ವಿಜಯೇಂದ್ರ ಕಾರ್ಯನಿರ್ವಹಣೆಯಿಂದ ಬಿಜೆಪಿಗೆ ಲಾಭ: ಜೆ.ಪಿ.ನಡ್ಡಾ

ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ನೇಮಕದ ಹಿಂದೆ ಯಾವ ಸಂದೇಶ ಅಡಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದ ಮೂಲಕ ಈ ನಾಯಕತ್ವವನ್ನು ಗಳಿಸಿದ್ದಾರೆ ಎನ್ನುವುದೇ ಅದರ ಮೊದಲ ಸಂದೇಶ. 

BJP will benefit from BY Vijayendra performance Says JP Nadda gvd

ಬೆಂಗಳೂರು (ನ.16): ಬಿ.ವೈ.ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದಿಂದಾಗಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರು ಪಕ್ಷದ ಆಸ್ತಿ ಎನ್ನುವುದನ್ನು ಅವರು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ‘ದೈನಿಕ್ ಜಾಗರಣ್’ ಹಿಂದಿ ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ನೇಮಕದ ಹಿಂದೆ ಯಾವ ಸಂದೇಶ ಅಡಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದ ಮೂಲಕ ಈ ನಾಯಕತ್ವವನ್ನು ಗಳಿಸಿದ್ದಾರೆ ಎನ್ನುವುದೇ ಅದರ ಮೊದಲ ಸಂದೇಶ. 

ಪಕ್ಷ ಸಂಘಟನೆಗೆ ಸಾಕಷ್ಟು ಸಮಯವನ್ನು ಮೀಸಲಿಟ್ಟಿದ್ದಲ್ಲದೆ, ಅವರ ಕಾರ್ಯನಿರ್ವಹಣೆಯಿಂದ ಬಿಜೆಪಿಗೆ ಲಾಭವಾಗಿದೆ. ಯುವ ನಾಯಕರಾಗಿರುವ ವಿಜಯೇಂದ್ರ ಅವರ ನೇಮಕವು ಬಿಜೆಪಿಯು ಶ್ರಮಶೀಲ ಯುವಶಕ್ತಿಯನ್ನು ಗೌರವಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ತಿಳಿಸಿದ್ದಾರೆ. ನಾವು ಯಾವಾಗಲೂ ಧನಾತ್ಮಕ ಬದಲಾವಣೆ ಮತ್ತು ಸುಧಾರಣೆಯನ್ನು ಪ್ರತಿಪಾದಿಸಿದ್ದೇವೆ. ಈ ನೇಮಕಾತಿಯು ಸಕಾರಾತ್ಮಕ ಬೆಳವಣಿಗೆಗಳನ್ನು ಉತ್ತೇಜಿಸುವ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ ಮತ್ತು ನೀವು ಪಕ್ಷದ ಕರ್ನಾಟಕ ಘಟಕದಲ್ಲಿ ಗಮನಾರ್ಹ ಬದಲಾವಣೆಗಳನ್ನು ನಿರೀಕ್ಷಿಸಬಹುದು ಎಂದೂ ನಡ್ಡಾ ಹೇಳಿದ್ದಾರೆ.

ಮತ್ತೆ ಮೋದಿ ಗೆಲ್ಲಿಸಲು ಪ್ರಯತ್ನಿಸೋಣ: ಸಂಸದ ಪ್ರಜ್ವಲ್‌ ರೇವಣ್ಣ

ಯಳಂದೂರಿನಲ್ಲಿ ಸಂಭ್ರಮಾಚರಣೆ: ಪಟ್ಟಣದ ಗಾಂಧಿ ವೃತದಲ್ಲಿ ( ವಾಲ್ಮೀಕಿ ವೃತ್ತ ) ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಬಿ. ಎಸ್. ಯಡಿಯೂರಪ್ಪ ಅಭಿಮಾನಿಗಳು ನೂತನ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರರವರ ಪದಗ್ರಹಣ ಹಿನ್ನಲೆ, ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಯಳಂದೂರು ಬಿಜೆಪಿ ಮಂಡಲ‌ ಅಧ್ಯಕ್ಷ ಮಹೇಶ್ ಮಾತನಾಡಿ, ಮುಂಬರುವ ಲೋಕಸಭಾ ಸಮರಕ್ಕೆ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಯುವ ನೇತಾರ ವಿಜಯೇಂದ್ರರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರುವುದು ನಮಗೆಲ್ಲ ಸಂತೋಷವಾಗಿದೆ ಎಂದರು.

ವಿಜಯೇಂದ್ರ ಪ್ರತಿಭೆಗೆ ಮೋದಿ, ಅಮಿತ್‌ ಶಾ ಮನ್ನಣೆ: ಎಸ್‌.ಎಂ.ಕೃಷ್ಣ

ವಿಜಯೇಂದ್ರ ನಾಯಕತ್ವದ ವೈಖರಿಯನ್ನು ಗುರುತಿಸಿ ಹೈಕಮಾಂಡ್ ಇವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರಿಗೆ ಬಿಜೆಪಿ ಮುಖಂಡರಿಂದ ಅಭಿನಂದನೆಗಳನ್ನು ತಿಳಿಸಿದರು. ಬಿ ವೈ ವಿಜಯೇಂದ್ರಗೆ ಬಿಜೆಪಿಯ ಎಲ್ಲಾ‌ ಪದಾಧಿಕಾರಿಗಳು, ಕಾರ್ಯಕರ್ತರು ಬೆನ್ನೆಲುಬಾಗಿ ನಿಂತಿರುತ್ತೇವೆ. ನಮ್ಮ ನೆಚ್ಚಿನ ನಾಯಕ ಬಿ ಎಸ್ ಯಡಿಯೂರಪ್ಪರವರಂತೆಯೇ ನಾಯಕತ್ವಗುಣವನ್ನು ಬಿ ವೈ ವಿಜಯೇಂದ್ರ ಹೊಂದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನವನ್ನು ಪಡೆಯುತ್ತೇವೆಂದು ತಿಳಿಸಿದರು.

Latest Videos
Follow Us:
Download App:
  • android
  • ios