ನಮ್ಮ ಮುಂದೆ ಎರಡು ಗುರಿಗಳಿವೆ. ಒಂದನೆಯದ್ದು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಬೇಕು. ಎರಡನೆಯದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಬೇಕು. ಈ ಎರಡೂ ಉದ್ದೇಶ ಇಟ್ಟುಕೊಂಡು ವರಿಷ್ಠರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಇದನ್ನು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಪಕ್ಷದಲ್ಲಿನ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

ಬೆಂಗಳೂರು(ಮಾ.24):  'ಇತ್ತೀಚಿನ ಪಕ್ಷದ ನಿರ್ಧಾರಗಳಲ್ಲಿ ಬಿಜೆಪಿಯನ್ನು ಬಲಗೊಳಿಸುವ ತಂತ್ರ ಅಡಗಿದೆಯೇ ಹೊರತು ಯಾವುದೋ ಒಂದು ಕುಟುಂಬವನ್ನು ಬಲಪಡಿಸುವಂಥ ಪ್ರಯತ್ನ ಅಥವಾ ನಮ್ಮ ಹಿಡಿತ ಸಾಧಿಸುವಂಥ ಹುನ್ನಾರ ಇಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಮವಾಗಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿ ವಾರ ಪಕ್ಷದ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಿದ ಬಳಿಕ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ನಮ್ಮ ಮುಂದೆ ಎರಡು ಗುರಿಗಳಿವೆ. ಒಂದನೆಯದ್ದು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಬೇಕು. ಎರಡನೆಯದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಬೇಕು. ಈ ಎರಡೂ ಉದ್ದೇಶ ಇಟ್ಟುಕೊಂಡು ವರಿಷ್ಠರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಇದನ್ನು ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಪಕ್ಷದಲ್ಲಿನ ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದರು.

ಈಗಾಗಲೇ ಘೋಷಿಸಿರುವ ಅಭ್ಯರ್ಥಿಗಳ ಹೆಸರು ಬದಲಾವಣೆ ಇಲ್ಲ: ವಿಜಯೇಂದ್ರ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 2018ರ ವಿಧಾನಸಭಾ ಚುನಾವಣೆಯಲ್ಲಿ ನಾನು ವರುಣ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಯತ್ನಿಸಿದೆ. ವರಿಷ್ಠರು ಟಿಕೆಟ್ ಕೊಡುವುದಿಲ್ಲ ಎಂಬ ನಿರ್ಧಾರ ಕೈಗೊಂಡರು. ನಾನು ಪಕ್ಷದ ಕಾರ್ಯಕರ್ತನಾಗಿ ವರಿಷ್ಠರ ಆದೇಶವನ್ನು ಪಾಲನೆ ಮಾಡಿದೆ. ನಂತರ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯ ಬಿಜೆಪಿಯ ಕೋರ್‌ಕಮಿಟಿಯಲ್ಲಿ ನನ್ನನ್ನು ವಿಧಾನಪರಿಷತ್ ಸದಸ್ಯನಾಗಿ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಹೈಕಮಾಂಡ್ ಈ ನಿರ್ಣಯವನ್ನು ಒಪ್ಪಿಕೊಳ್ಳಲಿಲ್ಲ. ಕಾರ್ಯಕರ್ತನಾಗಿ ನಾನು ಹೈಕಮಾಂಡ್ ತೀರ್ಮಾನವನ್ನು ಚಾಚೂ ತಪ್ಪದೆ ಒಪ್ಪಿದೆ ಎಂದು ವಿವರಿಸಿದರು. ಆ ಸಮಯದಲ್ಲಿ ನನ್ನ ನಿಲುವು ಮತ್ತು ನಡವಳಿಕೆ ಹೇಗಿತ್ತು ಎಂಬುದನ್ನು ಎಲ್ಲರೂ ಗಮನಿಸಿದ್ದಾರೆ. ನನ್ನನ್ನು ಈಗ ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ್ದು ಪಕ್ಷದ ವರಿಷ್ಠರು. ಆ ವೇಳೆ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಯಾಕೆ ನೇಮಕ ಮಾಡಿದ್ದು ಎಂಬುದನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಅಧಿಕೃತ ವಾಗಿ ಹೇಳಿಕೆ ನೀಡಿದ್ದರು. ಕಳೆದ ಹಲವು ದಿನಗಳಿಂದ ವಿವಿಧ ಮುಖಂಡರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚರ್ಚೆಯನ್ನು ನೋಡುತ್ತಿ ದ್ದೇನೆ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಯಾವುದೇ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಹೆಚ್ಚು ಮತ ಗಳಿಸಲುಸಾಧ್ಯವಿಲ್ಲ. ಆನಿಟ್ಟಿನಲ್ಲಿ ನಾವು ಕೆಲಸಮಾಡುತ್ತಿದ್ದೇವೆ. ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದಾರೆ. ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.