Asianet Suvarna News Asianet Suvarna News

ನಮ್ಮ ಹೋರಾಟದಿಂದ ಕಾಂಗ್ರೆಸ್‌ ಹೈಕಮಾಂಡ್‌ ಬೆಂಗ್ಳೂರಿಗೆ ಓಡಿಬಂದಿದೆ: ವಿಜಯೇಂದ್ರ

ಸಿಎಂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ, ಆದರೂ ಅವರ ಪರವಾಗಿ ಗಟ್ಟಿಯಾಗಿ ನಿಲ್ಲಿ' ಎಂದು ಆಡಳಿತ ಪಕ್ಷದ ಶಾಸಕರಿಗೆ 'ಕೈ' ವರಿಷ್ಠರು ತಾಕೀತು ಮಾಡಿದ್ದಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ 

bjp state president by vijayendra slams congress leaders grg
Author
First Published Aug 6, 2024, 9:37 AM IST | Last Updated Aug 6, 2024, 10:36 AM IST

ಚನ್ನಪಟ್ಟಣ(ಆ.06):  ಬಿಜೆಪಿ-ಜೆಡಿಎಸ್ ನ 'ಮೈಸೂರು ಚಲೋ' ಪಾದಯಾತ್ರೆಯ ಹೋರಾಟದ ಪರಿಣಾಮ ದೆಹಲಿಯ ಕಾಂಗ್ರೆಸ್ ದಲ್ಲಿ ಮುಳುಗಿರುವ ಮುಖ್ಯಮಂತ್ರಿಗಳ ಪರವಾಗಿ ಗಟ್ಟಿಯಾಗಿ ನಿಲ್ಲುವಂತೆ ಶಾಸಕರಿಗೆ ತಾಕೀತು ಮಾಡಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಚನ್ನಪಟ್ಟಣದ ಬಹಿರಂಗ ಸಭೆಯಲ್ಲಿ ಮಾತನಾಡಿ, 'ಹೌದು, ಸಿಎಂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ, ಆದರೂ ಅವರ ಪರವಾಗಿ ಗಟ್ಟಿಯಾಗಿ ನಿಲ್ಲಿ' ಎಂದು ಆಡಳಿತ ಪಕ್ಷದ ಶಾಸಕರಿಗೆ 'ಕೈ' ವರಿಷ್ಠರು ತಾಕೀತು ಮಾಡಿದ್ದಾರೆ ಎಂದರು.
ಬಿಜೆಪಿ-ಜೆಡಿಎಸ್ ಮೈಸೂರು ಚಲೋ' ಪಾದಯಾತ್ರೆಯ ಹೋರಾಟದ ಪರಿಣಾಮ ದೆಹಲಿಯ ಕಾಂಗ್ರೆಸ್ ವರಿಷ್ಠರು ಭ್ರಷ್ಟಾಚಾರದಲ್ಲಿ ಮುಳುಗಿರುವ ಮುಖ್ಯಮಂತ್ರಿಗಳ ಪರವಾಗಿ ಗಟ್ಟಿಯಾಗಿ ನಿಲ್ಲುವಂತೆ ಶಾಸಕರಿಗೆ ತಾಕೀತು ಮಾಡಿ ಹೋಗಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. 

ಅಮಿತ್ ಶಾ ಬೆದರಿಕೆಗೆ ಹೆದರಿದ ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಭಾಗಿ: ಭಂಡಾರಿ

ನಮ್ಮ ಹೋರಾಟದ ಪರಿಣಾಮ ದೆಹಲಿಯಿಂದ ಕಾಂಗ್ರೆಸ್ ವರಿಷ್ಠರು ಬಂದಿದ್ದರು. 'ಹೌದು, ಮುಖ್ಯಮಂತ್ರಿಯವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ, ಆದರೂ ಮುಖ್ಯಮಂತ್ರಿಯವರ ಪರವಾಗಿ ಗಟ್ಟಿಯಾಗಿನಲ್ಲಿ' ಎಂದು ಆಡಳಿತ ಪಕ್ಷದ ಶಾಸಕರಿಗೆ ತಾಕೀತು ಮಾಡಿದ್ದಾರೆ ಎಂದು ಟೀಕಿಸಿದರು.

ಯಾದಗಿರಿಯಲ್ಲಿ ದಲಿತ ಕುಟುಂಬಕ್ಕೆ ಸೇರಿದ ಪಿಎಸ್‌ಐ ಪರಶುರಾಮ, ಆಡಳಿತ ಪಕ್ಷದ ಶಾಸಕ 30 ಲಕ್ಷ ರು, ಲಂಚ ನೀಡಿ ಕೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆರೆಯಿಂದ ಬಡವರು ಮನ ಕಳೆದುಕೊಂಡಿದ್ದಾರೆ. ಹಿಂದೆ ಯಡಿಯೂರಪ್ಪನವರು ಅಧಿಕಾರದಲ್ಲಿ ಇದ್ದಾಗ ಬಡವರು ಮನೆ ಕಳೆದುಕೊಂಡಾಗ ತಕ್ಷಣ 5 ಲಕ್ಷ ರು. ಪರಿಹಾರ ಕೊಡುತ್ತಿದ್ದರು. ಸಿದ್ದರಾಮಯ್ಯನವರು ಈಗ ಭಿಕ್ಷೆ ರೀತಿಯಲ್ಲಿ 1 ಲಕ್ಷ ರು. ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಮನೆ ಕಳೆದುಕೊಂಡುವರಿಗೆ ಮನೆ ಕೊಡಲಿಲ್ಲ, ಆದರೆ, ಕೇರಳದ ವೈನಾಡಲ್ಲಿ 100 ಮನೆ ಕೂಡುವ ಘೋಷಣೆ ಮಾಡಿದ್ದಾರೆ. ಅಲ್ಲಿ ಮನೆ ಕೊಡುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ, ಸಿದ್ದರಾಮಯ್ಯ ಅವರಿಗೆ ರಾಜಕೀಯ ಜನ್ಮ ನೀಡಿದ ಮೈಸೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ನಿವೇಶನಕ್ಕೆ ಅರ್ಜಿ ಹಾಕಿದ್ದಾರೆ. ಅವರಿಗೆ ನಿವೇಶನ ಕೊಡಲು ಅವರಿಂದ ಸಾಧ್ಯವಾಗಲಿಲ್ಲ ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios