150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೀವಿ: ಕಟೀಲ್
ಈಗಾಗಲೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷವು ಅನೇಕ ಬದಲಾವಣೆಗಳನ್ನು ಮಾಡಿದೆ. ಇದು ಪಕ್ಷವು ಅಧಿಕಾರಕ್ಕೆ ಬರಲು ಪೂರಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ನಳಿನ್ ಕುಮಾರ್ ಕಟೀಲ್
ಲಿಂಗಸುಗೂರು(ಏ.20): ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ಹೊಸ ಪ್ರಯೋಗ ಹಾಗೂ ಹೊಸ ಬದಲಾವಣೆಯೊಂದಿಗೆ ಚುನಾವಣೆ ಅಖಾಡಕ್ಕೆ ಧುಮುಕಿದ್ದು ಬಿಜೆಪಿ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷವು ಅನೇಕ ಬದಲಾವಣೆಗಳನ್ನು ಮಾಡಿದೆ. ಇದು ಪಕ್ಷವು ಅಧಿಕಾರಕ್ಕೆ ಬರಲು ಪೂರಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಮೋದಿ ಬಂದರೂ ಕ್ಷೇತ್ರದ ಜನ ನನ್ನ ಕೈಬಿಡಲ್ಲ'
ರಾಜ್ಯದಲ್ಲಿರುವ ಲಿಂಗಾಯತರಿಗೆ ಬಿಜೆಪಿ ಹೆಚ್ಚಿನ ಪ್ರಾಧಾನ್ಯತೆ ನೀಡಿದೆ. ಲಿಂಗಾಯತ ಸಮುದಾಯದ ಮೂವರಿಗೆ ಮುಖ್ಯಮಂತ್ರಿ ಮಾಡಲಾಗಿದೆ. ಇದನ್ನು ಸಹಿಸದ ಕಾಂಗ್ರೆಸ್‌ನವರು ಬಿಜೆಪಿ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ತಾಕತ್ತು ಇದ್ದರೆ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದು ಘೋಷಣೆ ಮಾಡಲಿ ಎಂದು ಸವಾಲು ಹಾಕಿದರು.
ಜಗದೀಶ ಶೆಟ್ಟರ್‌ಗೆ ಬಿಜೆಪಿಯಲ್ಲಿ 2 ಸಲ ವಿರೋಧ ಪಕ್ಷದ ನಾಯಕನ ಸ್ಥಾನ, ಮುಖ್ಯಮಂತ್ರಿ, ಮಂತ್ರಿ ಸೇರಿದಂತೆ ಅವಕಾಶ ನೀಡಲಾಗಿತ್ತು. ಇದರ ಜೊತೆಗೆ ಪಕ್ಷದ ಹಿರಿಯ ಬಿಜೆಪಿ ಬಿಡಬೇಡಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದರು ಪಕ್ಷ ತೊರೆದಿದ್ದಾರೆ. ಅವರಿಗೆ ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಸೋಲಲಿದ್ದಾರೆ ಎಂದು ಹೇಳಿದರು.
ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ, ವರುಣಾದಲ್ಲಿ ಸಿದ್ದು ಅದ್ದೂರಿ ಕಾರ್ಯಕ್ರಮ!
ಪರಿಶಿಷ್ಟಜಾತಿಗೆ ಮೀಸಲಾದ ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಾನಪ್ಪ ವಜ್ಜಲ್ ಈ ಹಿಂದೆ ಶಾಸಕರಾಗಿ ಉತ್ತಮ ಕಾರ್ಯ ಮಾಡಿದ್ದು ಡಬಲ್ ಎಂಜಿನ್ ಸರ್ಕಾರದ ಯೋಜನೆಗಳ ಬೆಂಬಲಿಸಿ ಜನರು ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ. ಇದಕ್ಕೆ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದ ಜನರೇ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದರು. ಈ ವೇಳೆ ಬಿಜೆಪಿ ಪ್ರಚಾರಕ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ, ಈಶ್ವರ ವಜ್ಜಲ್ ಇದ್ದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.