ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ಇದೇ ನವೆಂಬರ್ 10 ರಂದು ಪ್ರಕಟವಾಗಲಿದ್ದು ಬಿಜೆಪಿ ಗೆಲುವು ನಿಶ್ಚಿತ ಎನ್ನಲಾಗಿದೆ. 

ಬೆಂಗಳೂರು (ನ.04) : ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಎರಡೂ ಕಡೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ ಎಂದು ಸಚಿವ ಎಸ್‌ ಟಿ ಸೋಮಶೇಖರ್ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು ಇದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಮತಪೆಟ್ಟಿಗೆ ಬಗ್ಗೆ ಅಪಸ್ವರ ಎತ್ತುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಗೆದ್ದರೆ ಜನಾರ್ದನ ತೀರ್ಪು : ಸೋತರೆ ಇವಿಎಂ ಫಾಲ್ಟ್

ರಾಜರಾಜೇಶ್ವರಿ ನಗರದಲ್ಲಿ ಶೇಕಡಾವಾರು ಮತದಾನ ಕಡಿಮೆಯಾದರೂ ಬಿಜೆಪಿ ಗೆಲುವು ನಿಶ್ಚಿತ. ಮುನಿರತ್ನ ಅವರ ಕಾರ್ಯಗಳು ಗೆಲುವು ತಂದುಕೊಡಲಿದೆ ಎಂದು ಸಚಿವರು ತಿಳಿಸಿದರು.

ದಸರಾದಂತೆ ಪಂಚಲಿಂಗ ದರ್ಶನ ಮಹೋತ್ಸವವನ್ನು ಸರಳವಾಗಿ ಮಾಡಬೇಕು ಎಂಬುದು ಸರ್ಕಾರದ ಉದ್ದೇಶ. ಹಾಗಾಗಿ ಸಭೆಯಲ್ಲಿ ಅಧಿಕಾರಿಗಳ ಮಾಹಿತಿ ಪಡೆದು ನಿರ್ಧರಿಸಲಾಗುತ್ತದೆ ಎಂದು ಸಚಿವರು ಹೇಳಿದರು.