ನೀವು ಸಂವಿಧಾನ ಸುಟ್ಟವರು. ನಮ್ಮನ್ನು ಕೆಣಕಬೇಡಿ. ನಾವು ಬೆಂಕಿ ಇದ್ದಂಗೆ. ಸುಟ್ಟು ಹೋಗ್ತಿರಾ ಎಂದು ಬಿಜೆಪಿ ವಿರುದ್ಧ ಗುಡುಗಿದ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
ಬೆಳಗಾವಿ(ಜ.22): ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ರಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಂವಿಧಾನ ಹಾಗೂ ಅಂಬೇಡ್ಕರ್ ವಿರೋಧಿ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯದ್ದು ಗಾಂಧೀ ಹಂತಕ ಗೋಡ್ಲೆ ಹಿಂದುತ್ವವಾದರೆ ನಮ್ಮದು ರಾಮಭಕ್ತ ಗಾಂಧೀಜಿಯ ಹಿಂದುತ್ತ ಎಂದು ಗುಡುಗಿದ್ದಾರೆ. ಜೊತೆಗೆ ನಮ್ಮ ಹೋರಾಟ ಅವರ ಚಿಂತನೆಗಳ ವಿರುದ್ದ ಎಂದಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೀವು ಸಂವಿಧಾನ ಸುಟ್ಟವರು. ನಮ್ಮನ್ನು ಕೆಣಕಬೇಡಿ. ನಾವು ಬೆಂಕಿ ಇದ್ದಂಗೆ. ಸುಟ್ಟು ಹೋಗ್ತಿರಾ ಎಂದು ಬಿಜೆಪಿ ವಿರುದ್ಧ ಗುಡುಗಿದರು.
ಹಲವು ಬಾರಿ ತ್ಯಾಗ ಮಾಡಿದ್ದೇನೆ, ನನಗೆ ಹುದ್ದೆ ಅವಶ್ಯಕತೆ ಇಲ್ಲ: ಡಿ.ಕೆ. ಶಿವಕುಮಾರ್
ಸಂಸತ್ತಿನಲ್ಲಿ ಸಂವಿಧಾನ ಮತ್ತು ಅಂಬೇಡ್ಕರ್ ಅವರನ್ನು ಅವಮಾನ ಮಾಡಲಾಗುತ್ತಿದೆ. ಸಂವಿಧಾನ ಉಳಿವಿಗಾಗಿ ನನ್ನ ಸಹೋದರ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರು ಪ್ರಾಣ ತ್ಯಾಗಕ್ಕೂ ಸಿದ್ದ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಗಾಂಧೀ ಭಾರತ ಮಾಲಿಗೂ ಮುನ್ನ ಸುವರ್ಣಸೌಧದ ಆವರಣದಲ್ಲಿ ನೂತನವಾಗಿ ಅಳವಡಿಸಲಾಗಿರುವ ಮಹಾತ್ಮಾ ಗಾಂಧೀಜಿ ಅವರ ಪುತ್ಥಳಿ ಅನಾವರಣ ಮಾಡಲಾಯಿತು.
ಗಾಂಧಿ ಹಿಂದುತ್ವ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಿದ್ಧಾಂತ ವಿರುದ್ಧ ನಾವು ಇಂದು ಹೋರಾಟ ಮಾಡಬೇಕಿದೆ. ನಮ್ಮದು ರಾಮಭಕ್ತ ಗಾಂಧೀಜಿಯ ಹಿಂದುತ್ವವಾದರೆ, ಬಿಜೆಪಿ ಮತ್ತು ಆರ್ ಎಸ್‌ಎಸ್‌ನದ್ದು ಗಾಂಧಿ ಹಂತಕ ಗೋಡೆಯ ಹಿಂದುತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು. ಸಂವಿಧಾನ ಜಾರಿಯಾದಾಗಬಿಜೆಪಿಪರಿವಾರಅಂಬೇಡ್ಕರ್‌ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ಬಿಜೆಪಿಯ ವಿರುದ್ಧ ಆರೋಪಗಳ ಸುರಿಮಳೆಗರೆದರು.
ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್ಅವರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ. ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ದಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು ಎಂದು ಹೇಳಿದರು.
ಗಾಂಧಿ, ಅಂಬೇಡ್ಕರ್‌ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್‌ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಜೈರಾಂ ರಮೇಶ, ಸಂಪುಟದ ಹಿರಿಯ ಸಚಿವರಾದ ಎಚ್. ಕೆ.ಪಾಟೀಲ್, ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ತೆಲಂಗಾಣ ಡಿಸಿಎಂ ಮಲ್ಲು ಭಟ್ಟಿ ವಿಕ್ರಮಾರ್ಕ್, ಎಐಸಿಸಿ ಪದಾಧಿಕಾರಿಗಳು ಹಾಜರಿದ್ದರು.
ನಾನು ಎಲ್ಲರನ್ನೂ ಸಮನಾಗಿ ಕಾಣುತ್ತೇನೆ, ಪಕ್ಷದಲ್ಲಿ ಬಂಡಾಯವಿದೆ ಎನ್ನೋದೆಲ್ಲ ಸುಳ್ಳು: ಡಿ.ಕೆ.
ನಮ್ಮನ್ನು ಕೆಣಕಿದ್ರೆ ಸುಟ್ಟುಹೋಗ್ತಿರಿ ಬಿಜೆಪಿಯವರು ಸಂವಿಧಾನ, ಡಾ। ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಸುಟ್ಟವರು. ಬಿಜೆಪಿಗರು ನಮ್ಮನ್ನು ಕೆಣಕಬೇಡಿ. ನಾವು ಬೆಂಕಿ ಇದ್ದಂಗೆ. ನಮ್ಮನ್ನು ಕೆಣಕಿದರೆ ಸುಟ್ಟು ಹೋಗ್ತಿರಾ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಂವಿಧಾನ ಉಳಿವಿಗೆ ಪ್ರಾಣತ್ಯಾಗ ನರೇಂದ್ರ ಮೋದಿ, ಅಮಿತ್ ಶಾ ಸಂವಿಧಾನ ವಿರೋಧಿಗಳಾಗಿದ್ದಾರೆ. ಸಂಸತ್ತಿನಲ್ಲಿ ಸಂವಿಧಾನ, ಅಂಬೇಡ್ಕರ್‌ರನ್ನು ಅವಮಾನಿಸಲಾಗುತ್ತಿದೆ. ಸಂವಿಧಾನ ಉಳಿವಿಗಾಗಿ ಪ್ರಾಣ ತ್ಯಾಗಕ್ಕೂ ನಾವು ಸಿದ್ದರಿದ್ದೇವೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಎಂದಿಗೂ ನಮ್ಮದು ಗಾಂಧಿ ಮಂತ್ರ ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಎಂದೆಂದೂ ನಮ್ಮದು ಗಾಂಧಿ ಮಂತ್ರ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
