತಪ್ಪು ಮಾಡಿದ್ದಾರೆ ಎಂಬುದಾಗಿ ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಪ್ರಕರಣದ ಅನುಮತಿಯನ್ನು ವಾಪಸ್‌ ತೆಗೆದುಕೊಂಡಿರುವ ಸರ್ಕಾರದ ತೀರ್ಮಾನವು ಸಂಪೂರ್ಣ ಕಾನೂನು ಬಾಹಿರ. ಅವರಿಗೆ ಕಾನೂನಿನ ಭಯ ಇದೆಯಾ ಎಂದು ಖಾರವಾಗಿ ಪ್ರಶ್ನಿಸಿದರು.

ಸರ್ಕಾರ ಕೈಗೊಂಡ ತೀರ್ಮಾನದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸಲಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ತೀರ್ಮಾನ ರಾಜಕೀಯ ಪ್ರೇರಿತ ಆಗಿರಲಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಆಗಿದೆ ಎನ್ನುವ ಮಾಹಿತಿ ಆಧಾರದಲ್ಲಿ ಹಿಂದೆ ಸಿಬಿಐಗೆ ತನಿಖೆಗೆ ಅನುಮತಿ ನೀಡಲಾಗಿತ್ತು. ಸರ್ಕಾರದ ನಿರ್ಧಾರ ದುರದೃಷ್ಟಕರ. ಸರ್ಕಾರ ಕಾನೂನಿಗೆ ವಿರುದ್ಧವಾಗಿ ಈ ನಿರ್ಣಯ ಕೈಗೊಂಡಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಉಳಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ಸಿಬಿಐ ತನಿಖೆ ವಾಪಸ್‌ ಕಾನೂನು ಬಾಹಿರ: ಸಂಸದ ಬಿ.ವೈ.ರಾಘವೇಂದ್ರ

ಅಧಿವೇಶನದಲ್ಲಿ ಜಮೀರ್‌ ವಿರುದ್ಧ ಹೋರಾಟ: ಸ್ಪೀಕರ್ ಸ್ಥಾನಕ್ಕೆ ಜಾತಿ, ಧರ್ಮದ ಬಣ್ಣ ಹಚ್ಚಿದ ಶಾಸಕ ಜಮೀರ್‌ ಅಹಮದ್‌ನನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿರುವುದೇ ಹೆಚ್ಚು, ಎಲ್ಲರೂ ತಲೆತಗ್ಗಿಸುವ ಕೆಲಸ ಮಾಡಿರುವ ಅವರಿಂದ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಪಡೆಯಬೇಕಿತ್ತು. ಡಿ.4ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಜಮೀರ್‌ ಅಹಮದ್‌ ಹೇಗೆ ಭಾಗವಹಿಸುತ್ತಾರೆ ಎಂಬುದನ್ನು ನೋಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಮೀರ್‌ ಅಹಮದ್ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಸದನದಲ್ಲಿ ಹೋರಾಟ ಮಾಡುವುದಾಗಿ ಹೇಳಿದರು. 

ಡಿಕೆಶಿ ಕೇಸ್‌: ಸಚಿವ ಸಂಪುಟದ ತೀರ್ಮಾನ ಕಾನೂನಾತ್ಮಕವಾಗಿದೆ: ಸಚಿವ ಮಹದೇವಪ್ಪ

ಯಾರೂ ಪಕ್ಷ ಬಿಡೋದಿಲ್ಲ: ನಾವೆಲ್ಲರೂ ಒಗ್ಗಟ್ಟಿನಿಂದ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನೂ ಗೆಲ್ಲಿಸಿಕೊಟ್ಟು ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲು ಶಕ್ತಿ ನೀಡುತ್ತೇವೆ. ಹಿಂದೆ ಏನಾಗಿದೆ ಎನ್ನುವುದನ್ನು ಬಿಟ್ಟುಬಿಡಿ, ಮುಂದೆ ಯಾರೂ ಪಕ್ಷ ಬಿಡುವುದಿಲ್ಲ. ಯಾವ ಮುಖಂಡರು, ಕಾರ್ಯಕರ್ತರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಈಗಾಗಲೇ ಪಕ್ಷ ಬಿಟ್ಟು ಹೋದವರನ್ನು ಮರಳಿ ಕರೆತರುತ್ತೇವೆ ಎದು ವಿಜಯೇಂದ್ರ ಹೇಳಿದರು. ಲಕ್ಷ್ಮಣ ಸವದಿಯನ್ನು ಪಕ್ಷಕ್ಕೆ ಕರೆತರುತ್ತೀರಾ ಎಂಬ ಪ್ರಶ್ನೆಗೆ ಅವರನ್ನು ನಾವಿನ್ನೂ ಪಕ್ಷಕ್ಕೆ ಕರೆದೇ ಇಲ್ಲ ಎಂದ ಅವರು, ಯಾರೋ ಒಬ್ಬರು ಪಕ್ಷ ಬಿಟ್ಟು ಹೋದಾಕ್ಷಣ ಪಕ್ಷಕ್ಕೆ ಹಿನ್ನಡೆಯಾಗುವುದಿಲ್ಲ. ಪುತ್ತೂರಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಬಿಕ್ಕಟ್ಟನ್ನು ಪಕ್ಷ ಹಿರಿಯರ ಸೂಚನೆ ಪಡೆದುಕೊಂಡು ಬಗೆಹರಿಸುತ್ತೇವೆ ಎಂದರು.

Latest Videos
Follow Us:
Download App:
  • android
  • ios