Asianet Suvarna News Asianet Suvarna News

Rajya Sabha Election: ಬಿಜೆಪಿಯ 3 ಅಭ್ಯರ್ಥಿಗಳಿಗೂ ಜಯ: ಅರುಣ್‌ ಸಿಂಗ್‌ ವಿಶ್ವಾಸ

ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಎಲ್ಲ ಮೂರು ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್‌ ಸಿಂಗ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

bjp three candidate will win in rajyasabha polls says arun sing
Author
Bangalore, First Published Jun 6, 2022, 3:15 AM IST

ಬೆಂಗಳೂರು (ಜೂ.06): ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಎಲ್ಲ ಮೂರು ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಅರುಣ್‌ ಸಿಂಗ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿದೆ. ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾಡಿದ ಉತ್ತಮ ಕಾರ್ಯಗಳನ್ನು ಗಮನದಲ್ಲಿಟ್ಟು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಎಂಟು ವರ್ಷಗಳನ್ನು ಪೂರೈಸಿದೆ. ಬಡವರು, ರೈತರು, ಶೋಷಿತರು ಮತ್ತು ದಲಿತರು ಸೇರಿದಂತೆ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದೆ ಎಂದು ಅವರು ತಿಳಿಸಿದರು. ಬಿಜೆಪಿ ವತಿಯಿಂದ 15 ದಿನಗಳ ಕಾಲ ಮೋದಿಯವರ ಸಾಧನೆಯನ್ನು ಜನರಿಗೆ ತಿಳಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ. ಪ್ರತಿ ಗ್ರಾಮದ ಪ್ರತಿಯೊಂದು ಮನೆಯನ್ನು ಸಂಪರ್ಕಿಸಿ ಸಾಧನೆಯನ್ನು ತಿಳಿಸುವ ಕಾರ್ಯ ನಡೆಯುತ್ತಿದೆ ಎಂದರು. ಇದರ ಜತೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುತ್ತಿರುವುದಾಗಿ ಹೇಳಿದರು.

Rajya Sabha Election: ಕೊನೆವರೆಗೆ ಕಾದು ನೋಡುವ ತಂತ್ರಕ್ಕೆ ಜೆಡಿಎಸ್‌ ಶರಣು

ಬಿಜೆಪಿಯ ಮೂವರೂ ಗೆಲ್ತಾರೆ, ಹೇಗೆ ಅಂತ ಕೇಳಬೇಡಿ: ರಾಜ್ಯಸಭೆಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಇಬ್ಬರು ಅ​ಧಿಕೃತ ಅಭ್ಯರ್ಥಿಗಳು ಗೆದ್ದ ನಂತರವೂ ನಮ್ಮ ಬಳಿ 32 ಮತಗಳು ಉಳಿಯುತ್ತದೆ. ಕಾಂಗ್ರೆಸ್‌ನಲ್ಲಿ 19ರಿಂದ 20 ಮತಗಳು ಉಳಿಯುತ್ತದೆ. ಜನತಾದಳದಿಂದ ಎಲ್ಲರೂ ವೋಟ್‌ ಹಾಕಿದರೆ 32 ವೋಟ್‌ ಉಳಿಯುತ್ತದೆ. ರಾಜಕಾರಣದಲ್ಲಿ ಕೆಲವೊಮ್ಮೆ ಅಧಿಕೃತ ಅಭ್ಯರ್ಥಿಗಳು ಸೋತಿರುವುದು, ಬಂಡಾಯ ಅಭ್ಯರ್ಥಿಗಳು ಗೆದ್ದಿರುವುದು ಎಲ್ಲಾ ನೋಡಿದ್ದೇವೆ. ರಣನೀತಿಯನ್ನು ಹೇಳಲು ಆಗುವುದಿಲ್ಲ. ನಮ್ಮ ಪಕ್ಷದ ಮೂರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಹೇಗೆ ಏನು ಅಂತ ಕೇಳಬೇಡಿ ಎಂದು ಮಾರ್ಮಿಕಾಗಿ ನುಡಿದರು.

ಬಿಜೆಪಿಗೆ ಬೇರೆ ಪಕ್ಷದ ಮತ ಬೇಡ, 3 ಮಂದಿಯೂ ಗೆಲ್ತಾರೆ: ರಾಜ್ಯಸಭೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ. ನಮಗೆ ಯಾರ ಮತವೂ ಬೇಡ. ನಮ್ಮ ಮತ ಒಂದೇ ಸಾಕು. ನಾವು ಚುನಾವಣೆ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ರಾಜ್ಯಸಭೆಗೆ ಮೂವರು ಅಭ್ಯರ್ಥಿಗಳನ್ನು ಹಾಕಿದ್ದೇವೆ. ನಮ್ಮ ಬಳಿ 122 ಮತಗಳಿವೆ. ಹೀಗಾಗಿ ಬೇರೆಯವರ ಸಹಾಯವಿಲ್ಲದೆ ನಮ್ಮ ಪಕ್ಷದ ಮೂರೂ ಅಭ್ಯರ್ಥಿಗಳು ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಹೇಳಿದರು. ವಿವರಣೆ ನೀಡಲು ನಿರಾಕರಿಸಿದ ಅವರು, ಲೆಹರ್‌ ಸಿಂಗ್‌ ಸೇರಿ ಎಲ್ಲರೂ ಗೆಲ್ಲುತ್ತಾರೆ. ನಮ್ಮ ಮತಗಳಲ್ಲೇ ಮೂರೂ ಅಭ್ಯರ್ಥಿಗಳು ಗೆಲ್ಲಲಿದ್ದಾರೆ, ನೋಡುತ್ತಿರಿ ಎಂದರು.

'ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೀತಿಲ್ಲ, ಬದಲಿಗೆ ತಮ್ಮ ಮೇಲೆ ಚಪ್ಪಡಿ ಕಲ್ಲು ಎಳೆದುಕೊಳ್ತಿದ್ದಾರೆ'

ಕಾಂಗ್ರೆಸ್‌ನವರಿಗೆ ಬುದ್ಧಿ ಭ್ರಮಣೆಯಾಗಿದೆ. ಆರ್‌ಎಸ್‌ಎಸ್‌ ಒಂದು ಪವಿತ್ರ ಸಂಘಟನೆ. ಇಂಥ ಪವಿತ್ರ ಸಂಘಟನೆಗೆ ಅಪಮಾನ ಮಾಡಿದರೆ ಜನರು ಕಾಂಗ್ರೆಸ್ಸಿಗೆ ಅಪಮಾನ ಮಾಡುತ್ತಾರೆ.
-ಅರುಣ್‌ ಸಿಂಗ್‌, ಬಿಜೆಪಿ ಉಸ್ತುವಾರಿ

Follow Us:
Download App:
  • android
  • ios