Asianet Suvarna News Asianet Suvarna News

Karnataka Politics: ಹಿಂದೂಗಳ ಅಭಿವೃದ್ಧಿಗೆ ಕಾಂಗ್ರೆಸ್‌ ಚಿಂತನೆ ಮಾಡಿಲ್ಲ: ವಿಜಯೇಂದ್ರ

*  ಗಾಳಿ ಸುದ್ದಿ ಎಬ್ಬಿಸಿ ವಿವಾದ ಸೃಷ್ಟಿ
*  ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ 
*  ಈಶ್ವರಪ್ಪ ಪ್ರಸ್ತುತ ಸಿಎಂ ಬದಲಾವಣೆ ಕುರಿತು ಹೇಳಿಲ್ಲ 
 

BJP State Vice President BY Vijayendra Slams on Congress grg
Author
Bengaluru, First Published Jan 5, 2022, 10:34 AM IST
  • Facebook
  • Twitter
  • Whatsapp

ಗಂಗಾವತಿ(ಜ.05): ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬದಲಾಗುತ್ತಾರೆ ಎಂಬುದು ಕಪೋಲ ಕಲ್ಪಿತ ಎಂದಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಇದೊಂದು ಸುಳ್ಳು ವದಂತಿ ಎಂದು ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವರು ಗಾಳಿ ಸುದ್ದಿ ಎಬ್ಬಿಸಿ ವಿವಾದ ಸೃಷ್ಟಿಸುತ್ತಾರೆ. ಪಕ್ಷದಲ್ಲಿ ಅಂತಹ ಯಾವುದೇ ವಿಷಯ ಪ್ರಸ್ತಾವವಾಗಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌(Congress) ಅಲ್ಪಸಂಖ್ಯಾತರ(Minorities) ಓಲೈಕೆ ಮಾಡುತ್ತಿದೆ ಹೊರತು ಹಿಂದೂಗಳ(Hindu) ಅಭಿವೃದ್ಧಿಗೆ ಚಿಂತನೆ ಮಾಡಿಲ್ಲ ಎಂದು ದೂರಿದ ಅವರು, ಒಳ್ಳೆಯ ಆಲೋಚನೆ ಮಾಡುವುದು ಬಿಜೆಪಿ ಎಂದರು.
ಅಯೋಧ್ಯೆ ಮಾದರಿಯಲ್ಲಿ ಹನುಮನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಅನುದಾನ ನೀಡುವುದಾಗಿ ಹೇಳಿದ್ದು, ಇದರಿಂದ ಅಂಜನಾದ್ರಿ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು.

Karnataka Cabinet : ವಿಜಯೇಂದ್ರಗೆ ಮಂತ್ರಿ ಸ್ಥಾನ ಸಿಗುತ್ತಾ..? : ಬಿಎಸ್‌ವೈ ಉತ್ತರ

ಕರ್ನಾಟಕ ಸಿಎಂ ಬದಲಾವಣೆ ಆಗುತ್ತಾ..?: ವಿಜಯೇಂದ್ರ ಸ್ಪಷ್ಟನೆ

ಸಿಂಧನೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಬದಲಾವಣೆ ಕುರಿತಂತೆ ಕಾಂಗ್ರೆಸ್‌ನವರು (congress) ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿ (BJP) ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (Vijayendra) ಆರೋಪಿಸಿದ್ದಾರೆ. 

ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amith Shah)  ಹಾಗೂ ಬಿಜೆಪಿ (BJP) ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ (Arun Singh) ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆ.ಎಸ್‌.ಈಶ್ವರಪ್ಪ ಪ್ರಸ್ತುತ ಸಿಎಂ ಬದಲಾವಣೆ ಕುರಿತು ಹೇಳಿಲ್ಲ. ವಿನಾ ಕಾರಣ ಸುಳ್ಳು ವದಂತಿಗಳಿಗೆ ಜನರು ಕಿವಿಗೊಡಬಾರದು ಎಂದರು.

ಮಸ್ಕಿ ಉಪ ಚುನಾವಣೆ (By Election) ಸಂದರ್ಭದಲ್ಲಿ ಬಹಳಷ್ಟು ನಿರೀಕ್ಷೆ ಇತ್ತು. ಆದರೆ ಮತದಾರರ ನಿರೀಕ್ಷೆ ಊಹಿಸಲು ಆಗಲಿಲ್ಲ. ಈಚೆಗೆ ನಡೆದ ವಿಧಾನ ಪರಿಷತ್‌ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದೆ. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ವಿಧಾನಸಭೆ ಚುನಾವಣೆ (Election) ಎದುರಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇವೆ ಎಂದರು.

ಮೇಕೆದಾಟು ಯೋಜನೆ ಆರಂಭಿಸಬೇಕೆಂದು ಮೇಕೆದಾಟಿನಿಂದ ಬೆಂಗಳೂರುವರೆಗೆ (Bengaluru) ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ (DK Shivakumar) ಪಾದಯಾತ್ರೆ ವಿಚಾರ ರಾಜಕೀಯ (Politics) ಪ್ರೇರಿತವಾದದ್ದು. ಮೇಕೆದಾಟು ಯೋಜನೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ (Supreme Court) ಪ್ರಕರಣ ನಡೆಯುತ್ತಿದ್ದು, ಅದರ ತೀರ್ಪು ಹೊರಬಂದ ನಂತರ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು. ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

Karnataka Politics: ಶ್ರೀಗಳ ಜತೆ ವಿಜಯೇಂದ್ರ ಮಹತ್ವದ ಚರ್ಚೆ, ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ

ಬೊಮ್ಮಾಯಿ ಸಂಪುಟಕ್ಕೆ ಸೇರ್ತಾರಾ ಬಿ.ವೈ.ವಿಜಯೇಂದ್ರ?

ಹೊಸ ವರ್ಷದ ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ಸಂಪುಟ ವಿಸ್ತರಣೆ (Cabinet expansion) ಅಥವಾ ಪುನಾರಚನೆಯಾಗುವ ನಿರೀಕ್ಷೆಯಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಅವರಿಗೆ ಸಂಪುಟದಲ್ಲಿ ಅವಕಾಶ ಸಿಗಲಿದೆಯೇ ಎಂಬ ಕುತೂಹಲ ಮೂಡಿದೆ. ಆಡಳಿತಾರೂಢ ಬಿಜೆಪಿಯ (BJP) ತೆರೆಮರೆಯಲ್ಲಿ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಬಿರುಸಿನ ಚಟುವಟಿಕೆ ನಡೆದಿದ್ದು, ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಪ್ರತಿಬಾರಿ ದೆಹಲಿಗೆ ತೆರಳಿದ ವೇಳೆ ಪಕ್ಷದ ವರಿಷ್ಠರೊಂದಿಗಿನ ಮಾತುಕತೆಯಲ್ಲಿ ವಿಜಯೇಂದ್ರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಬಗ್ಗೆ ಬೊಮ್ಮಾಯಿ ಅವರು ಪ್ರಸ್ತಾಪ ಮಾಡುತ್ತಲೇ ಇದ್ದಾರೆ. ಆದರೆ, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ಇದುವರೆಗೆ ಹಸಿರು ನಿಶಾನೆ ತೋರಿಲ್ಲ. ಒಂದು ವೇಳೆ ಸಂಪುಟ ವಿಸ್ತರಣೆಯಾಗುವುದಾದರೆ ವಿಜಯೇಂದ್ರ ಅವರಿಗೆ ಈ ಬಾರಿ ಸಚಿವ ಸ್ಥಾನ ಖಚಿತ ಎಂಬ ಮಾತು ಕೇಳಿಬರುತ್ತಿದೆ.
 

Follow Us:
Download App:
  • android
  • ios