ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ, ರೈತ ವಿರೋಧಿ ನೀತಿ ವಿರೋಧಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ.
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ, ರೈತ ವಿರೋಧಿ ನೀತಿ ವಿರೋಧಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಲಿದೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ ಮಾಹಿತಿ
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಬಗ್ಗೆ ಮಾಹಿತಿ ನೀಡಿದರು.
400 ರೈತರು ಆತ್ಮ*ತ್ಯೆ
‘ಕಳೆದ ಎರಡು ವರ್ಷದಲ್ಲಿ ರಾಜ್ಯದಲ್ಲಿ 400 ರೈತರು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರದಿಂದ ರೈತರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಸರ್ಕಾರದ ರೈತ ವಿರೋಧಿ ಧೋರಣೆ ಮತ್ತು ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ, ಆಡಳಿತ ವೈಫಲ್ಯ ಖಂಡಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ.
ಬಿಜೆಪಿ ನಾಯಕರು, ಕಾರ್ಯಕರ್ತರು, ರೈತರು ಸೇರಿ 15ರಿಂದ 20 ಸಾವಿರ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರದ ಹಳೇ ಪಿಬಿ ರಸ್ತೆಯ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನೆ ನಡೆಸಿ, ನಂತರ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ತಿಳಿಸಿದರು.


