ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ನೀಡುವ ಸ್ಥಿತಿ ಬರುತ್ತೆ: ವಿಜಯೇಂದ್ರ ಭವಿಷ್ಯ

ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. 

bjp state prsident by vijayendra slams on cm siddaramaiah over muda case gvd

ಬೆಂಗಳೂರು (ಸೆ.05): ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮುಡಾ ಹಗರಣ ಸಂಬಂಧ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. 

ಈ ಮೂಲಕ ಮುಖ್ಯ ಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರವು ಮೊದಲ ಬಾರಿಗೆ ಮುಡಾ ಹಗರಣ ನಡೆದಿರುವುದನ್ನು ಒಪ್ಪಿಕೊಂಡಿದೆ. ಹಗರಣ ಸಂಬಂಧ ಸಿದ್ದರಾಮಯ್ಯ ಅವರು ಸಹ ರಾಜೀನಾಮೆ ಕೊಡಲೇಬೇಕಾಗುತ್ತದೆ, ಕಾದು ನೋಡಿ ಎಂದು ಹೇಳಿದರು. ಉಪ್ಪು ತಿಂದವರು ನೀರು ಕುಡಿಯಲೇಬೇಕಾಗುತ್ತದೆ. ವಾಲ್ಮೀಕಿ ನಿಗಮದ ಹಗರಣ ನಡೆದಾಗ ಮುಖ್ಯಮಂತ್ರಿಗಳು ಯಾವುದೇ ಅಕ್ರಮ ನಡೆದಿಲ್ಲ ಎಂದಿದ್ದರು. ನಂತರ ಅವರೇ ನಿಗಮದಲ್ಲಿ 87 ಕೋಟಿ ರು. ಅಕ್ರಮ ನಡೆದಿರುವುದನ್ನು ಒಪ್ಪಿಕೊಂಡರು. ಮುಡಾ ಹಗರಣದಲ್ಲಿ ನಡೆದಿಲ್ಲ ಎಂದು ಹೇಳಿ, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 

ಟಗರು ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸೋದು ಸಾಧ್ಯವಿಲ್ಲ: ಸಚಿವ ಜಮೀರ್ ಅಹ್ಮದ್

ಆದರೆ, ಪ್ರಕರಣ ಈಗ ನ್ಯಾಯಾಲಯದಲ್ಲಿದ್ದು, ಮುಡಾದ ಹಿಂದಿನ ಆಯುಕ್ತರನ್ನು ಅಮಾನತು ಮಾಡಿದ್ದಾರೆ ಎಂದು ತಿಳಿಸಿದರು. ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್‌ನ ಕೆಲವು ಮುಖಂಡರು ರಾಜ್ಯಪಾಲರಿಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರಾಗಲಿ ಇರಲಿಲ್ಲ. ಯಾಕೆ ಅವರೆಲ್ಲಾ ಬರಲಿಲ್ಲ. ಕಾಂಗ್ರೆಸ್‌ನ ವರಿಷ್ಠರ ಪರವಾಗಿ ಆ ಪಕ್ಷದ ಯಾವುದೇ ಹಿರಿಯ ನಾಯಕರು ರಾಜಭವನದಲ್ಲಿ ಕಾಣಲಿಲ್ಲ. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

Latest Videos
Follow Us:
Download App:
  • android
  • ios