ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಮಾಡಿಕೊಂಡು ಹೋಗುತ್ತೇನೆ ಅಷ್ಟೇ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು(ಜ.21): ಯತ್ನಾಳ್ ಇರಲಿ ಅಥವಾ ಯಾರೇ ಆಗಲಿ, ನಾನು ತಲೆಕೆಡಿಸಿಕೊಳ್ಳಲ್ಲ. ನನ್ನ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಮವಾಗಿ ಹೇಳಿದ್ದಾರೆ. ಕೆಲಸ ಇಲ್ಲದವರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಮಾಡಿಕೊಂಡು ಹೋಗುತ್ತೇನೆ ಅಷ್ಟೇ ಎಂದರು.
ಜೋಶಿಗೂ ಡೋಂಟ್‌ಕೇರ್, ನಾವು ಬಹಿರಂಗವಾಗಿಯೇ ಮಾತನಾಡುತ್ತೇವೆ: ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಯಾರು ಕ್ರಮಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ. ಫೆಬ್ರವರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇಂದಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರಲ್ಲಿ ನೋವು ಇದೆ. ಆ ನೋವು ಏನು ಅಂತ ಅರ್ಥ ಆಗುತ್ತದೆ. ಇದೆಲ್ಲದಕ್ಕೂ ಶೀಘ್ರ ಇತಿಶ್ರೀ ಹಾಡುವ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಮತ್ತು ಜೆಡಿಎಸ್‌ನ ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ ಎಂಬ ಸಚಿವ ಎಂ.ಬಿ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಡಾ ವಿಚಾರದಲ್ಲಿ ನಡೆದ ಘಟನೆ ಬಳಿಕ ಕಾಂಗ್ರೆಸ್ಸಿನಲ್ಲೇ ಮುಖ್ಯಮಂತ್ರಿ ಆಗುವುದಕ್ಕೆ ಗುದ್ದಾಟ ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರನ್ನು ಅವರ ಪಕ್ಷಕ್ಕೆ ಸೇರಿಸಿಕೊಂಡು ಏನು ಮಾಡುತ್ತಾರೆ? ಮೊದಲು ಕಾನೂನು ಸುವ್ಯವಸ್ಥೆ ಸರಿಪಡಿಸಲಿ. ಅವರಲ್ಲಿರುವ ಶಾಸ ಕರನ್ನು ಮೊದಲು ಉಳಿ ಸಿಕೊಳ್ಳಲಿ. ಬಿಜೆಪಿ, ಜೆಡಿಎಸ್ ಪಕ್ಷದವ ರನ್ನು ಆಮೇಲೆ ಕರೆದು ಕೊಳ್ಳಲಿ ಎಂದು ತಿರುಗೇಟು ನೀಡಿದರು.
ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿವೈವಿ
ಬೆಂಗಳೂರು: ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷವಾಗಿ ನಡೆದುಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕುಯ್ದಿದ್ದಾರೆ. ಪ್ರತಿಯೊಬ್ಬರೂ ತಲೆ ತಗ್ಗಿಸುವ ಘಟನೆಯಿದು. ರಾಜ್ಯದಲ್ಲಿ ಇಷ್ಟೊಂದು ನಡೆದರೂ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಬಿಂಬಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಹರಿಹಾಯ್ದರು. ಹಿಂದೂ ವಿರೋಧಿ ಶಕ್ತಿ ರಾಜ್ಯದಲ್ಲಿ ತಾಂಡವ ಆಡುತ್ತಿದೆ. ಇವರೆಲ್ಲರಿಗೆ ಕಾನೂನು ಬಗ್ಗೆಯಾಗಲಿ, ಪೋಲೀಸರ ಬಗ್ಗೆ ಯಾಗಲಿ ಭಯವೇ ಇಲ್ಲದಂತಾಗಿದೆ. ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.
ಗರ್ಭಿಣಿ ಹಸುವಿನ ಹತ್ಯೆ ಖಂಡಿಸಿ ಹೊನ್ನಾವರದಲ್ಲಿ ಬಿಜೆಪಿ ಪ್ರತಿಭಟನೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂ ಕಿನ ಕೊಂಡಾಕುಳಿ ಮಜರೆಯಲ್ಲಿ ಗರ್ಭಿಣಿ ಹಸುವಿನ ತಲೆ, ಕಾಲು ಕಡಿದು ಕರುವನ್ನು ಎಸೆದು ಹೋದ ಹಿಂಸಾತ್ಮಕ ಘಟನೆ ಖಂಡಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.
ಹಲವು ಬಾರಿ ತ್ಯಾಗ ಮಾಡಿದ್ದೇನೆ, ನನಗೆ ಹುದ್ದೆ ಅವಶ್ಯಕತೆ ಇಲ್ಲ: ಡಿ.ಕೆ. ಶಿವಕುಮಾರ್
ನಗರದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿದರು. ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಮುಖಂಡ ವಿಶ್ವನಾಥ ನಾಯಕ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.
ಹೊನ್ನಾವರಕ್ಕೆ ಐಜಿಪಿ ಭೇಟಿ:
ಹಸು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಹೊನ್ನಾವರಕ್ಕೆ ಸೋಮವಾರ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ ತನಿಖೆಗೆ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ವಿವರಗ ಳನ್ನು ಪಡೆದುಕೊಂಡರು. ಇಂತಹ ಘಟನೆ ಮತ್ತೆ ನಡೆಯದಂತೆ ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು ಎಂದು ತಿಳಿದು ಬಂದಿದೆ.
