'2023ಕ್ಕೆ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ : ಬಿಜೆಪಿಗೆ ಅಧಿಕಾರ ಖಚಿತ'
- 2023ರಲ್ಲಿ ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವ
- BJP ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿಕೆ
ಚಿಕ್ಕಬಳ್ಳಾಪುರ (ಆ.16): ಮುಂದಿನ 2023ರಲ್ಲಿ ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದರು.
ನಗರದಲ್ಲಿ ಭಾನುವಾರ ನಡೆದ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಮಾತನಾಡಿದ ಅವರು ಸರ್ಕಾರ ಹೆಚ್ಚು ಕಾಲ ಉಳಿಯಲ್ಲ ಎಂಬ ವಿಪಕ್ಷ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದರು.
ಬೊಮ್ಮಾಯಿ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನಗೊಳ್ಳಬಹುದು: ಹೀಗೊಂದು ಭವಿಷ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದಾಗಲೇ ವಿರೋಧ ಪಕ್ಷಗಳಿಗೆ ಬೊಮ್ಮಾಯಿ ದಕ್ಷ, ಅಧ್ಯಯನಶೀಲ, ರಾಜಕಾರಣಿ ಎನ್ನುವುದು ಗೊತ್ತಾಗಿದೆ ಎಂದು ಹೇಳಿದರು.
ಶೀಘ್ರದಲ್ಲೇ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪತನವಾಗಲಿದೆ. ಹಲವು ಮುಖಂಡರು ಸಚಿವ ಸ್ಥಾನಕ್ಕಾಗಿ ಮುನಿಸಿಕೊಂಡರೆ ಇನ್ನು ಹಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಇದರಿಂದ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೀಗ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.