Asianet Suvarna News Asianet Suvarna News

ಆಟವಾಡುವವರಿಗೆ ಲೋಕಸಭಾ ಚುನಾವಣೆಯಲ್ಲಿ ಉತ್ತರ: ವಿಜಯೇಂದ್ರ

ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದ ಕುರಿತು ಆಡಳಿತ ಪಕ್ಷದ ಶಾಸಕರಲ್ಲೇ ಅಸಮಾಧಾನವಿದೆ. ಅಭಿವೃದ್ಧಿ ಇಲ್ಲದೇ ಇರುವುದು, ಆಡಳಿತ ಪಕ್ಷದ ಶಾಸಕರು ತಮ್ಮ ಕ್ಷೇತ್ರದಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಅವರಲ್ಲಿ ಕೆಲವರು ಮೈತ್ರಿ ಕೂಟದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಬೆಂಬಲ ಕೊಡುವ ನಿರೀಕ್ಷೆ ನಮ್ಮದಾಗಿತ್ತು ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

BJP State President BY Vijayendra Talks Over Lok Sabha Elections 2024 grg
Author
First Published Feb 28, 2024, 6:25 AM IST | Last Updated Feb 28, 2024, 6:25 AM IST

ಬೆಂಗಳೂರು(ಫೆ.28):  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾರ್ಯಾರ ಹಣೆಬರಹ ಏನೆಂದು ಗೊತ್ತಾಗಲಿದೆ. ಆಟವಾಡುವವರಿಗೆ ಮತದಾರರು ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದ ಕುರಿತು ಆಡಳಿತ ಪಕ್ಷದ ಶಾಸಕರಲ್ಲೇ ಅಸಮಾಧಾನವಿದೆ. ಅಭಿವೃದ್ಧಿ ಇಲ್ಲದೇ ಇರುವುದು, ಆಡಳಿತ ಪಕ್ಷದ ಶಾಸಕರು ತಮ್ಮ ಕ್ಷೇತ್ರದಲ್ಲಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಅವರಲ್ಲಿ ಕೆಲವರು ಮೈತ್ರಿ ಕೂಟದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಬೆಂಬಲ ಕೊಡುವ ನಿರೀಕ್ಷೆ ನಮ್ಮದಾಗಿತ್ತು ಎಂದರು.

ಸೋಮಣ್ಣ-ವಿಜಯೇಂದ್ರ ಮುನಿಸು ಶಮನವಾಯ್ತಾ?: ಕುತೂಹಲ ಮೂಡಿಸಿದ ಉಭಯ ನಾಯಕರ ಭೇಟಿ..!

ಕುಪೇಂದ್ರ ರೆಡ್ಡಿ ಸೋಲನ್ನು ಹಿನ್ನಡೆ ಎಂದು ಭಾವಿಸದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವು ಎಲ್ಲ 28 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಈ ಸರಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಹೆಬ್ಬಾರ್ ಅವರು ವಿಪ್ ಉಲ್ಲಂಘನೆ ಬಗ್ಗೆ ನಮ್ಮೆಲ್ಲ ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡಿದ್ದೇವೆ. ವಕೀಲರ ಜೊತೆಗೂ ಚರ್ಚಿಸಿದ್ದೇವೆ. ವರಿಷ್ಠರ ಜೊತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.

Latest Videos
Follow Us:
Download App:
  • android
  • ios