ರಂಗೇರಿದ ಪಾಲಿಕೆ ಚುನಾವಣೆ: ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟಿಸಿದ ಬಿಜೆಪಿ
*ರಂಗೇರಿದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ
* ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
* ಹುಬ್ಬಳ್ಳಿ-ಧಾರವಾಡ ನಗರ ಘಟಕದ ಬಿಜೆಪಿ ಅಧ್ಯಕ್ಷ ಅರವಿಂದ್ ಬೆಲ್ಲದ್ ಅವರಿಂದ ಪಟ್ಟಿ ಪ್ರಕಟ
ಧಾರವಾಡ, (ಆ.22): ಸೆಪ್ಟೆಂಬರ್ 3ರಂದು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಪ್ರಕಟಿಸಿದೆ.
ಹುಬ್ಬಳ್ಳಿ-ಧಾರವಾಡ ನಗರ ಘಟಕದ ಬಿಜೆಪಿ ಅಧ್ಯಕ್ಷ ಅರವಿಂದ್ ಬೆಲ್ಲದ್ ಅವರು ಪಟ್ಟಿ ಪ್ರಕಟಿಸಿದ್ದು, ಬಿಜೆಪಿಯ 3ನೇ ಪಟ್ಟಿಯಲ್ಲಿ 23 ಅಭ್ಯರ್ಥಿಗಳ ಹೆಸರುಗಳು ಪ್ರಕಟಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ
ಇನ್ನು ನಾಮಪತ್ರ ಸಲ್ಲಿಸಲು ನಾಳೆಯೇ (ಆ.23) ಕೊನೆ ದಿನವಾಗಿದೆ. ಇದುವರೆಗೆ ಒಟ್ಟು 64 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದ್ದು,
16 ವಾರ್ಡ್ಗಳ ಅಭ್ಯರ್ಥಿ ಹೆಸರನ್ನು ಪ್ರಕಟಿಸುವುದು ಬಾಕಿಯಿದೆ.
ಆಗಸ್ಟ್ 23 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.