Asianet Suvarna News Asianet Suvarna News

ಸಿದ್ದರಾಮಯ್ಯ ಸರ್ಕಾರದಿಂದ ದಲಿತ ಸಮಾಜಗಳಿಗೆ ಅನ್ಯಾಯ: ಬಿ.ವೈ.ವಿಜಯೇಂದ್ರ

ವೇದಿಕೆ ಕಾರ್ಯಕ್ರಮದ ಬಳಿಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆದಿದೆ. 

BJP State President BY Vijayendra Slams On CM Siddaramaiah Congress Govt gvd
Author
First Published Jan 7, 2024, 12:50 PM IST

ಚಾಮರಾಜನಗರ (ಜ.07): ವೇದಿಕೆ ಕಾರ್ಯಕ್ರಮದ ಬಳಿಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆದಿದೆ. ಒಬ್ಬ ಅನುಭವಿ ಮುಖ್ಯಮಂತ್ರಿ 14 ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾರೆ. ರಾಜ್ಯದ ಸಾಕಷ್ಟು ನೀರಿಕ್ಷೆ ಇತ್ತು. ನೀರಿಕ್ಷೆಗಳು ಹುಸಿಯಾಗಿದೆ. ನಾವುಗಳು ಮೋಸ ಹೋಗಿದ್ದೇವೆ ಎಂಬ ಭಾವನೆ ಜನರಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಗ್ಯಾರೆಂಟಿಗಳನ್ನ ಅರೆ ಭರೆ ಘೋಷಣೆ ಮಾಡಿ ಎಷ್ಟು ಜನರಿಗೆ ತಲುಪಿದೆ ಗೊತ್ತಿಲ್ಲ. ಸರ್ಕಾರದ ನಡವಳಿಕೆಯಿಂದ ರೈತರು ಹತಾಶರಾಗಿದ್ದಾರೆ. ಎಸ್ಸಿ ಎಸ್ಟಿ ಹಣವನ್ನ ಬೇರೆಡೆಗೆ ವರ್ಗಾ ಮಾಡಿಕೊಂಡಿದೆ. ಸಿದ್ದರಾಮಯ್ಯ ಅವರ ಸರ್ಕಾರ ದಲಿತ ಸಮಾಜಗಳಿಗೆ ಅನ್ಯಾಯ ಮಾಡುತ್ತಿದೆ. ಹೊಸ ಯೋಜನೆ ಜಾರಿ ತರುತ್ತಿಲ್ಲ. ಯಾವೊಬ್ಬ ಶಾಸಕನು ಕೂಡ ಸ್ವ ಕ್ಷೇತ್ರದಲ್ಲಿ ಓಡಾಡಲು ಸಾಧ್ಯವಾಗಿಲ್ಲ. ರಸ್ತೆ ಅಭಿವೃದ್ಧಿಯಾಗುತ್ತಿಲ್ಲ, ಆಸ್ಪತ್ರೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಎಸ್‌ವೈ ನನಗೆ ಒಂದು ಮಾತು ಹೇಳಿದ್ದಾರೆ: ವಿಜಯೇಂದ್ರ ಹೇಳಿದ್ದೇನು?

ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ದುಷ್ಟ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸುತ್ತಾರೆ. ವಿಧಾನ ಸಭಾ ಚುನಾವಣೆ ಸೋಲಿಗೆ ಸಾಕಷ್ಟು ಕಾರಣಗಳಿದೆ. ಸಂಪೂರ್ಣ ಶ್ರಮ ಹಾಕಬೇಕಿತ್ತು. ಅದು ಕೊರತೆಯಾಯ್ತು ಎಂದು ಪ್ರಶ್ನೆಗೆ ಉತ್ತರಿಸಿದರು.

ಸೋಮಣ್ಣ, ಯತ್ನಾಳ್ ಅವರ ವಿಚಾರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳುವುದಿಲ್ಲ. ಸಾಕಷ್ಟು ಬದಲಾವಣೆಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗುತ್ತೆ. ಸೋಮಣ್ಣ ಚುನಾವಣೆ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ. ಕೇಂದ್ರದ ವರಿಷ್ಟರು ತೀರ್ಮಾನ ಮಾಡುತ್ತಾರೆ. ಸೋಮಣ್ಣ ಹಿರಿಯರು ಅವರ ಕೊಡುಗೆ ಪಕ್ಷಕ್ಕೆ ಇದೆ.ವಎರೆಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇತ್ತು, ಆದರೂ ಸೋಲಾಗಿದೆ. ಇದಕ್ಕೆ ಬೇರೆ ಬೇರೆ ಕಾರಣ ಇದೆ. ಸೋಮಣ್ಣ ಅವರ ಜೊತೆ ಕುಳಿತು ಚರ್ಚೆ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚು ಪ್ರಚಾರ ಮಾಡುತ್ತೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿನ ಮುಖ್ಯಮಂತ್ರಿ: ವೀರೇಶಾನಂದ ಸರಸ್ವತಿ

ಭರ್ಜರಿ ರೋಡ್ ಶೋ: ರಾಜ್ಯಾಧ್ಯಕ್ಷರಾದ ಬಳಿಕ ಚಾಮರಾಜನಗರಕ್ಕೆ ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಚಾಮರಾಜನಗರದ ಸಂತೇಮರಹಳ್ಳಿ ವೃತ್ತಕ್ಕೆ ವಿಜಯೇಂದ್ರ ಆಗಮಿಸಿದ ವೇಳೆ ಬೃಹತ್ ಹೂವಿನ ಹಾರ ಹಾಗೂ ಸೇಬಿನ ಹಾರವನ್ನು ಹಾಕಲಾಯಿತು. ಬಳಿಕ, ಮಹರ್ಷಿ ವಾಲ್ಮೀಕಿ ಮತ್ತು ಪ್ರಭು ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಬಿವೈವಿ ಪುಷ್ಪಾರ್ಚನೆ ಸಲ್ಲಿಸಿದರು. ಸಂತೇಮರಹಳ್ಳಿ ವೃತ್ತದಿಂದ ತೆರೆದ ವಾಹನದಲ್ಲಿ ಬಿ.ವೈ‌.ವಿಜಯೇಂದ್ರ ರೋಡ್ ಶೋ ನಡೆಸಿದರು. ಭುವನೇಶ್ವರಿ ವೃತ್ತದಲ್ಲೂ ವಿಜಯೇಂದ್ರಗೆ ಕೇಸರಿ ಮಳೆ ಸುರಿಸಿದ ಕಾರ್ಯಕರ್ತರು ಬೃಹತ್ ಸೇಬಿನ ಹಾರ ಹಾಕಿದರು.

Follow Us:
Download App:
  • android
  • ios