ಇನ್ನೂ ಲೋಕಸಭಾ ಚುನಾವಣೆ ಘೋಷಣೆ ಆಗಿಲ್ಲ. ಆದರೆ ಪಕ್ಷ ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ಟಿಕೆಟ್ ಕುರಿತು ರ್ತೀಮಾನ ಮಾಡುತ್ತಾರೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಶಿವಮೊಗ್ಗ(ಮಾ.10): ಯಾವುದೇ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆ ಒಂದು ಪ್ರಕ್ರಿಯೆ ಅಷ್ಟೆ. ಇದರಲ್ಲಿ ಯಾವುದೇ ಕಸರತ್ತು ಎಂಬುದು ಇಲ್ಲ. ಗೆಲ್ಲುವ ಅಭ್ಯರ್ಥಿಗಳಿಗೆ, ಯಾರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ ಅವರಿಗೆ ಟಿಕೆಟ್‌ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. 

ಶನಿವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಇನ್ನೂ ಲೋಕಸಭಾ ಚುನಾವಣೆ ಘೋಷಣೆ ಆಗಿಲ್ಲ. ಆದರೆ ಪಕ್ಷ ಈಗಾಗಲೇ 195 ಸೀಟ್ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ಟಿಕೆಟ್ ಕುರಿತು ರ್ತೀಮಾನ ಮಾಡುತ್ತಾರೆ ಎಂದರು.

BS YEDIYURAPPA: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

ಹಾಲಿ ಸಂಸದರಿಗೆ ಟಿಕೆಟ್‌ ನೀಡಲ್ಲ ಎನ್ನುವ ಯಾವುದೇ ಪ್ರಸ್ತಾಪ ಪಕ್ಷದ ಮುಂದಿಲ್ಲ. ಇದೆಲ್ಲ ಕೇವಲ ಊಹಾಪೋಹ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ದೇಶದಲ್ಲಿ ಬಿಜೆಪಿ ಈ ಬಾರಿ ಐತಿಹಾಸಿಕ ದಾಖಲೆ ವಿಜಯ ಸಾಧಿಸಲಿದೆ. 370ಕ್ಕೂ ಹೆಚ್ಚು ಬಿಜೆಪಿ ಗೆಲ್ಲಲ್ಲಿದೆ. ನಾವು ಮತ್ತೆ ಅಧಿಕಾರ ಪಡೆದೇ ಪಡೆಯುತ್ತೇವೆ. ಮುಂದೆ ದೇಶದಲ್ಲಿ ಅಭೂತ ಪೂರ್ವ ಬದಲಾವಣೆ ತರುತ್ತೇವೆ. ಸದ್ಯ ಜಾಗತಿಕ ಮಟ್ಟದಲ್ಲಿ ನಮ್ಮ ದೇಶ 5ನೇ ಸ್ಥಾನದಲ್ಲಿ ಇದೆ. ಮುಂದಿನ ದಿನಗಳಲ್ಲಿ 3ನೇ ಸ್ಥಾನಕ್ಕೆ ತರುವ ಮೂಲಕ ಭಾರತ ಅಭಿವೃದ್ಧಿಶೀಲ ರಾಷ್ಟ್ರ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.