Karnataka Politics: ಮಂಗಳೂರಲ್ಲಿ ಬಿಜೆಪಿ ಪರಿಶಿಷ್ಟಜಾತಿ ಸಮಾವೇಶ

ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ನೀಡಿದ ಹಕ್ಕುಗಳನ್ನು ನಾವೀಗ ಅನುಭವಿಸುವ ಕಾಲಘಟ್ಟದಲ್ಲಿ ಇದ್ದೇವೆ. ಆದರೆ ಅದರ ಮಹತ್ವದ ಅರಿವು ಹೆಚ್ಚಿನವರಿಗೆ ಇಲ್ಲ.ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್‌. ಅಂಗಾರ ಹೇಳಿದ್ದಾರೆ.

BJP scheduled caste convention in Mangalore rav

ಮಂಗಳೂರು (ನ.13) : ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ನೀಡಿದ ಹಕ್ಕುಗಳನ್ನು ನಾವೀಗ ಅನುಭವಿಸುವ ಕಾಲಘಟ್ಟದಲ್ಲಿ ಇದ್ದೇವೆ. ಆದರೆ ಅದರ ಮಹತ್ವದ ಅರಿವು ಹೆಚ್ಚಿನವರಿಗೆ ಇಲ್ಲ. ನಾವು ಇತಿಹಾಸವನ್ನು ಅರಿತುಕೊಂಡು ನಮ್ಮ ಹಕ್ಕುಗಳ ಅನುಷ್ಠಾನದ ಮೂಲಕ ನಮ್ಮ ಕರ್ತವ್ಯಗಳನ್ನು ಕೂಡ ಪಾಲಿಸುವ ಕೆಲಸವಾಗಬೇಕು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್‌. ಅಂಗಾರ ಹೇಳಿದ್ದಾರೆ.

ನಗರದ ಉರ್ವಸ್ಟೋರ್‌ನ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ದ.ಕ. ಭಾರತೀಯ ಜನತಾ ಪಕ್ಷದ ಎಸ್‌ಸಿ ಮೋರ್ಚಾ ವತಿಯಿಂದ ಪರಿಶಿಷ್ಟಜಾತಿ ಸಮಾವೇಶ, ಪುಸ್ತಕ ಬಿಡುಗಡೆ, ಅಂಬೇಡ್ಕರ್‌ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೀನು ಉತ್ಪಾದನೆ ಹಾಗೂ ರಫ್ತಿನಲ್ಲಿ ರಾಜ್ಯವನ್ನು ನಂಬರ್ ಒನ್ ಮಾಡುವ ಉದ್ದೇಶ: ಸಚಿವ ಅಂಗಾರ

ಸಂವಿಧಾನದಿಂದ ಗಳಿಸಿದ ಹಕ್ಕಿನ ಮೂಲಕ ಎಲ್ಲ ಕ್ಷೇತ್ರಗಳಲ್ಲೂ ಸಮಾಜದ ಅಭಿವೃದ್ಧಿಗೆ ದುಡಿಯುವುದು ಅಗತ್ಯ ಎಂದರು.

ಇದೇ ಸಂದರ್ಭ ಖ್ಯಾತ ಕವಿ ದಿ. ಸಿದ್ಧಲಿಂಗಯ್ಯ ಸ್ಮರಣಾರ್ಥ ರಚಿತವಾದ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಪರಿಶಿಷ್ಟಜಾತಿಯಲ್ಲಿರುವ ವಿವಿ ಉಪಜಾತಿಗಳಲ್ಲಿರುವ ಪ್ರತಿಭಾವಂತ ಸಾಧಕರನ್ನು ಗುರುತಿಸಿ ಸನ್ಮಾನಿಸಿ, ಅಂಬೇಡ್ಕರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಶಾಸಕರಾದ ನೆಹರು ಓಲೇಕಾರ್‌, ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ವೈ. ಭರತ್‌ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ, ಪ್ರತಾಪ್‌ ಸಿಂಹ ನಾಯಕ್‌, ಮಂಗಳೂರು ಮೇಯರ್‌ ಜಯಾನಂದ ಅಂಚನ್‌, ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಅಧ್ಯಕ್ಷ ನಾಗೇಶ್‌, ರಾಜ್ಯ ಎಸ್‌ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಕೋಶಾಧಿಕಾರಿ ನಾಗೇಶ್‌, ಮನಪಾ ಸದಸ್ಯ ಸುಧೀರ್‌ ಶೆಟ್ಟಿಕಣ್ಣೂರು, ಎಸ್‌ಸಿ ಮೋರ್ಚಾ ಪ್ರಭಾರಿ ಮಂಗಳ ಆಚಾರ್ಯ, ಬಿಜೆಪಿ ಜಿಲ್ಲಾ ಸಹ ಪ್ರಭಾರಿ ರಾಜೇಶ್‌ ಕಾವೇರಿ, ಬಿಜೆಪಿ ಜಿಲ್ಲಾ ಪ್ರಭಾರಿ ಭಾರತೀಶ್‌, ಬಿಜೆಪಿ ವಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಇದ್ದರು.

ಬಿಜೆಪಿ ಬೆಂಬಲಿಸಿದರಷ್ಟೇ Minister S Angara ಕ್ಷೇತ್ರದಲ್ಲಿ ಸರ್ಕಾರಿ ಸೌಲಭ್ಯ: ಆಡಿಯೋ ವೈರಲ್!

ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ವಿನಯ ನೇತ್ರ ದಡ್ಡಲ್‌ಕಾಡ್‌ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇದಕ್ಕೂ ಮೊದಲು ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಉರ್ವದ ಅಂಬೇಡ್ಕರ್‌ ಭವನದವರೆಗೆ ಮೆರವಣಿಗೆ ನಡೆಯಿತು.

Latest Videos
Follow Us:
Download App:
  • android
  • ios