Asianet Suvarna News Asianet Suvarna News

ಬಹುಕೋಟಿ ಹಗರಣ ಮಾಡಿ ರಾಜ್ಯದ ಜನತೆಗೆ ದ್ರೋಹ ಬಗೆದ ಸಿದ್ದು ಸರ್ಕಾರ: ವಿಜಯೇಂದ್ರ ಕಿಡಿ

ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಹಣವನ್ನೆಲ್ಲಾ ಅನ್ಯ ಕಾರ್ಯಗಳಿಗೆ ಬಳಸಿಕೊಂಡು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಮಾಡಿ ರಾಜ್ಯದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಬಿ.ವೈ.ವಿಜಯೇಂದ್ರ 

bjp state president by vijayendra slams siddaramaiah government grg
Author
First Published Jul 20, 2024, 10:03 PM IST | Last Updated Jul 22, 2024, 12:34 PM IST

ಬೆಂಗಳೂರು(ಜು.20): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟಾಚಾರ ನಡೆದೇ ಇಲ್ಲ ಎನ್ನುವಂತೆ ಮೊಂಡುತನ ಪ್ರದರ್ಶನ ಮಾಡುತ್ತಿದ್ದಾರೆ. ಈ ಭ್ರಷ್ಟಾಚಾರಕ್ಕೂ ಸಚಿವರಿಗೂ ಸಂಬಂಧವಿಲ್ಲ ಅಧಿಕಾರಿಗಳು ಈ ಹಗರಣ ಮಾಡಿದ್ದಾರೆ, ಸರ್ಕಾರಕ್ಕೂ ಹಗರಣಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಮುಖ್ಯಮಂತ್ರಿಗಳೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಏಕೆ ಪಡೆದುಕೊಂಡಿರಿ? ಎಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಇಂದು(ಶನಿವಾರ) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಹಣವನ್ನೆಲ್ಲಾ ಅನ್ಯ ಕಾರ್ಯಗಳಿಗೆ ಬಳಸಿಕೊಂಡು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಮಾಡಿ ರಾಜ್ಯದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 

ವಾಲ್ಮೀಕಿ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು: ವಿಜಯೇಂದ್ರ

ಹಗರಣ ಮುಚ್ಚಿ ಹಾಕಲು ಬಹುದೊಡ್ಡ ಷಡ್ಯಂತರ 

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಚಿವರ ಕೈವಾಡವಿಲ್ಲ, ಕೇವಲ ಅಧಿಕಾರಿಗಳೇ ಎಲ್ಲವನ್ನು ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಈ ಹಗರಣವನ್ನು ಸಂಪೂರ್ಣವಾಗಿ ಮುಚ್ಚಿ ಹಾಕಲು ಬಹುದೊಡ್ಡ ಷಡ್ಯಂತರ ರೂಪಿಸುತ್ತಿದೆ ಎಂದು ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಕಿರಿ ಕಾರಿದ್ದಾರೆ. 

Latest Videos
Follow Us:
Download App:
  • android
  • ios