Asianet Suvarna News Asianet Suvarna News

ಇದು ಪಕ್ಕಾ ಶೇ.60 ಕಮಿಷನ್‌ ಸರ್ಕಾರ, ನಾವು ಕಾದು ನೋಡುತ್ತೇವೆ: ನಳಿನ್‌ ಕುಮಾರ್‌ ಕಟೀಲ್‌

ರಾಜ್ಯದ ಕಾಂಗ್ರೆಸ್‌ ಸರ್ಕಾರ ಶೇ.60 ಕಮಿಷನ್‌ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆಪಾದಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಇದೇ ಕಾಂಗ್ರೆಸ್‌ನವರು ಶೇ.40 ಕಮಿಷನ್‌ ಆರೋಪ ಮಾಡಿದರು. 

BJP State President Nalin Kumar Kateel Slams On Congress Govt gvd
Author
First Published Jun 29, 2023, 3:40 AM IST

ಬೆಂಗಳೂರು (ಜೂ.29): ರಾಜ್ಯದ ಕಾಂಗ್ರೆಸ್‌ ಸರ್ಕಾರ ಶೇ.60 ಕಮಿಷನ್‌ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆಪಾದಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಇದೇ ಕಾಂಗ್ರೆಸ್‌ನವರು ಶೇ.40 ಕಮಿಷನ್‌ ಆರೋಪ ಮಾಡಿದರು. ಆದರೆ, ಈಗಷ್ಟೇ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಈಗಾಗಲೇ ಅಂಗಡಿ ವ್ಯಾಪಾರ ಆರಂಭಿಸಿದೆ. ಇದು ಪಕ್ಕಾ ಶೇ.60 ಕಮಿಷನ್‌ ಸರ್ಕಾರ. ನಾವು ಕಾದು ನೋಡುತ್ತೇವೆ’ ಎಂದರು.

‘ವರ್ಗಾವಣೆ ದಂಧೆ ಆರಂಭವಾಗಿದೆ. ತಡೆ ಹಿಡಿದಿರುವ ಕಾಮಗಾರಿಗಳಿಗೂ ಕಮೀಷನ್‌ ಕೇಳುತ್ತಿದ್ದಾರೆ’ ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಆರೋಪಗಳ ಬಗ್ಗೆ ತನಿಖೆ ಮಾಡಿ ಬಹಿರಂಗಪಡಿಸಲಿ. ನಮ್ಮ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡಿದರೇ ಹೊರತು ಒಂದೇ ಒಂದು ಆರೋಪ ಸಂಬಂಧ ಲೋಕಾಯುಕ್ತಕ್ಕೆ ದೂರು ಕೊಡಲಿಲ್ಲ. ಈಗ ಅವರದೇ ಸರ್ಕಾರವಿದೆ. ಎಲ್ಲವನ್ನೂ ತನಿಖೆ ಮಾಡಿಸಲಿ’ ಎಂದು ಸವಾಲು ಹಾಕಿದರು.

ಕೇಂದ್ರವು ಲೋಕಸಭೆ ಚುನಾವಣೆಯಲ್ಲಿ ಸೋಲುತ್ತೇವೆಂಬ ಭಯದಿಂದ ಅಕ್ಕಿ ಕೊಡ್ತಿಲ್ಲ: ಸಚಿವ ಚಲುವರಾಯಸ್ವಾಮಿ

ಗೋಹತ್ಯೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಇಲ್ಲದ್ದಿರೆ ಅಶಾಂತಿ ಖಂಡಿತ ಎಂದು ದ.ಕ. ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಒಂಭತ್ತು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೂತ್‌ ಕಾರ್ಯಕರ್ತರೊಂದಿಗೆ ಕದ್ರಿಯ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ  ‘ನನ್ನ ಬೂತ್‌, ಎಲ್ಲಕ್ಕಿಂತ ಬಲಿಷ್ಠ ಬೂತ್‌’ ಕುರಿತ ನೇರ ಸಂವಾದ ಕಾರ್ಯಕ್ರಮ ವೀಕ್ಷಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪಡೆಯುವ ಪ್ರಸ್ತಾಪ ಉಲ್ಲೇಖಿಸಿದ ಅವರು, ದೇಶದಲ್ಲಿ ಗೋ ಸಂಸ್ಕೃತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋಸಂರಕ್ಷಣೆಯ ಉದ್ದೇಶಕ್ಕೆ ಬಿಜೆಪಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿತ್ತು. ಮಹಾತ್ಮ ಗಾಂಧಿಯೂ ಗೋ ಸಂರಕ್ಷಣೆ ಆಗಬೇಕು ಎಂದು ಹೇಳಿದ್ದರು ಎಂದರು. ಕೆಲವು ಆಚರಣೆಯ ವೇಳೆ ಗೋ ಹತ್ಯೆ ಆಗುತ್ತದೆ. ಗೋವುಗಳ ರಕ್ಷಣೆಗಾಗಿ ನಾವು ಕಾನೂನು ತಂದಿದ್ದು, ಕಾನೂನು ಜಾರಿಯಲ್ಲಿರುವಾಗ ಗೋ ಕಳ್ಳತನ, ಗೋ ಹತ್ಯೆಗೆ ಅವಕಾಶ ನೀಡಬಾರದು. ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಆರ್‌.ನರೇಂದ್ರ

ಗೋಹತ್ಯೆವಿಚಾರದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ಎಚ್ಚರಿಕೆಯಿಂದ ಮಾತನಾಡಬೇಕು. ಜನರ ಆಶಯಗಳಿಗೆ ಸರ್ಕಾರ ಗೌರವ ನೀಡಬೇಕು. ಪೊಲೀಸರೂ ಗೋ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಳಿನ್‌ ಕುಮಾರ್‌ ಆಗ್ರಹಿಸಿದರು. ಈ ಸಂದರ್ಭ ಶಾಸಕ ವೇದವ್ಯಾಸ್‌ ಕಾಮತ್‌, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಮತ್ತಿತರರಿದ್ದರು.

Latest Videos
Follow Us:
Download App:
  • android
  • ios