Asianet Suvarna News Asianet Suvarna News

ಬಂಡೆದ್ದ ಡಿವಿಎಸ್ ಕಾಂಗ್ರೆಸ್‌ನತ್ತ?: ಬಿಜೆಪಿಯ ಇನ್ನೊಬ್ಬ ಹಿರಿಯ ನಾಯಕನಿಂದ ಬಂಡಾಯ?

ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಇಂದು ಸುದ್ದಿಗೋಷ್ಠಿ ಕರೆಯುತ್ತೇನೆ. ಯಾವನಿರ್ಣಯ ಎಂದು ಈಗಲೇ ಹೇಳಿಬಿಟ್ಟರೆ, ಏನೂ ಉಳಿಯೋಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ ತಿಳಿದು ಹೀಗೆ ಮಾಡಿರುವುದು ಬೇಜಾರಾಗಿದೆ' ಎಂದ ಸದಾನಂದಗೌಡ

BJP Veteran Leader DV Sadananda Gowda Talks Over Join Congress grg
Author
First Published Mar 19, 2024, 7:05 AM IST

ಬೆಂಗಳೂರು(ಮಾ.19):  ಲೋಕಸಭಾ ಚುನಾವಣೆಯ ಟಿಕೆಟ್‌ಗೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್.ಈಶ್ವರಪ್ಪ ಬಳಿಕ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಡಿ.ವಿ.ಸದಾ ನಂದಗೌಡರೂ ಅಸಮಾಧಾನಗೊಂಡಿದ್ದು, ಮಂಗಳವಾರ ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. 'ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆ ಪಕ್ಷದ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಈ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಿ ಇಂದು ನನ್ನ ಅಂತರಾಳದ ವಿಚಾರವನ್ನು ತಿಳಿಸುತ್ತೇನೆ' ಎಂದು ಸದಾನಂದ ಗೌಡರು ತಿಳಿಸಿರುವುದು ಕುತೂಹಲ ಮೂಡಿಸಿದೆ. 

ಪಕ್ಷದ ಮುಖಂಡರು ಹಾಗೂ ಬೆಂಬಲಿಗರಿಂದ ಶುಭಹಾರೈಕೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ನನ್ನ ಹೆಸರು ಮಾತ್ರ ಬಂತು. ದೆಹಲಿ ಹಾಗೂ ಸ್ಥಳೀಯವಾಗಿ ಒಂದಷ್ಟು ವಿದ್ಯಮಾನ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ನಿಮಗೇ ಟಿಕೆಟ್ ಎಂದು ಹೇಳಿ ಕೊನೆಯ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ ಎಂದು ಹೇಳಿದರು.

ಸ್ಪರ್ಧೆ ಬಗ್ಗೆ ನಾನೇನೂ ಹೇಳಲ್ಲ, ಕಾಲ ಕೂಡಿಬರಲಿ: ಡಿವಿಎಸ್‌

'ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಇಂದು ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವನಿರ್ಣಯಎಂದು ಈಗಲೇ ಹೇಳಿಬಿಟ್ಟರೆ, ನಾಳೆಗೆ ಏನೂ ಉಳಿಯೋಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ ತಿಳಿದು ಹೀಗೆ ಮಾಡಿರುವುದು ಬೇಜಾ ರಾಗಿದೆ' ಎಂದು ಸದಾನಂದಗೌಡ ಹೇಳಿದರು.

ಚುನಾವಣಾ ರಾಜಕಾರಣದಿಂದ ದೂರ ಉಳಿಯಬೇಕು ಎಂದುಕೊಂಡಿದ್ದೆ. ಆದರೆ, ನೀವೇ ನಿಲ್ಲಬೇಕು ಎಂದು ರಾಜ್ಯ ಬಿಜೆಪಿಯ ಎಲ್ಲಾ ಪ್ರಮುಖರು ಹೇಳಿ ಎಳೆದು ತಂದರು. ಕೊನೆಯ ಹಂತದಲ್ಲಿ ರಕ್ಷಣೆಗೆ ಬರಲಿಲ್ಲ. ಚೂರು ಮುಜುಗರ ಮಾಡಿದ್ದಾರೆ. ಬಿಜೆಪಿ ಪಾರ್ಟಿ ವಿತ್ ಡಿಫರೆನ್ಸ್ ಎನ್ನಲು ಏನೂ ಉಳಿದಿಲ್ಲ. ರಾಜಕೀ ಯದಲ್ಲಿ ಏರುಪೇರು, ಮುಜುಗರ ಸಾಮಾನ್ಯ. ನನ್ನ ಕುಟುಂಬದವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಈ ಕುರಿತು ಮಂಗಳವಾರ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದರು.

ದೆಹಲಿ ಸೇರಿದಂತೆ ವಿವಿಧಡೆ ಅನೇಕ ವಿದ್ಯಮಾನ ನಡೆಯುತ್ತಿದೆ. ಅಂತರಾಳದ ವಿಚಾರ ಎಲ್ಲರ ಮುಂದೆ ಹೇಳಬೇಕಿದೆ ಎಂದರು. ಪುತ್ರನಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕೆ. ಎಸ್. ಈಶ್ವರಪ್ಪ ಅವರು ರೆಬೆಲ್ ಆಗಿರುವ ಕುರಿತ ಪತ್ರಕರ್ತರ ಪ್ರಶ್ನೆಗೆ, ಪಕ್ಷಕ್ಕಾಗಿ ದುಡಿದ ವರಿಗೆ ಬೇಸರವಾಗಿದೆ. ಬೇಸರಗೊಂಡಿರುವ ಎಲ್ಲರೂ ಸೇರಿ ಹೈಕಮಾಂಡ್ ಬಳಿ ತೆರಳಿ ಮಾತನಾಡಿ ತೀರ್ಮಾನ ತೆಗೆದುಕೊಳ್ಳೋಣ ಎಂದು ಈಶ್ವರಪ್ಪನವರಿಗೆ ಹೇಳಿದ್ದೆ. ಆದರೆ, ಈಗ ಅವರದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ನನ್ನನ್ನು ಬೇರೆ ಬೇರೆಯವರು ಸಂಪರ್ಕಿಸಿ ದ್ದಾರೆ. ಬಿಜೆಪಿ ಪ್ರಮುಖರು ಕೂಡ ನನ್ನೊಂದಿಗೆ ಚರ್ಚಿಸಿದ್ದಾರೆ. ಭಾನುವಾರ ಕೂಡ ನಮ್ಮ ಪಕ್ಷದ ಪ್ರಮುಖ ಪದಾಧಿಕಾರಿ ಭೇಟಿ ಮಾಡಿ ಸಾಂತ್ವನ ಮಾಡಿದ್ದಾರೆ. ದೆಹಲಿ ಸೇರಿದಂತೆ ವಿವಿಧಡೆ ಅನೇಕ ವಿದ್ಯಮಾನ ನಡೆಯುತ್ತಿದೆ. ಅಂತರಾಳದ ವಿಚಾರ ಎಲ್ಲರ ಮುಂದೆ ಹೇಳಬೇಕಿದೆ ಎಂದರು.

ಪುತ್ರನಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕೆ. ಎಸ್. ಈಶ್ವರಪ್ಪ ಅವರು ರೆಬೆಲ್ ಆಗಿರುವ ಕುರಿತ ಪತ್ರಕರ್ತರ ಪ್ರಶ್ನೆಗೆ, ಪಕ್ಷಕ್ಕಾಗಿ ದುಡಿದ ವರಿಗೆ ಬೇಸರವಾಗಿದೆ. ಬೇಸರಗೊಂಡಿರುವ ಎಲ್ಲರೂ ಸೇರಿ ಹೈಕಮಾಂಡ್ ಬಳಿ ತೆರಳಿ ಮಾತನಾಡಿ ತೀರ್ಮಾನ ತೆಗೆದುಕೊಳ್ಳೋಣ ಎಂದು ಈಶ್ವರಪ್ಪನವರಿಗೆ ಹೇಳಿದ್ದೆ. ಆದರೆ, ಈಗ ಅವರದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು

ಬೆಂ.ಉತ್ತರ ಟಿಕೆಟ್ ನೀಡಲು ಕೈ ಒಲವು? ಮೈಸೂರು ಕೇಳಿದ ಸದಾನಂದಗೌಡ?

ಬೆಂ.ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದಗೌಡ ಅವರಿಗೆ ಬೆಂ.ಉತ್ತರ ಕ್ಷೇತ್ರದಿಂದಲೇ ಟಿಕೆಟ್‌ ನೀಡುವ ಬಗ್ಗೆ ಕಾಂಗ್ರೆಸ್ಸಲ್ಲಿ ಪ್ರಾಥಮಿಕ ಚರ್ಚೆ ನಡೆದಿದೆ. ಬೆಂ. ಉತ್ತರ ಕ್ಷೇತ್ರಕ್ಕೆ ಹಾಲಿ ಕಾಂಗ್ರೆಸ್ ಶಾಸಕ ಪ್ರಿಯಕೃಷ್ಣ ಸರ್ಧೆಗೆ ಹಿಂದೇಟು ಹಾಕಿದ್ದಾರೆ. ಹೀಗಾಗಿ ಸದಾನಂದ ಗೌಡ ಹೆಸರು ಪರಿಶೀಲಿಸಲಾಗಿದೆ. ಆದರೆ ಸದಾನಂದ ಗೌಡಮೈಸೂರುಕ್ಷೇತ್ರದಿಂದ ಸ್ಪರ್ಧಿಸುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿಯಲ್ಲಿ ಬಿಎಸ್‌ವೈ, ಶೆಟ್ಟರ್‌, ಈಗ ಡಿವಿಎಸ್‌ ಕಡೆಗಣನೆ: ರೇಣುಕಾಚಾರ್ಯ ಕಿಡಿ

ರಾಜಕೀಯ ನಿವೃತ್ತಿ ಘೋಷಣೆ ಸಾಧ್ಯತೆ?

ಸದಾನಂದಗೌಡ ಕಾಂಗ್ರೆಸ್‌ಗೆ ಹೋಗುವ ಬದಲು ರಾಜಕೀಯದಿಂದಲೇ ನಿವೃತ್ತಿ ಘೋಷಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. 6 ತಿಂಗಳ ಹಿಂದೆಯೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಬಳಿಕ ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಹಾಗೂ ಅವರು

ಡಾ.ಸಿ.ಎನ್.ಅಶ್ವತ್ಥನಾರಾಯಣ ಸದಾನಂದಗೌಡರ ನಿವಾಸಕ್ಕೆ ತೆರಳಿ ಮತ್ತೊಮ್ಮೆ ಸ್ಪರ್ಧಿಸಬೇಕು ಎಂಬ ಮನವಿ ಮಾಡಿದ್ದರು. ವಾಸ್ತವವಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಹೊರಗಿನವರು ಬಂದು ಕಣಕ್ಕಿಳಿಯಬಹುದು ಎಂಬ ಆತಂಕದಿಂದ ಈ ನಾಯಕರು ಗೌಡರಿಗೆ ಒತ್ತಡ ಹೇರಿದ್ದರು. ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರೂ ಗೌಡರ ಹೆಸರನ್ನೇ ಪ್ರಮುಖವಾಗಿ ಶಿಫಾರಸು ಮಾಡಿದ್ದರು. ಹೀಗಾಗಿ, ಸದಾನಂದಗೌಡರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡರು. ಆದರೆ, ಕೊನೆಯ ಹಂತದಲ್ಲಿ ಟಿಕೆಟ್ ತಪ್ಪಿ ಹೋಯಿತು. ಇದು ಅವರಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios