ದೇಶದ ಪಂಚರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಐದು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಖಚಿತ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಭೋಪಾಲ್ : ದೇಶದ ಪಂಚರಾಜ್ಯಗಳಲ್ಲಿ ಚುನಾವಣಾ ಕಾವು ಗರಿಗೆರಿದೆ. ಇದೇ ವೇಳೆ ಮಧ್ಯ ಪ್ರದೇಶದ, ಚತ್ತೀಸ್ ಗಢ, ರಾಜಸ್ಥಾನದಲ್ಲಿ ಮುಂದಿನ ಸರ್ಕಾರ ಬಿಜೆಪಿಯದ್ದೇ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಾವುದೇ ರೀತಿಯ ಮೈತ್ರಿ ಮಾಡಿಕೊಂಡರೂ ಸಹ ಬಿಜೆಪಿಗೆ ಗೆಲುವು ಖಚಿತವಾಗಿದೆ. ಮೂರು ರಾಜ್ಯಗಳಲ್ಲಿ ಸರ್ಕಾರ ರಚನೆ ಬಿಜೆಪಿಯಿಂದಲೇ ಆಗಲಿದೆ ಎಂದು ಹೇಳಿದ್ದಾರೆ. 

ಭೊಪಾಲ್ ನಲ್ಲಿ ಮಾತನಾಡಿದ ಅಮಿತ್ ಶಾ ಮೂರು ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಬಿಜೆಪಿ ತಮ್ಮ ಸಾಮರ್ಥ್ಯವನ್ನು ತೋರಿಸಲಿದೆ ಎಂದು ಹೇಳಿದ್ದಾರೆ.

ಅಲ್ಲದೇ ತೆಲಂಗಾಣ ಹಾಗೂ ಮಿಜೋರಾಂ ನಲ್ಲಿಯೂ ಕೂಡ ಬಹುಮತ ಪಡೆದುಕೊಂಡು ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ.