Asianet Suvarna News Asianet Suvarna News

ಬಿ.ವೈ. ವಿಜಯೇಂದ್ರಗೆ ಕೊರೋನಾ ದೃಢ: ಆತಂಕದಲ್ಲಿ ಘಟಾನುಘಟಿ ನಾಯಕರು

ಕೊರೋನಾ ಸೋಂಕು ರಾಜಕಾರಣಿಗಳನ್ನೂ ಬಿಟ್ಟಿಲ್ಲ. ಇದೀಗ ಸಿಎಂ ಪುತ್ರನಿಗೆ ಸೋಂಕು ತಗುಲಿದೆ.

BJP vice President by vijayendra tests positive for Covid19 rbj
Author
Bengaluru, First Published Oct 2, 2020, 10:34 PM IST
  • Facebook
  • Twitter
  • Whatsapp

ಬೆಂಗಳೂರು, (ಅ.02): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಇಂದು (ಶುಕ್ರವಾರ) ಕೊರೋನಾ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್‌ನಲ್ಲಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ

 ಕೆ.ಆರ್.ಪೇಟೆ ಮಾದರಿಯಲ್ಲೇ ಶಿರಾ ಬೈ ಎಲೆಕ್ಷನ್‌ ಗೆಲ್ಲಲು ಬಿಜೆಪಿ ಪ್ಲಾನ್

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಎಂದು ಟ್ವೀಟ್​​ ಮಾಡಿದ್ದಾರೆ.

ಇನ್ನು ವಿಜಯೇಂದ್ರ ಅವರು ಶಿರಾ ಉಪಚುನಾವಣೆಯ ಕಾರ್ಯಕರ್ತರ ಸಭೆ-ಸಮಾರಂಭಗಳಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೇ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿದ್ದಾರೆ.  ಇದೀಗ ಅವರೆಲ್ಲರಿಗೂ ಆತಂಕ ಮೂಡಿಸಿದೆ.

Follow Us:
Download App:
  • android
  • ios