ಬೆಳಗಾವಿ/ಬೆಂಗಳೂರು, (ನ.22): ಬಿಜೆಪಿಯ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆಗಲೇ ಕಾಂಗ್ರೆಸ್ ಹಾಗು ಬಿಜೆಪಿ ಗೆಲುವಿಗಾಗಿ ಕಾರ್ಯತಂತ್ರಗಳನ್ನು ಶುರುಮಾಡಿವೆ.

ಬಿಜೆಪಿ ಟಿಕೆಟ್‌ ಅನ್ನು ಸುರೇಶ್ ಅಂಗಡಿ ಅವರ ಕುಟುಂಬಕ್ಕೆ ನೀಡುವ ಬಗ್ಗೆ ಚರ್ಚೆಗಳು ನಡೆದಿವೆ. ಅಲ್ಲದೇ ಇದರ ಮಧ್ಯೆ ಅವರ ಅಂಗಡಿ ಅವರ ಬೀಗರಾದ ಹಾಲಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್‌ ಹೆಸರು ಸಹ ಕೇಳಿಬಂದಿದ್ದು, ಅಚ್ಚರಿ ಮೂಡಿಸಿದೆ.

ಹೌದು....ಸುರೇಶ್ ಅಂಗಡಿ ಅವರ ಬೀಗರಾದ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಲ್ಲಿ ಕೊಂಚ ಮಟ್ಟಿಗೆ ಹಿಡಿತವಿದೆ. ಅದರಲ್ಲೂ ಸಹ ಜಾತಿಯೂ ಸಹ ಇರುವುದರಿಂದ ಜಗದಿಶ್ ಶೆಟ್ಟರ್‌ ಅವರೇ ಸೂಕ್ತ ಮತ್ತು ಪ್ರಬಲರಾಗಿದ್ದಾರೆ ಎನ್ನುವುದು ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ತೇಲಿ ಬಂತು ಅಚ್ಚರಿ ಹೆಸರು

ಒಂದು ವೇಳೆ ಶೆಟ್ಟರ್ ಹಾಗೂ ಸುರೇಶ್ ಅಂಗಡಿ ಕುಟುಂಬವನ್ನು ಬಿಟ್ಟರೇ ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೆಸರು ಸಹ ಹರಿದಾಡುತ್ತಿದೆ. ಒಟ್ಟಿನಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯ ಪ್ರಬಲ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡನ್ ಚಿಂತನೆ ನಡೆಸಿದೆ.

ಇನ್ನು ಕಾಂಗ್ರೆಸ್‌ನಿಂದ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರು ಕೇಳಿ ಬಂದಿದೆ. ಈ ಬಗ್ಗೆ ಅವರೂ ಸಹ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳುವ ಮೂಲಕ ಸ್ಪರ್ಧೆಗೆ ರೆಡಿ ಎಂದಿದ್ದಾರೆ.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಣಕ್ಕಿಳಿಯುಲು ರೆಡಿ ಎಂದ ಕೈ ಕಲಿ..!

ಶನಿವಾರ  ಬೆಳಗಾವಿಯಲ್ಲಿ ಎಂಬಿ ಪಾಟೀಲ್ ನೇತೃತ್ವದ ಸಮಿತಿ ನಡೆಸಿದ ಸಭೆಯಲ್ಲಿ ಜಿಲ್ಲೆಯ ನಾಯಕರು ಸತೀಶ್ ಜಾರಕಿಹೊಳಿ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ಅಭ್ಯರ್ಥಿ ಆಯ್ಕೆ ಸಮಿತಿಯ ಅಧ್ಯಕ್ಷ ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ದು, ಈ ಬಗ್ಗೆ ಇನ್ನೊಂದು ಸುತ್ತಿನ ಸಭೆ ನಡೆಸಿ ಅಂತಿಮವಾಗಿ ವರದಿಯನ್ನು ಕೆಪಿಸಿಸಿಗೆ ನೀಡಲಾಗುವುದು ಎಂದಿದ್ದಾರೆ.