ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಹತಾಶೆ ಪ್ರತೀಕ ಚೊಂಬು, ವಿಜಯೇಂದ್ರ
ರಾಜ್ಯದಲ್ಲಿ ದಿನೇ ದಿನೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ನಿತ್ಯ ಹಲ್ಲೆ, ಕೊಲೆಗಳಾಗುತ್ತಿವೆ. ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳಿಂದ ಮತ ಬರುತ್ತದೆ ಎಂಬ ಭ್ರಮೆಯಲ್ಲಿತ್ತು ಎಂದು ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಉಡುಪಿ(ಏ.21): ರಾಜ್ಯ ಸರ್ಕಾರ ತನ್ನ ವೈಫಲ್ಯ, ಅಭಿವೃದ್ಧಿ ಶೂನ್ಯತೆಯಿಂದ ಚುನಾವಣಾ ಪ್ರಚಾರದ ಹುಮ್ಮಸ್ಸನ್ನೇ ಕಳೆದುಕೊಂಡಿದೆ. ಚೊಂಬು, ಶಾಲು ಕೇಸರಿ ಜಾಹೀರಾತುಗಳು ಕಾಂಗ್ರೆಸ್‌ನ ಹತಾಶೆಯನನ್ನು ತೋರಿಸುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಶನಿವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ದಿನೇ ದಿನೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ನಿತ್ಯ ಹಲ್ಲೆ, ಕೊಲೆಗಳಾಗುತ್ತಿವೆ. ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳಿಂದ ಮತ ಬರುತ್ತದೆ ಎಂಬ ಭ್ರಮೆಯಲ್ಲಿತ್ತು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ತಾಲಿಬಾನ್ ಆಡಳಿತ ಇದೆಯೇ?: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
ಆದರೆ ಈಗ ತಾನು ಗೆಲ್ಲುವುದು ಸಾಧ್ಯವಿಲ್ಲ ಎಂದು ಗೊತ್ತಾಗಿ, ಬಿಜೆಪಿಯ ವಿರುದ್ಧ ಜಾಹೀರಾತುಗಳನ್ನು ನೀಡಲಾರಂಭಿಸಿದೆ. ಇದರಿಂದ ಯಾವುದೇ ಪರಿಣಾಮಗಳಾಗುವುದಿಲ್ಲ ಎಂದವರು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆಯ ನಂತರ ಅವರ ಸಿದ್ದರಾಮಯ್ಯ ಸಿಎಂ ಕುರ್ಚಿಯೇ ಉಳಿಯುವುದಿಲ್ಲ ಎಂದರು.