ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರದಿಂದ ಕೂಡಿದೆ. ರಾಜ್ಯದ ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಸಲಹೆಯಂತೆ 2000 ರು. ಹಾಗೂ ನಿರುದ್ಯೋಗಿ ಯುವಕರಿಗೆ ರಾಹುಲ್‌ ಗಾಂಧಿ ಸಲಹೆಯಂತೆ 4000 ರು. ನೀಡಲಾಗುವುದು. ಅಲ್ಲದೆ, ಉಚಿತ ವಿದ್ಯುತ್‌ ಕೊಡಲಾಗುವುದು ಎಂದು ಕಾಂಗ್ರೆಸ್‌ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿದ ಡಿ.ಕೆ.ಶಿವಕುಮಾರ. 

ಗುರುಮಠಕಲ್‌(ಮಾ.26):  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ಕಾಂಗ್ರೆಸ್‌ ಹೆದರುವುದಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

ಗುರುಮಠಕಲ್‌ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ನಡೆದ ನೂತನ ಕಾಂಗ್ರೆಸ್‌ ಕಚೇರಿ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರದಿಂದ ಕೂಡಿದೆ. ರಾಜ್ಯದ ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಸಲಹೆಯಂತೆ 2000 ರು. ಹಾಗೂ ನಿರುದ್ಯೋಗಿ ಯುವಕರಿಗೆ ರಾಹುಲ್‌ ಗಾಂಧಿ ಸಲಹೆಯಂತೆ 4000 ರು. ನೀಡಲಾಗುವುದು. ಅಲ್ಲದೆ, ಉಚಿತ ವಿದ್ಯುತ್‌ ಕೊಡಲಾಗುವುದು ಎಂದು ಕಾಂಗ್ರೆಸ್‌ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಾದರಿ ಯೋಜನೆ ಜಾರಿ: ಬಂಡೆಪ್ಪ ಖಾಶೆಂಪೂರ್

ಗುರುಮಠಕಲ್‌ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ಭದ್ರಕೋಟೆ ಆಗುವಂತೆ ಮಾಡಿ ಡಾ.ಮಲ್ಲಿಕಾರ್ಜುನ ಖರ್ಗೆಗೆ ಶಕ್ತಿ ನೀಡಬೇಕು. ಖರ್ಗೆ ಅವರ ಋುಣ ತೀರಿಸಲು ನೀವು ಮುಂದಾಗಿ, ಗೆಲುವಿನ ಕಾಣಿಕೆ ಕೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಜೆಡಿಎಸ್‌ ಅಧಿಕಾರಕ್ಕೆ ಬರಲ್ಲ: ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್‌ ಕಾರ್ಯಕರ್ತರು ತಮ್ಮ ಮತ ವ್ಯರ್ಥ ಮಾಡಿಕೊಳ್ಳಬಾರದು ಎಂದ ಅವರು, ಕುಮಾರಸ್ವಾಮಿ ಅವರನ್ನು ಬಿಜೆಪಿ ಒಂದು ಸಲ ಮುಖ್ಯಮಂತ್ರಿಯಾಗಲು ಅವಕಾಶ ನೀಡಿದರು. ನಾವೂ ಸಹ ನೀಡಿದ್ದೆವು. ಆದರೆ, ನಿಭಾಯಿಸಿಕೊಂಡು ಹೋಗಲು ಅವರಿಂದ ಆಗಲಿಲ್ಲ. ಮುಂದೆಯೂ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದರು.