Bagalakote: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಸಿದ್ದರಾಮಯ್ಯ ಕಾರ್ಯಕ್ರಮ ರದ್ದು
ಬಾಗಲಕೋಟೆಯಲ್ಲಿ ಡಿ.15ರಂದು ಆಯೋಜನೆಯಾಗಬೇಕಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕ್ರಮ ಸಮಯದ ಅಭಾವದಿಂದ ನಾಲ್ಕು ದಿನಗಳ ಮುಂಚೆಯೇ ರದ್ದು ಮಾಡಲಾಗಿದೆ ಎಂದು ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ (ಡಿ.11) : ಬಾಗಲಕೋಟೆಯಲ್ಲಿ ಡಿ.15ರಂದು ಆಯೋಜನೆಯಾಗಬೇಕಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕ್ರಮ ಸಮಯದ ಅಭಾವದಿಂದ ನಾಲ್ಕು ದಿನಗಳ ಮುಂಚೆಯೇ ರದ್ದು ಮಾಡಲಾಗಿದೆ ಎಂದು ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತಾರೂಢ ಬಿಜೆಪಿ ಪಕ್ಷದಿಂದ ಉತ್ತರ ಕರ್ನಾಟಕದ ಜಿಲ್ಲೆಗಳನ್ನು ಒಳಗೊಂಡಂತೆ ಒಟ್ಟು 10 ಜಿಲ್ಲೆಗಳ ಜಿಲ್ಲಾ ಬಿಜೆಪಿ ಕಚೇರಿಗಳನ್ನು ಉದ್ಘಾಟಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿತ್ತು. ಈ ಎಲ್ಲ ಜಿಲ್ಲಾ ಕಚೇರಿಗಳನ್ನು ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಉದ್ಘಾಟನೆ ಮಾಡುವುದಾಗಿ ಒಪ್ಪಿಕೊಂಡಿದ್ದರು. ಆದರೆ, ಬಿಡುವಿಲ್ಲದ ಕಾರ್ಯಕ್ರಮಗಳಿಂದಾಗಿ ಸಮಯದ ಅಭಾವದಿಂದ ನಾಲ್ಕು ದಿನಗಳ ಮುಂಚಿತವಾಗಿ ಕಚೇರಿಗಳ ಉದ್ಘಾಟನೆ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.
ಮಳೆ: ಜೆಡಿಎಸ್ ಪಂಚರತ್ನ ಯಾತ್ರೆ 4 ದಿನ ಮುಂದೂಡಿಕೆ, ಕುಮಾರಸ್ವಾಮಿ
ಕೊಪ್ಪಳದಲ್ಲಿ ನಡೆಸಲು ನಿರ್ಧಾರ: ಬಾಗಲಕೋಟೆಯಲ್ಲಿ ವರ್ಚುವಲ್ ಮೂಲಕ ಬಿಜೆಪಿ ಕಚೇರಿ ಉದ್ಘಾಟನೆಗೆ ಸಮಯದ ಅಭಾವದ ಕಾರಣಕ್ಕೆ ರದ್ದು ಮಾಡಲಾಗಿದ್ದು, ಅದೇ ಕಾರ್ಯಕ್ರಮವನ್ನು ಕೊಪ್ಪಳದಿಂದ ನಡೆಸಲು ಜೆ.ಪಿ. ನಡ್ಡಾ ಅವರು ತೀರ್ಮಾನಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೊಪ್ಪಳದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಬರಲಿದ್ದು, ಈ ವೇಳೆ ಬಾಗಲಕೋಟೆಯಿಂದ ನಿಗದಿಯಾಗಿದ್ದ 10 ಜಿಲ್ಲೆಗಳ ಬಿಜೆಪಿ ಕಚೇರಿಗಳ ಉದ್ಘಾಟನೆಯನ್ನು ಇಲ್ಲಿಯೇ ನೆರವೇರಿಸಲಿದ್ದಾರೆ. ಕೊಪ್ಪಳ ಕಾರ್ಯಕ್ರಮವನ್ನು ಪೂರ್ಣಗೊಳಿಸಿ ಇಲ್ಲಿಂದ ಹೈದರಾಬಾದ್‌ಗೆ ತೆರಳಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
ದೆಹಲಿ ಭೇಟಿ ಹಿನ್ನೆಲೆ ಸ್ವಕ್ಷೇತ್ರ ಪ್ರವಾಸ ಮುಂದೂಡಿಕೆ: ರಾಜ್ಯದ 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ವಕ್ಷೇತ್ರದ ಬಾದಾಮಿಗೆ ನಾಳೆಯಿಂದ ೩ ದಿನಗಳ ಪ್ರವಾಸ ಹಮ್ಮಿಕೊಂಡಿದ್ದರು. ಆದರೆ ದಿಢೀರ್ ದೆಹಲಿಗೆ ಪ್ರವಾಸ ಮಾಡಬೇಕಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ವಕ್ಷೇತ್ರ ಪ್ರವಾಸವನ್ನು ಮುಂದೂಡಿದ್ದಾರೆ. ಇನ್ನು ಪ್ರವಾಸದ ದಿನಾಂಕವನ್ನು ಡಿ.14 ಮತ್ತು 15 ರಂದು ನಿಗದಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸೆಲ್ಫಿ ತೆಗೆಯಲು ಹೋಗಿ ಕ್ವಾರಿ ಕೆರೆಗೆ ಬಿದ್ದ ವಧು, ಮದುವೆ ಮುಂದೂಡಿಕೆ!
ಜನಸಂಕಲ್ಪ ಕಾರ್ಯಕ್ರಮವೂ ರದ್ದು: ರಾಜ್ಯದಲ್ಲಿ ಮ್ಯಾಂಡೌಸ್ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರವಾದ ಮಳೆ ಹಾಗೂ ಚಳಿಯ ವಾತಾವರಣ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸಂಕಲ್ಪ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಉಳಿದಂತೆ ಜೆಡಿಎಸ್‌ನ ಒಂಚರತ್ನ ರಥಯಾತ್ರೆಯನ್ನು ಕೂಡ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕಾಂಗ್ರೆಸ್‌ನ ಹಲವು ಕಾರ್ಯಕ್ರಮಗಳು ರದ್ದಾಗಿವೆ. ಚುನಾವಣೆಗೆ ಇನ್ನು ನಾಲ್ಕೈದು ತಿಂಗಳು ಬಾಕಿಯಿದ್ದು, ಎಲ್ಲ ಪಕ್ಷಗಳಿಂದ ಮತದಾರರನ್ನು ಸೆಳೆಯುವ ಭರಪೂರ ಸಿದ್ಧತೆಗಳು ನಡೆಯುತ್ತಿವೆ.