ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಬಿ.ವೈ.ವಿಜಯೇಂದ್ರ
ಆರ್‌ಎಸ್‌ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿಂತೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಸಂಘ ಪರಿವಾರದ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಮಲ್ಲಿಕಾರ್ಜುನ ಖರ್ಗೆಯಂತಹ ನಾಯಕರಿಗೆ ಈ ಹೇಳಿಕೆ ಶೋಭೆ ತರಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಶಿವಮೊಗ್ಗ(ನ.20): ಮಹಾರಾಷ್ಟ್ರ, ಜಾರ್ಖಂಡ್ ಎರಡೂ ರಾಜ್ಯಗಳ ಮತದಾನ ಮುಗಿದಿದೆ. ರಾಜ್ಯದ ಉಪಚುನಾವಣೆಗಳ ಫಲಿತಾಂಶವೂ ಇದೆ. ನ.23 ರಂದು ಫಲಿತಾಂಶ ಬರಲಿದೆ. ಎಕ್ಸಿಟ್ ಪೋಲ್ ಕೂಡ ನೋಡಿದ್ದೇವೆ. ಮಹಾರಾಷ್ಟ್ರದಲ್ಲಿ ಎನ್‌ಡಿಎ, ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೂ ಸಹ ಇದೇ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಎನ್‌ಡಿಎ ಬಹುಮತ ಬಂದರೂ ಚುನಾವಣೆಯಲ್ಲಿ ನಾವು ಗೆದ್ದೇವೋ, ಕಾಂಗ್ರೆಸ್ ಗೆಲ್ಲುತ್ತೋ ಎನ್ನುವ ಆರ್ಭಟ ಇತ್ತು. ಫಲಿತಾಂಶದ ನಂತರ ಕಾಂಗ್ರೆಸ್ ಸಂಪೂರ್ಣ ನೆಲ ಕಚ್ಚುತ್ತದೆ. ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯರನ್ನ ಕೆಳಗಿಳಿಸಲು ಕಾಂಗ್ರೆಸ್‌ನಲ್ಲೇ ಕುದುರೆ ವ್ಯಾಪಾರ ನಡೆದಿದೆ: ಬಿವೈ ವಿಜಯೇಂದ್ರ
ಆರ್‌ಎಸ್‌ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿಂತೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಸಂಘ ಪರಿವಾರದ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಮಲ್ಲಿಕಾರ್ಜುನ ಖರ್ಗೆಯಂತಹ ನಾಯಕರಿಗೆ ಈ ಹೇಳಿಕೆ ಶೋಭೆ ತರಲ್ಲ ಎಂದು ಹೇಳಿದ್ದಾರೆ.
ಈ ಸರಕಾರದಲ್ಲಿ ಅನುದಾನ ಬರುತ್ತಿಲ್ಲ ಎಂಬ ಕಾಂಗ್ರೆಸ್ ಶಾಸಕರ ಆರೋಪ ವಿಚಾರದ ಬಗ್ಗೆ ಮಾನಾಡಿದ ಬಿ.ವೈ. ವಿಜಯೇಂದ್ರ ಅವರು, ಕಾಂಗ್ರೆಸ್ ಶಾಸಕರಾದ ರಾಜು ಕಾಗೆ ಅವರೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಅಂದಿದ್ದಾರೆ. ಕಾಂಗ್ರೆಸ್ ಶಾಸಕ ಆಗಿರೋದು ದುರ್ದೈವ ಅಂತಾ ಮತ್ತೊಬ್ಬ ಶಾಸಕ ಅಂದಿದ್ದಾರೆ. ಇಂತಹ ಪರಿಸ್ಥಿತಿ ಯಾವಾಗಲೂ ಬಂದಿರಲಿಲ್ಲ. ಗ್ಯಾರಂಟಿ ಅನುಷ್ಠಾನದಲ್ಲಿ ವಿಫಲವಾಗಿದ್ದಾರೆ. ಕಾಂಗ್ರೆಸ್ ಶಾಸಕರು ಹತಾಶರಾಗಿದ್ದಾರೆ ಎಂದು ಹೇಳಿದ್ದಾರೆ.
ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ರೈತರನ್ನು ಬೀದಿಗೆ ತರುವ ಕೆಲಸ ಮಾಡ್ತಿದೆ. ಬಿಜೆಪಿ ನಾಯಕರು ರೈತರು, ಬಡವರ ಪರ ಇದ್ದೇವೆ. ಬಿಪಿಎಲ್ ಕಾರ್ಡ್ ಕೂಡ ರದ್ದು ಮಾಡಿ ಎಪಿಎಲ್ ಮಾಡುತ್ತಿದೆ. ಈ ರೀತಿ ಹುಚ್ಚುತನ ಮಾಡಲು ಬಿಡಲ್ಲ. ಕಾಂಗ್ರೆಸ್ ದಿವಾಳಿಯಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹರಿಹಾಯ್ದಿದ್ದಾರೆ.