ಬೆಂಗಳೂರು, 08): ಸಿಟಿ ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರವಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಸಿಟಿ ರವಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇದರ ಬೆನ್ನಲ್ಲೇ ರಾಷ್ಟ್ರೀಯ ಬಿಜೆಪಿ ಪ್ರಧಾನಿ ಕಾರ್ಯದರ್ಶಿಯಾಗಿರುವ ಸಿಟಿ ರವಿ ಅವರು ದಿಢೀರ್ ದೆಹಲಿಗೆ ತೆರಳಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಪೂರ್ತಿಯಾಗಿ ತೊಡಗಿಸಿಕೊಳ್ಳುವ ಸಲುವಾಗಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

'ಚುನಾವಣೆ ಸಮೀಕ್ಷೆಗಳು ಉಲ್ಟಾ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ' 

ಇನ್ನು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಸಿಟಿ ರವಿ, ಸಿಎಂ ಬದಲಾವಣೆ ಚಿಂತನೆ ಪಾರ್ಲಿಮೆಂಟ್ ಬೊರ್ಡ್ ಮುಂದೆ ಇಲ್ಲ. ಯಾಕೆ ಈ ಚರ್ಚೆಗಳು ಯಾಕೆ ಬರುತ್ತೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಸಿಎಂ ಬದಲಾವಣೆ ಹೇಳಿಕೆ ನೀಡುತ್ತಾರೆ. ನಮ್ಮ ಪಕ್ಷದ ಮಾಹಿತಿ ಅವರಿಗೆ ಹೇಗೆ ಗೊತ್ತು. ಆಡಳಿತ ವ್ಯವಸ್ಥೆ ಶೀತಿಲ ಮಾಡುವ ದುರುದ್ದೇಶದಿಂದಲೇ ಈ ರೀತಿಯ ಹೇಳಿಕೆ ನೀಡಿದ್ದಾರೆ. ಯತ್ನಾಳ್ ಕರೆಸಿ ಸಿಎಂ ಮಾತಾಡಿದ್ದಾರೆ. ಆತಂರಿಕವಾಗಿ ಏನು ಎಚ್ಚರಿಕೆ ನೀಡಬೇಕು ಅದನ್ನು ನೀಡಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಬೈ ಎಲೆಕ್ಷನ್‌ ಫಲಿತಾಂಶದ  ಬಗ್ಗೆ ಪ್ರತಿಕ್ರಿಯಿಸಿದ ಅವರು,  ಎರಡು ಬೈ ಎಲೆಕ್ಷನ್ ಜೊತೆಗೆ ನಾಲ್ಕು ಪರಿಷತ್ ಸ್ಥಾನಗಳನ್ನು ಗೆಲ್ಲಲ್ಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಸಿ.ಟಿ ರವಿಗೆ ಪಕ್ಷ ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿತ್ತು. ಅಷ್ಟೇ ಅಲ್ಲದೆ 5 ರಾಜ್ಯಗಳ ಉಸ್ತುವಾರಿಯನ್ನು ನೀಡಿದೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇದು ಮಹತ್ವದ ಜವಾಬ್ದಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಸಿ.ಟಿ ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆ ಅಂಗೀಕಾರಗೊಂಡಿರಲಿಲ್ಲ. ಇದೀಗ ಅಂದರೆ ಶನಿವಾರ ಸಂಜೆ ಅವರ ರಾಜೀನಾಮೆ ಅಂಗೀಕಾರಗೊಂಡಿದೆ.