ಅಧಿಕಾರಕ್ಕಾಗಿ ಬಿಜೆಪಿ ಹುಸಿ ಭರವಸೆ ನೀಡುವುದಿಲ್ಲ: ಸಂಸದ ಮುನಿಸ್ವಾಮಿ
ಜಾತಿ, ಮತ, ಧರ್ಮ, ಪಕ್ಷಭೇದ ಮರೆತು ದೇಶದ ಸಮಗ್ರ ಅಭಿವೃದ್ಧಿ ಮತ್ತು ಕುಟುಂಬ ರಕ್ಷಣೆಗೆ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದ ಕೇಂದ್ರ ಸರ್ಕಾರ ಇದರ ಬಗ್ಗೆ ಜನತೆಗೆ ಅರಿವು ಮೂಡಿಸುವ ಉದ್ದೇಶವೇ 'ವಿಕಸಿತ ಭಾರತ ಸಂಕಲ್ಪ ಯಾತ್ರೆ' ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಬಂಗಾರಪೇಟೆ (ಜ.07): ಜಾತಿ, ಮತ, ಧರ್ಮ, ಪಕ್ಷಭೇದ ಮರೆತು ದೇಶದ ಸಮಗ್ರ ಅಭಿವೃದ್ಧಿ ಮತ್ತು ಕುಟುಂಬ ರಕ್ಷಣೆಗೆ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದ ಕೇಂದ್ರ ಸರ್ಕಾರ ಇದರ ಬಗ್ಗೆ ಜನತೆಗೆ ಅರಿವು ಮೂಡಿಸುವ ಉದ್ದೇಶವೇ 'ವಿಕಸಿತ ಭಾರತ ಸಂಕಲ್ಪ ಯಾತ್ರೆ' ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ತಾಲೂಕಿನ ಐನೋರ ಹೊಸಹಳ್ಳಿ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಶಾಖೆ ಸಹಯೋಗದೊಂದಿಗೆ "ವಿಕಸಿತ ಭಾರತ ಸಂಕಲ್ಪ ಯಾತ್ರೆ" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜನರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ. ಕೇಂದ್ರ ಸರಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವುದೇ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದರು.
ಎಚ್.ಡಿ.ಕುಮಾರಸ್ವಾಮಿ ಈ ಮಟ್ಟಕ್ಕೆ ಇಳಿಬಾರದು: ಸಚಿವ ರಾಜಣ್ಣ ತಿರುಗೇಟು
ಬಡವರಿಗಾಗಿ ಜನೌಷಧಿ ಕೇಂದ್ರ: ನಾಗರಿಕರು ಅನಾರೋಗ್ಯಕ್ಕೆ ಈಡಾದಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಔಷಧಿಗಳನ್ನು ಖರೀದಿಸಲು ಔಷಧಿಗಳ ಮಳಿಗೆಗೆ ತೆರಳಿದಾಗ ಅಲ್ಲಿ ಔಷಧಿಗಳ ಬೆಲೆ ದುಬಾರಿಯಾಗಿರುತ್ತದೆ, ಬಡವರು ಔಷಧಿಗಳನ್ನು ಖರೀದಿಸಲಾಗದ ಪರಿಸ್ಥಿತಿಯನ್ನು ಕಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಔಷಧಿಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಜನ ಔಷಧಿ ಕೇಂದ್ರಗಳನ್ನು ತೆರೆದಿದ್ದಾರೆ ನೀವು ಇದನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದರು, ಹಾಗೂ 31 ಕೋಟಿ ರು.ಗಳ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾರ್ಯ ಆರಂಭಿಸಲಾಗುವುದು, ಬಂಗಾರಪೇಟೆ ಪಟ್ಟಣದಲ್ಲಿ 70 ಕೋಟಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಬಿಜೆಪಿ ಹುಸಿ ಬರವಸೆ ನೀಡೋಲ್ಲ: ಹುಸಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರುವುದು ಬಿಜೆಪಿಯ ಜಾಯಮಾನವಲ್ಲ ನೀಡಿದ ಭರವಸೆಗಳನ್ನು ಪೂರಕವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಾ ಬರುತ್ತಿದೆ ಎಂದು ಮುನಿಸ್ವಾಮಿ ಹೇಳಿದರು.
ಸಿದ್ದರಾಮಯ್ಯ ಸರ್ಕಾರದಿಂದ ದಲಿತ ಸಮಾಜಗಳಿಗೆ ಅನ್ಯಾಯ: ಬಿ.ವೈ.ವಿಜಯೇಂದ್ರ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ವಿ. ಮಹೇಶ್ ಪುರಸಭೆ ಸದಸ್ಯ ಕಪಾಲಿಶಂಕರ್, ಬಿಜೆಪಿ ಹಿರಿಯ ಮುಖಂಡರಾದ ಹನುಮಪ್ಪ, ಅಂಬರೀಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಮನೋಜ್, ಸಿ.ಬಾಬು, ಗುಟ್ಟಹಳ್ಳಿ ಬಾಬು, ನಾಗರಾಜ್, ವಿದ್ಯಾಸಾಗರ್ ಬಾಬು, ಇರ್ಫಾನ್ ಬೇಗ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಶ್ವಂತ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಆಶಿಶ್ ವರ್ಮ, ಉಪ ವ್ಯವಸ್ಥಾಪಕರಾದ ಜ್ಯೋತಿ ವೈ ಮತ್ತಿತರರು ಇದ್ದರು.