ಬೆಂಗಳೂರು(ನ.11):  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತ ನೋಡಿ ಉಪ ಚುನಾವಣೆಯಲ್ಲಿ ಮತ ನೀಡಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಮಂಗಳವಾರ ಫಲಿತಾಂಶದ ಬೆನ್ನಲ್ಲೇ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿರಾ ಕ್ಷೇತ್ರ ಬಿಜೆಪಿ ಪಾಲಿಗೆ ಮರುಭೂಮಿ ಆಗಿತ್ತು. ಒಮ್ಮೆಯೂ ಕೂಡ ಕ್ಷೇತ್ರದಲ್ಲಿ ವಿಜಯದ ಪಾತಾಕೆ ಹರಿಸಿದೆ. ಕಾಂಗ್ರೆಸ್‌ನ ದುರಾಡಳಿ ಹಾಗೂ ಜನ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ನಾಯಕತ್ವದ ಸಮಸ್ಯೆಯೇ ಉದ್ಭವವಾಗಿಲ್ಲ. ಯತ್ನಾಳ ಅವರ ಹೇಳಿಕೆ ಬಗ್ಗೆ ರಾಜ್ಯಾಧ್ಯಕ್ಷರು ಈಗಾಗಲೇ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

'ಕಾಂಗ್ರೆಸ್ ಸೋಲಿಗೆ ಡಿಕೆಶಿ-ಸಿದ್ರಾಮಯ್ಯರಿಂದಲೇ ಮಾಸ್ಟರ್ ಪ್ಲಾನ್ : ಬಿಜೆಪಿ ಗೆಲುವು ಕನ್ಫರ್ಮ್'

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚುನಾವಣಾ ರಣ ನೀತಿ ವಿಫಲವಾಗಿಲ್ಲ. ಪ್ರಚಾರದ ವೇಳೆ ಎಲ್ಲಿಯೂ ನಾವು ಪಕ್ಷದ ಅಭ್ಯರ್ಥಿಗೆ ಹಿನ್ನಡೆಯಾಗುತ್ತದೆ ಎಂದು ಕೂಡ ಭಾವಿಸಿರಲಿಲ್ಲ. ಅಧಿಕ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದು, ಅದರಂತೆ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದ ಹೇಳಿದರು. ವಿಶ್ವಾಸವಿಟ್ಟು ಮತ ನೀಡಿದ ಎಲ್ಲ ಮತದಾರರಿಗೂ ಧನ್ಯವಾದಗಳು ಎಂದರು. ಈ ವೇಳೆ ಸಚಿವ ಕೆ.ಗೋಪಾಲಯ್ಯ ಹಾಗೂ ಬಿಜೆಪಿ ವಕ್ತಾರ ಗಣೇಶ್‌ ಕಾರ್ಣಿಕ್‌ ಇದ್ದರು.