Asianet Suvarna News Asianet Suvarna News

ಧ್ವಜ ಇಳಿಸೋ ದುಸ್ಸಾಹಕ್ಕೆ ಮುಂದಾದ ಕಾಂಗ್ರೆಸ್‌ ನಡೆ ಖಂಡನೀಯ: ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿಯಲ್ಲಿ ಕರಸೇವನಕ ಬಂಧನದ ನಂತರ, ಇದೀಗ ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ಗಲಾಟೆಯನ್ನು ನಡೆಸಿದೆ. ಅಲ್ಲಿಯ ಗ್ರಾಪಂ ನಿರ್ಧರಿಸಿದ 108 ಅಡಿ ಎತ್ತರದ ಧ್ವಜ ಸ್ತಂಭ ಸ್ಥಾಪಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಪೊಲೀಸರನ್ನು ಕಳುಹಿಸಿ ಧ್ವಜ ಇಳಿಸೋ ದುಸ್ಸಾಹಕ್ಕೆ ಮುಂದಾಗಿರುವುದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. 

BJP State President BY Vijayendra Slams On Congress Govt At Raichur gvd
Author
First Published Jan 29, 2024, 9:03 PM IST

ರಾಯಚೂರು (ಜ.29): ಹುಬ್ಬಳ್ಳಿಯಲ್ಲಿ ಕರಸೇವನಕ ಬಂಧನದ ನಂತರ, ಇದೀಗ ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ಗಲಾಟೆಯನ್ನು ನಡೆಸಿದೆ. ಅಲ್ಲಿಯ ಗ್ರಾಪಂ ನಿರ್ಧರಿಸಿದ 108 ಅಡಿ ಎತ್ತರದ ಧ್ವಜ ಸ್ತಂಭ ಸ್ಥಾಪಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಪೊಲೀಸರನ್ನು ಕಳುಹಿಸಿ ಧ್ವಜ ಇಳಿಸೋ ದುಸ್ಸಾಹಕ್ಕೆ ಮುಂದಾಗಿರುವುದನ್ನು ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸ್ಥಳೀಯ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹಿಂದೂ ವಿಚಾರಗಳಿಗೆ ಧಕ್ಕೆ ತರುವ ಕಾರ್ಯಕ್ಕೆ ಮುಂದಾಗಿದೆ. ಕಾಂಗ್ರೆಸ್‌ ಸರ್ಕಾರಕ್ಕೆ ಅಧಿಕಾರದ ದರ್ಪ ನೆತ್ತಿಗೇರಿದ್ದು, ರಾಜ್ಯದಲ್ಲಿ ಶಾಂತಿ ಕಾಪಾಡದೇ ಕಾನೂನು ಹದಗೆಡಿಸುತ್ತಿರುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್‌ ಅವರು ಇಂತಹ ದೌರ್ಜನ್ಯದ ಆಡಳಿತವನ್ನು ನಿಲ್ಲಿಸಬೇಕು, ಹುಡುಗಾಟ ಮಾಡದೇ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅವುಗಳನ್ನು ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಅಧಿಕಾರಕ್ಕೆ ಬಂದ ಎಂಟೇ ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಂತಹ ಸರ್ಕಾರ ಯಾವುದಾದರು ಇದ್ದರೆ ಅದು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದರು.

ಎಚ್‌ಡಿಕೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಸೇರ್ಪಡೆ: ಸಚಿವ ಚಲುವರಾಯಸ್ವಾಮಿ

ಸುಳ್ಳುಗಳ ಮುಖಾಂತರ ಅಧಿಕಾರಕ್ಕೆ ಬಂದು ಗ್ಯಾರಂಟಿಗಳನ್ನು ಜನರಿಗೆ ತಲುಪಿಸದೆ ಬರೀ ಪ್ರಚಾರದಲ್ಲಿ ಮುಳುಗಿದ್ದು, ಜನರ ವಿಶ್ವಾಸವನ್ನು ಗಾಳಿಗೆ ತೂರಿದೆ. ಉಚಿತ ಬಸ್‌ ಪ್ರಯಾಣದಿಂದಾಗಿ ಸಿಬ್ಬಂದಿಗೆ ಸಂಬಳ ನೀಡಲು ಆಗುತ್ತಿಲ್ಲ, ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗಿದೆ. 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದವರಿಗೆ 1 ಕೆ.ಜಿ ಕೊಡಲು ಸಹ ಆಗುತ್ತಿಲ್ಲ. 200 ಯುನಿಟ್‌ ಕರೆಂಟ್‌ ಯಾರಿಗೆ ಕೊಡುತ್ತಿದ್ದಾರೆಯೋ ಗೊತ್ತಾಗುತ್ತಿಲ್ಲ. ಬರಗಾದಲ್ಲಿ 7 ತಾಸು ವಿದ್ಯುತ್‌ ಕೊಡುವಲ್ಲಿ ಕಾಂಗ್ರೆಸ್‌ ಸೋತಿದ್ದು, 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಸಹ ಬರಪರಿಹಾರದ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆಕೂಡಿಸುವ ಕೆಲಸ ಮಾಡುತ್ತಿದೆ.

Follow Us:
Download App:
  • android
  • ios