Asianet Suvarna News Asianet Suvarna News

ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು: ಸಂಸದ ಬಿ.ವೈ.ರಾಘವೇಂದ್ರ

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಭಾರತೀಯ ಜನತಾ ಪಕ್ಷದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ 150 ಕ್ಷೇತ್ರಗಳನ್ನು ಗೆಲ್ಲುವ ಗಿರಿಯೊಂದಿಗೆ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. 

BJP should come back to power for the development of the state Says MP BY Raghavendra gvd
Author
First Published Apr 1, 2023, 12:30 AM IST

ಕೋಲಾರ (ಏ.01): ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಭಾರತೀಯ ಜನತಾ ಪಕ್ಷದ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ 150 ಕ್ಷೇತ್ರಗಳನ್ನು ಗೆಲ್ಲುವ ಗಿರಿಯೊಂದಿಗೆ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ನಗರದ ಹೊರವಲಯದ ರತ್ನಾ ಕನ್ವೇಕ್ಷಷನ್‌ ಹಾಲ್‌ನಲ್ಲಿ ಜಿಲ್ಲೆಯ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಲು ತೀರ್ಮಾನಿಸಿದೆ. ಜಿಲ್ಲೆ ಹಿಂದುಳಿದಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿದ್ದಾರೆ. ಬಿಜೆಪಿ ಮತ್ತು ಮುಂಬರುವ ಬಿಜೆಪಿ ಸರ್ಕಾರ ಜಿಲ್ಲೆಗೆ ದೊಡ್ಡ ಮಟ್ಟದ ಕೊಡುಗೆ ನೀಡಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ ಕಂಡುಬರುತ್ತಿದ್ದು, ಕಾಂಗ್ರೆಸ್‌ ಶಾಸಕರು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ಅಭಿವೃದ್ಧಿ ಕಡೆಗಣಿಸಿ ಸ್ವಹಿತಕ್ಕಾಗಿ ಶಾಸಕ ಸ್ಥಾನ ದುರುಪಯೋಗ ಮಾಡಿಕೊಂಡಿದ್ದಾರೆ. ಹೀಗಾಗಿಯೇ ಎಲ್ಲ ಕಡೆ ಬಿಜೆಪಿ ಗೆಲುವಿಗೆ ಪೂರಕ ವಾತಾವರಣವಿದೆ. ಜೆಡಿಎಸ್‌, ಕಾಂಗ್ರೆಸ್‌ ಪೈಪೋಟಿ ನೀಡಲಿವೆಯಾದರೂ, ಜನರು ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ತೀರ್ಮಾನಿಸಿರುವುದರಿಂದ ಆರೂ ಕ್ಷೇತ್ರಗಳಲ್ಲಿ ಪ್ರಬಲವಾಗಿ ಪೈಪೋಟಿ ನೀಡಲು ಸಜ್ಜಾಗಿದ್ದೇವೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಕಲಘಟಗಿ ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಬಿಗ್ ಫೈಟ್: ಹಾಲಿ‌ ಶಾಸಕನ ವಿರುದ್ಧ ಭುಗಿಲೆದ್ದ ಅಸಮಾಧಾನ

ಗುಪ್ತ ಮತದಾನ: ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲೆಯ ಆರೂ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಿಂದ ಮತದಾನದ ಮೂಲಕ ಅಭಿಪ್ರಾಯ ಸಂಗ್ರಹಿಸಲಾಯಿತು. ಪ್ರತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗಾಗಿ ಒಂದೊಂದೇ ಕ್ಷೇತ್ರದ ಪದಾಧಿಕಾರಿಗಳು ನಿಗದಿತ ಸಮಯದಲ್ಲಿ ಬಂದು ಗುಪ್ತ ಮತದಾನದಲ್ಲಿ ಪಾಲ್ಗೊಂಡರು. ಸಂಜೆ 6 ಗಂಟೆ ನಂತರ ಕೋಲಾರ ಕ್ಷೇತ್ರದ ಅಭ್ಯರ್ಥಿಗಳ ಪರ ಮತದಾನ ನಡೆದಿದ್ದು, 240ಮಂದಿ ಮತ ಚಲಾಯಿಸಿದರು ಎನ್ನಲಾಗಿದೆ. ಮತದಾನದಲ್ಲಿ ಟಿಕೆಟ್‌ ಆಕಾಂಕ್ಷಿಗಳಾದ ವರ್ತೂರು ಆರ್‌.ಪ್ರಕಾಶ್‌, ಓಂಶಕ್ತಿ ಚಲಪತಿ ಮತ್ತಿತರರು ಪಾಲ್ಗೊಂಡಿದ್ದರು. ಪಕ್ಷದ ಮುಖಂಡ ಕೇಶವ ಪ್ರಸಾದ್‌, ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್‌, ಜಿತೇಂದ್ರ ರೆಡ್ಡಿ ಇದ್ದರು.

Chamarajanagar: ಏ.9ಕ್ಕೆ ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ?: ಸಫಾರಿಗೆ ಹೋಗ್ತಾರಂತೆ ಮೋದಿ

ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದೆ, ಈಗ ನನಗೆ ವಹಿಸಿರುವ ಕೆಲಸಕ್ಕೆ ಬದ್ಧನಾಗಿರುತ್ತೆನೆ. ಶಿಕಾರಿಪುರ ಯಡಿಯೂರಪ್ಪರಿಗೆ ಭವಿಷ್ಯಕೊಟ್ಟಕ್ಷೇತ್ರ. ನಾನು ಮೂರು ಬಾರಿ ಸಂಸದನಾಗಲು ಶಿವಮೊಗ್ಗ ಜನ ಆಶೀರ್ವಾದಿಸಿದ್ದಾರೆ. ಯುವ ಮುಖಂಡ ಬಿ.ವೈ.ವಿಜಯೇಂದ್ರ ಎಲ್ಲಿ ಸ್ಪರ್ಧೆ ಮಾಡಿದರೂ ಗೆಲ್ಲುವ ವಿಶ್ವಾಸವಿದೆ.
-ಬಿ.ವೈ.ರಾಘವೇಂದ್ರ, ಸಂಸದ

Follow Us:
Download App:
  • android
  • ios