ಯತ್ನಾಳ್‌, ಜಾರಕಿಹೊಳಿ ಹೇಳಿಕೆಗೆ ಕಿಮ್ಮತ್ತಿಲ್ಲ, ಅವರ ಆಟ ಜಾಸ್ತಿ ದಿನ ನಡೆಯಲ್ಲ: ವಿಜಯೇಂದ್ರ

ಇವರ ಹೇಳಿಕೆಗಳಿಗೆ ಯಾರೂ ತಲೆಕೆಡಿಸಿಕೊಳ್ಳ ಬೇಕಾದ ಅಗತ್ಯವಿಲ್ಲ. ಯತ್ನಾಳ, ಜಾರಕಿಹೊಳಿ ಮಾತುಗಳಿಗೆ ಯಾವುದೇ ಕಿಮ್ಮತ್ತೂ ಇಲ್ಲ. ಅವರ ಆಟ ಬಹಳ ದಿನ ನಡೆಯುವುದಿಲ್ಲ. ಯಾರು ಪುಗ್ಗಟ್ಟೆ ಮಾತನಾಡುತ್ತಾರೆ, ಯಾರು ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದಾರೆ ಎಂಬುದು ನಮ್ಮ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೂ ಗೊತ್ತಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

BJP State President BY Vijayendra React to Ramesh Jarkiholi Basanagouda Patil Yatnal Statements grg

ಬಳ್ಳಾರಿ(ನ.05):  ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಉಪಚುನಾವಣೆ ಮೇಲೆ ಅದು ಯಾವ ಪರಿಣಾಮವೂ ಬೀರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು. 

'ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವವರೆಗೂ ಪ್ರಚಾರಕ್ಕೆ ಹೋಗುವುದಿಲ್ಲ' ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂಥ ಹೇಳಿಕೆಗಳಿಗೆ ಯಾರೂ ತಲೆಕೆಡಿಸಿಕೊಳ್ಳ ಬೇಕಾದ ಅಗತ್ಯವಿಲ್ಲ. ಯತ್ನಾಳ, ಜಾರಕಿಹೊಳಿ ಮಾತುಗಳಿಗೆ ಯಾವುದೇ ಕಿಮ್ಮತ್ತೂ ಇಲ್ಲ. ಅವರ ಆಟ ಬಹಳ ದಿನ ನಡೆಯುವುದಿಲ್ಲ. ಯಾರು ಪುಗ್ಗಟ್ಟೆ ಮಾತನಾಡುತ್ತಾರೆ, ಯಾರು ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದಾರೆ ಎಂಬುದು ನಮ್ಮ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೂ ಗೊತ್ತಿದೆ ಎಂದರು. 

ಶಾಸಕ ಯತ್ನಾಳ್‌ ಏನು ಮಾತಾಡುತ್ತಾರೋ ಭಗವಂತನೇ ಬಲ್ಲ: ವಿಜಯೇಂದ್ರ

ಉಪಚುನಾವಣೆಯನ್ನು ವಿಜಯೇಂದ್ರ ಒಬ್ಬರೇ ಎದುರಿಸುತ್ತಿಲ್ಲ. ನಮ್ಮ ಕಾರ್ಯ ಕರ್ತರು ತಮ್ಮ ಶಕ್ತಿ ಮೂಲಕ ಎದುರಿಸುತ್ತಿದ್ದಾರೆ. ತಾವೇ ಅಭ್ಯರ್ಥಿ ಎಂಬಂತೆ ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಮೂರೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು. 

ಸಿದ್ದರಾಮಯ್ಯ ಪಿತೂರಿಯಿಂದ ಜಮೀನು ಕಬಳಿಕೆ: 

ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ವಿಜಯೇಂದ್ರ, ವಕ್ಸ್ ಕಾನೂನು ಬಳಸಿಕೊಂಡು ರೈತರ ಜಮೀನು ಕಬಳಿಸುವ ಯತ್ನ ರಾಜ್ಯದಲ್ಲಿ ನಿರಾತಂಕವಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪಿತೂರಿಯಿಂದ ದೇಶದ್ರೋಹಿ ಜಮೀರ್‌ ಅಹಮದ್ ಅವರಿಂದ ಜಮೀನು ಕಬಳಿಸುವ ಕೆಲಸವಾಗುತ್ತಿದೆ. ಅಧಿಕಾರಿಗಳನ್ನು ಬೆದರಿಸಿ ಮಠ-ಮಾನ್ಯಗಳ ಆಸ್ತಿ ಕಬಳಿಸಲಾಗುತ್ತಿದೆ. ಸಿದ್ದರಾಮಯ್ಯ ಅವರು ಜನರಿಂದ ಕಬಳಿಸಿರುವ ವಕ್ ಜಮೀನು ಕೂಡಲೇ ವಾಪಸ್ ಮಾಡಬೇಕು. ಹತ್ತಾರು ವರ್ಷಗಳಿಂದ ಉಳುಮೆ ಮಾಡಿರುವ ರೈತರ ಮೇಲೆ ದರ್ಪ ತೋರಿಸುತ್ತಿರುವ ಸರ್ಕಾರದ ನಡೆ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು. 

ಪಾಪ ಬಿಜೆಪಿ ಪಕ್ಷ ಕಟ್ಟಿದ ಅವರನ್ನೆಲ್ಲ ಮುಗಿಸಿದ್ದಾರೆ: ವಿಜಯೇಂದ್ರ ವಿರುದ್ಧ ಯತ್ನಾಳ್‌ ವಾಗ್ದಾಳಿ

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ವಕ್ಫ್‌ ಬೋರ್ಡ್‌ನಿಂದ ನೋಟಿಸ್ ನೀಡಲಾಗಿತ್ತು ಎಂಬ ಕಾಂಗ್ರೆಸಿಗರ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿಜಯೇಂದ್ರ, ಯಾರು ಆ ರೀತಿ ಹೇಳಿದ್ದಾರೆ? ಮೊದಲು ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಸುಮ್ಮನೆ ಮಾತನಾಡಿದರೆ ಸಹಿಸುವುದಿಲ್ಲ. ರೈತರ ಆಸ್ತಿಯನ್ನು ವಕ್ಫ್‌ಗೆ ಕೊಡಿ ಎಂದು ಯಾರಾದರೂ ಹೇಳುತ್ತಾರೆಯೇ ಎಂದು ಪ್ರಶ್ನಿಸಿದರು. 

ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಈ ಮೂಲಕ ಬಿಜೆಪಿ ಹೊಸದೊಂದು ದಾಖಲೆ ಮಾಡುತ್ತದೆ. ಕ್ಷೇತ್ರದ ಜನ ಕಾಂಗ್ರೆಸ್ ಆಡಳಿತದಿಂದ ರೋಸಿ ಹೋಗಿದ್ದು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಾಗಿ ಹೇಳುತ್ತಿದ್ದಾರೆ. ಇಡೀ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios