Asianet Suvarna News Asianet Suvarna News

ಮುಂಬರುವ ಲೋಕಸಭೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ: ರೇಣುಕಾಚಾರ್ಯ ಭವಿಷ್ಯ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದುಬಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು. 

BJP will win more than 350 seats in the upcoming Lok Sabha Election Says MP Renukacharya gvd
Author
First Published Dec 4, 2023, 11:01 PM IST

ಹೊನ್ನಾಳಿ (ಡಿ.04): ಮುಂಬರುವ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದುಬಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಗೂ ರಾಜಾಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸ್‌ಗಢ ರಾಜ್ಯದಲ್ಲಿ ಬಿಜೆಪಿ ಜಯಭೇರಿ ಹೊಡೆಯುತ್ತಿದಂತೆ ಸಾವಿರಾರು ಕಾರ್ಯಕರ್ತರೊಂದಿಗೆ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಅಗಮಿಸಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ರಾಯಣ್ಣ ಪ್ರತಿಮೆಗೆ ಪುಷ್ಪಹಾರ ಹಾಕಿ ನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಬಿಟ್ಟಿ ಗ್ಯಾರಂಟಿಗಳಿಂದ ಮತದಾರರನ್ನು ನಿರತರ ಓಲೈಸಲು ಸಾಧವಿಲ್ಲ. ದೇಶದ ಪ್ರಶ್ನೆ ಬಂದಾಗ ದೇಶಕ್ಕೆ ಒಬ್ಬ ಸಮರ್ಥ ಹಾಗೂ ಬಲಿಷ್ಠ ನಾಯಕತ್ವ ಗುಣವುಳ್ಳ ನಾಯಕರ ಆಗತ್ಯವಾಗುತ್ತದೆ. ಈ ದೇಶಕ್ಕೆ ನರೇಂದ್ರ ಮೋದಿಯವರಂತಹ ಅತ್ಯಂತ ಚಾಣಾಕ್ಷ ಮತ್ತು ಬಲಿಷ್ಠ ನಾಯಕ ಅನಿವಾರ್ಯ ಎನ್ನುವುದ ದೇಶದ ಪ್ರತಿಯೊಬ್ಬ ಪ್ರಜೆಗೂ ಗೊತ್ತಿದೆ ಎಂದು ಹೇಳಿದರು. ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ 10 ಮ್ಯಾಚ್‌ ಭಾರತ ಗೆದ್ದು ಕೊನೆಯಲ್ಲಿ ಆಸ್ಟ್ರೇಲಿಯಾದ ವಿರುದ್ಧ ಸೋತಾಗ ಕಾಂಗ್ರೆಸ್‌ನವರು ಮೋದಿಯವರನ್ನು ಶನಿ ಎಂದು ಹೀಯಾಳಿಸಿದ್ದರು. 

ಕುಮಾರಸ್ವಾಮಿ ಬೇರೆಯವರ ದುಡ್ಡನ್ನು ನೋಡೇ ಇಲ್ಲ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಆದರೆ ಮೋದಿಯವರು ಆಟಗಾರರನ್ನು ಭೇಟಿಯಾಗಿ ಅದರಲ್ಲೂ ಮೊಹಮ್ಮದ್ ಶಮಿ ಅವರನ್ನು ಆಪ್ಪಿಕೊಂಡು ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡುವ ಮೂಲಕ ಅವರೊಬ್ಬ ಜಾತ್ಯತೀತ ಮಹಾನ್‌ ನಾಯಕ ಎಂದು ಸಾಬೀತು ಪಡಿಸಿದ್ದಾರೆ ಎಂದು ಹೇಳಿದರು. ದೇಶದ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಪಾಕಿಸ್ತಾನದಲ್ಲಿ ವಿಜಯೋತ್ಸವ ಆಚರಿಸುತ್ತಾರೆ ಎಂದ ಅವರು, ರಾಜ್ಯದಲ್ಲಿ ಸಭಾಧ್ಯಕ್ಷರಾಗಿರುವ ಯು.ಟಿ. ಖಾದರ್‌ ಅವರ ಸ್ಥಾನಕ್ಕೆ ಸದಸದಲ್ಲಿ ಎಲ್ಲರೂ ಗೌರವ ಕೊಡುವುದು ಪ್ರಜಾತಂತ್ರ ವ್ಯವಸ್ಥೆ ಅಗಿದ್ದು, ಇದಕ್ಕೆ ಜಮೀರ್‌ ಆಹಮ್ಮದ್‌ ಅವರು ಒಬ್ಬ ಮುಸ್ಲಿಂನಿಗೆ ಎಲ್ಲರೂ ಎದ್ದು ನಿಂತು ಸಮಸ್ಕಾರ ಮಾಡುತ್ತಾರೆ ಎಂದು ತಮ್ಮ ಸಂಕುಚಿತ ಮನೋಭಾವನೆಯನ್ನು ಪ್ರದರ್ಸಿಸಿದ್ದಾರೆ. ಇಂತಹವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಜಾ ಮಾಡಬೇಕು ಎಂದು ಹೇಳಿದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್‌. ಆಶೋಕ್‌ ಹಾಗೂ ಯಡಿಯೂರಪ್ಪ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಮೆಯಲ್ಲಿ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಗಳಿಸಲಿದೆ ಎಂದು ಹೇಳಿದರು. ದೇಶದಲ್ಲಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಮೇಕ್‌ ಇನ್‌ ಇಂಡಿಯಾ ಯೋಜನೆಯಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ಶಿಷ್ಯನಿಧಿ ಸ್ಥಾಪನೆ, ಪಿ.ಎಂ. ಕಿಸಾನ್‌ ಯೋಜನೆಗಳ ಮೂಲಕ ರೈತರಿಗೆ ಸಹಾಯ ಹಸ್ತ, ಇಂತಹ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ಮೂಲಕ ಉತ್ತಮ ಕೆಲಸ ಮಾಡಿದೆ. ಉತ್ತಮ ಆಡಳಿತದ ಮೂಲಕ ದೇಶದ ಆರ್ಥಿಕ ಸ್ಥಿತಿ ಸುಧಾರಿಸಿ ಇಂದು ವಿಶ್ವದಲ್ಲಿ ದೇಶ 3ನೇ ಸ್ಥಾನದಲ್ಲಿದೆ ಎಂದು ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಮುನ್ಸೂಚನೆ: ಸಂಸದ ಮುನಿಸ್ವಾಮಿ

ಅನಾವೃಷ್ಟಿಯಲ್ಲಿದ್ದಾಗ ಬಿಜೆಪಿ ಸರ್ಕಾರ ಪರಿಹಾರ ನೀಡಿದೆ, ಆದರೆ ಪ್ರಸ್ತುತ ಭೀಕರ ಬರಗಾಲವಿದ್ದು, ಈಗಿನ ಕಾಂಗ್ರೆಸ್‌ ಸರ್ಕಾರ ಇನ್ನೂ ಕೂಡ ಯಾವುದೇ ಪರಿಹಾರ ನೀಡಿಲ್ಲ ಎಂದು ಟೀಕಿಸಿದರು. ಕಾರ್ಯಕ್ರಮದಲ್ಲಿ ಹೊನ್ನಾಳಿ ಮಂಡಲ ಅಧ್ಯಕ್ಷ ಜೆ.ಕೆ. ಸುರೇಶ್‌ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಈ ದೇಶದ ಪ್ರಧಾನಿಯಾಗಿ ದೇಶದ ಜಗತ್ತಿನಲ್ಲಿ ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೋಮ್ಮಲಿದೆ ಇದಕ್ಕಾಗಿ ಜನತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು ಹೇಳಿದರು. ಹಿರಿಯ ನಾಯಕ ದಿಡಗೂರು ಪಾಲಾಕ್ಷಪ್ಪ, ಆರಕೆರೆ ನಾಗರಾಜ್‌ ಮಾತನಾಡಿದರು. ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಲಾಯಿತು.

Follow Us:
Download App:
  • android
  • ios