ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ- ಆದರೂ ಕಾಂಗ್ರೆಸ್‌ನವರು ಗೆದ್ದಿರುವಂತೆ ಪೋಸ್‌ ಕೊಡ್ತಿದ್ದಾರೆ: ಸಿಎಂ ಬೊಮ್ಮಾಯಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ದಿನದ ಭೇಟಿ ಸಂಚಲನ‌ ಉಂಟು ಮಾಡಿದೆ. ಕರ್ನಾಟಕದಲ್ಲಿ ಬಿಜೆಪಿ ಅಲೆ ಎದ್ದಿದೆ. ಆದರೆ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆಂದು ಪೋಸ್ ಕೊಡುತ್ತಿದ್ದಾರೆ.

BJP Wave in State but congress leaders given poses they have already won CM Bommai sarcasm sat

ಹುಬ್ಬಳ್ಳಿ (ಜ.29):  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ  ಒಂದು ದಿನದ ಭೇಟಿ  ಸಂಚಲನ‌ ಉಂಟು ಮಾಡಿದ್ದು, ಕರ್ನಾಟಕದಲ್ಲಿ ಬಿಜೆಪಿ ಅಲೆ ಎದ್ದಿದೆ. ಯಾರು ಏನೇ ಹೇಳಿದರೂ ಕರ್ನಾಟಕದಲ್ಲಿ ಬಿಜೆಪಿ ಅಲೆಯಿದೆ. ಆದರೆ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆಂದು ಪೋಸ್ ಕೊಡುತ್ತಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಬಗ್ಗೆ ಲೇವಡಿ ಮಾಡಿದರು.

ಹುಬ್ಬಳ್ಳಿಯ ಆದರ್ಶನಗರದ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಬಹಳ ಗಟ್ಟಿ ಹಾಗೂ ಪ್ರಬಲವಾಗಿದೆ.  ಅದಕ್ಕೆ ಇನ್ನಷ್ಟು ಶಕ್ತಿ ಹುರುಪು ಹುಮ್ಮಸ್ಸನ್ನು ಅಮಿತ್ ಷಾ ನೀಡಿದ್ದಾರೆ.  ಸಾರ್ವಜನಿಕರಲ್ಲಿ ಇರುವ ಭಾವನೆಗಳು ಎಲ್ಲಾ ಸಭೆಗಳಲ್ಲಿ ವ್ಯಕ್ತವಾಗಿದೆ. ಕಾಂಗ್ರೆಸ್ ನವರು ನಾವೇ ಅಧಿಕಾರಕ್ಕೆ ಬಂದೇಬಿಟ್ಟಿದ್ದೇವೆ ಎಂದು  ಫೋಜ್ ಕೊಡುತ್ತಿದ್ದಾರೆ. ಯಾರ ಏನೇ ಹೇಳಲಿ, ಸತ್ಯ  ಬೇರೆಯೇ ಇದೆ. ನಮ್ಮ ನಾಯಕರು ಬಂದ ಸಂದರ್ಭದಲ್ಲಿ ಅದು ಅಭಿವ್ಯಕ್ತವಾಗುತ್ತಿದೆ. ಜನ ದೊಡ್ಡ ಸಂಖ್ಯೆಯಲ್ಲಿ ಬರುವುದಷ್ಟೇ ಅಲ್ಲ , ಹುರುಪು, ಸ್ಫೂರ್ತಿ ವ್ಯಕ್ತವಾಗುತ್ತಿದೆ. ಇದರಿಂದ ನಮ್ಮ ಗೆಲವು ಖಂಡಿತ. ಪಕ್ಷದ ಸಂಘಟನೆ ಬೂತ್ ಮಟ್ಟದಿಂದ ಪ್ರಬಲವಾಗಿದೆ. ಅದೇ ನಮ್ಮ ಆಧಾರ ಮತ್ತು ಶಕ್ತಿ ಎಂದರು. 

ವಿಎಸ್‌ಐಎಲ್‌ ಉಳಿವಿಗೆ ಸಿಎಂ ಬಳಿ ನಿಯೋಗ: ಸಂಸ​ದ ಬಿ.ವೈ.​ರಾ​ಘ​ವೇಂದ್ರ

ಚುನಾವಣೆ ತಯಾರಿಗೆ ಸೂಚನೆ: ಬೆಳಗಾವಿ ಸಭೆಯಲ್ಲಿ ರಾಜ್ಯದ  ನಾಯಕರಿಗೆ ವಿಶೇಷ ಸೂಚನೆ ಕೊಟ್ಟಿಲ್ಲ. ಆದರೆ ರಾಜ್ಯ ಮಟ್ಟದಲ್ಲಿ ಚುನಾವಣೆಗೆ ತಯಾರಿ ‌ಮಾಡಿಕೊಳ್ಳಲು ಸೂಚನೆ ಕೊಟ್ಟಿದ್ದಾರೆ. ಕರ್ನಾಟಕದ ರಾಜಕೀಯ ಸಂಸ್ಕೃತಿ  ವ್ಯಕ್ತಿ ಆಧಾರಿತವಲ್ಲ. ಕಳೆದ ಒಂದೂವರೆ ವರ್ಷಗಳಿಂದ ಆರೋಪ ಪ್ರತ್ಯಾರೋಪವನ್ನು  ಮಾಡಿಲ್ಲ.  ನನ್ನ ಮೇಲೆ ಹಲವಾರು ಇಲ್ಲಸಲ್ಲದ ಮಾತುಗಳನ್ನಾಡಿದಾಗಲೂ ಕೂಡ  ನಾನು ಅತ್ಯಂತ ಸಂಯಮದಿಂದ ಉತ್ತರ ಕೊಟ್ಟಿದ್ದೇನೆ.  ಕರ್ನಾಟಕದ ರಾಜಕೀಯ ಸಂಸ್ಕೃತಿ  ವ್ಯಕ್ತಿ ಆಧಾರಿತವಲ್ಲ, ಅಥವಾ ದ್ವೇಷಾಧಾರಿತವಲ್ಲ. ವಿಷಯಾಧಾರಿತ ಹಾಗೂ ಅಭಿವೃದ್ಧಿಯಾಧಾರಿತವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ: ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಇಟ್ಟು ಕೊಂಡೇ ಜನರ ಮುಂದೆ ಹೋಗುತ್ತಿದ್ದೇವೆ. ನೀವು ನಮ್ಮ ಅಭಿಯಾನಗಳಲ್ಲಿ ಇದನ್ನು ಕಾಣಬಹುದು. ನಾವು ಯಾವುದೇ ಟೀಕೆ ಟಿಪ್ಪಣಿಗಳನ್ನು ಮಾಡದೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳ ಸಾಧನೆಗಳನ್ನು ಆಧಾರಿಸಿಯೇ ಹೋಗುತ್ತಿದ್ದೇವೆ. ನಕಾರಾತ್ಮಕ ವಿಚಾರಗಳಿಲ್ಲ. ಕಾಂಗ್ರೆಸ್ ಪಕ್ಷ ವಿಶೇಷವಾಗಿ ಬಹಳ ಹತಾಶರಾಗಿದ್ದಾರೆ.  ಅವರು ಬಳಸುವ ಭಾಷೆಯಲ್ಲಿ ವ್ಯಕ್ತವಾಗ್ತಿದೆ. ಕರ್ನಾಟಕದ ರಾಜಕಾರಣದಲ್ಲಿ ಎಂದೆಂದೂ  ಬಳಸದ  ಭಾಷೆ ಬಳಸುವುದನ್ನು ನಾವು ಕಾಣುತ್ತಿದ್ದೇವೆ. ಇದು ಹತಾಶೆಯ ಸಂಕೇತ ಎಂದರು. 

ಈ ಬಾರಿಯೂ ಜನಪರ ಬಜೆಟ್‌ ಮಂಡನೆ: ಸಿಎಂ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ: ಬಿ.ಎಲ್. ಸಂತೋಷ್ ಅವರು ಪಕ್ಷದ ಸಂಘಟಾನತ್ಮಕ ವಿಷಯವಾಗಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ , ಬಾಗಲಕೋಟೆ, ಬಿಜಾಪುರಕ್ಕೆ ಭೇಟಿ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ವಿಚಾರವಿದ್ದರೂ ಅಂತಿಮವಾಗಿ ಪಕ್ಷದ ಹಿರಿಯರು ಹೇಳುವುದನ್ನು ನಾವು ಕೇಳುತ್ತೇವೆ. ಅದೇ ಆಗಿರೋದು. ಬೆಳಗಾವಿಯಲ್ಲಿಯೂ ಭಿನ್ನಮತ ಇಲ್ಲ. ಒಟ್ಟಾರೆ ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಸುಳಿಯಲು ಅವಕಾಶ ಇಲ್ಲ. ಇದಕ್ಕೆ ಕಾರಣ ನಾವು ಯಾವುದೇ ಚರ್ಚೆ ಇದ್ದರೂ ನಮ್ಮ ಹಿರಿಯರು ಹೇಳಿದಂತೆ ನಾವು ಕೇಳುತ್ತೇವೆ ಎಂದರು.

ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿವಾಗಿಲ್ಲ: ಚುನಾವಣೆ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ  ಪ್ರತಿಕ್ರಿಯೆ ನೀಡಿ ಸಮೀಕ್ಷಾ ಕಾರ್ಯಗಳು ನಡೆಯುತ್ತಿವೆ. ಆದರೆ ಯಾವುದೂ ಅಧಿಕೃತವಾಗಿ ಆಗಿಲ್ಲ. ಮಂಡ್ಯ ಉಸ್ತುವಾರಿ ಬಡಲಾವಣೆಯಾಗಿರುವುದಕ್ಕೆ ಗೋ ಬ್ಯಾಕ್ ಅಶೋಕ್ ಪ್ರತಿಭಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಯಾರೋ ನಾಲ್ಕ ಜನ ಮಾಡ್ತಾರೆ. ಅದನ್ನು ಮಾಧ್ಯಮಗಳು  ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು.

Latest Videos
Follow Us:
Download App:
  • android
  • ios