ಕಾಂಗ್ರೆಸ್‌ ಸರ್ಕಾರ ಎಷ್ಟು ದಿನ ಜೀವಂತವಾಗಿ ಇರುತ್ತೋ ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯ ಮಂತ್ರಿ, ಉಪಮು ಖ್ಯಮಂತ್ರಿ ಸ್ಥಾನಗಳಿಗೆ ಹಾದಿ-ಬೀದಿಯಲ್ಲಿ ಗಲಾಟೆಗಳು ನಡೆಯುತ್ತಿವೆ. ಈ ಸರ್ಕಾರ ಎಷ್ಟು ದಿನ ಜೀವಂತವಾಗಿ ಇರುತ್ತೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ. 

bjp state president by vijayendra slams on congress govt gvd

ಬೆಂಗಳೂರು (ಜು.05): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯ ಮಂತ್ರಿ, ಉಪಮು ಖ್ಯಮಂತ್ರಿ ಸ್ಥಾನಗಳಿಗೆ ಹಾದಿ-ಬೀದಿಯಲ್ಲಿ ಗಲಾಟೆಗಳು ನಡೆಯುತ್ತಿವೆ. ಈ ಸರ್ಕಾರ ಎಷ್ಟು ದಿನ ಜೀವಂತವಾಗಿ ಇರುತ್ತೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಗುರುವಾರ ನಡೆದ ಪಕ್ಷದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅವರದೇ ಪಕ್ಷದ ಶಾಸಕರಿಗೆ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ. ಹೀಗಾಗಿ ಪಕ್ಷದಲ್ಲಿ ಸಿಎಂ-ಡಿಸಿಎಂ ಬದಲಾವಣೆ ಕೂಗುಎಬ್ಬಿದೆ. ಈ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಒಂದು ವರ್ಷದ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 18-20 ಸ್ಥಾನ ಗೆಲ್ಲುವ ಭ್ರಮೆಯಲ್ಲಿತ್ತು. ಆದರೆ, ಬಿಜೆಪಿ-ಜೆಡಿಎಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ರಾಜ್ಯದ ಮತದಾರರು ಕಾಂಗ್ರೆಸ್‌ನ ಪೊಳ್ಳು ಭರವಸೆಗಳು, ಒಡೆದಾಳುವ ನೀತಿ, ಅಲ್ಪಸಂಖ್ಯಾತರರ ತುಷ್ಟಿಕರಣ ಧಿಕ್ಕರಿಸಿ ನಮ್ಮ ಪಕ್ಷಕ್ಕೆ ಆಶೀರ್ವದಿಸಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 142 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ. ಇದಕ್ಕೆ ಪಕ್ಷದ ಕಾರ್ಯಕರ್ತರ ಪರಿಶ್ರಮವೇ ಕಾರಣ ಎಂದರು.

ಸಿದ್ದು, ಡಿಕೆಶಿ ಇಬ್ಬರೂ ಕಾಂಗ್ರೆಸ್‌ನ ಎರಡು ಕಣ್ಣು ಇದ್ದ ಹಾಗೆ‌: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಒಂದೇ ವರ್ಷದಲ್ಲಿ ಸಾಕಷ್ಟು ಹಗರಣಗಳು: ರಾಜ್ಯ ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಆಡಳಿತದಲ್ಲಿ ಹಿಂದೆಂದೂ ಕಂಡು ಕೇಳರಿಯದ ಭ್ರಷ್ಟಾಚಾರ, ಹಗರಣ ಗಳು ನಡೆದಿವೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ 2187 ಕೋಟಿ ಹಗರಣ ನಡೆದಿದೆ. ಮೈಸೂರಿನ ಮುಡಾದಲ್ಲಿ ಅಕ್ರಮ ನಿವೇಶನ ಹಂಚಿಕೆಯಲ್ಲಿ ಸಿಎಂ ಕುಟುಂಬ ಸದಸ್ಯರು ಸೇರಿ ಹಲವು ಮುಖಂಡರ ಹೆಸರು ಕೇಳಿ ಬರುತ್ತಿದೆ. ಇದು ಸುಮಾರು 23 -4 ಸಾವಿರ ಕೋಟಿ ಹಗರಣ. ರಾಜ್ಯದ ಇತಿಹಾಸದಲ್ಲಿ ಎಷ್ಟು ದೊಡ್ಡ ಹಗರಣಗಳು ಎಂದೂ ನಡೆದಿರಲಿಲ್ಲ ಎಂದರು. ಆಗಸ್ಟ್ ಬಳಿಕ ಜಿಲ್ಲಾ ಪ್ರವಾಸ: ಆಗಸ್ಟ್ ಬಳಿಕ ರಾಜ್ಯದ ಪ್ರತಿ ಜಿಲ್ಲೆಗೆ ಬರುತ್ತೇನೆ. ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗುತ್ತೇನೆ ಎಂದರು.

Latest Videos
Follow Us:
Download App:
  • android
  • ios