ನಕಲಿ ಸೋಪ್ ತಯಾರಕರ ಜತೆ ಬಿಜೆಪಿಗರ ನಂಟು: ಸಚಿವ ಪ್ರಿಯಾಂಕ್ ಖರ್ಗೆ
‘ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದೆ. ತನಿಖೆಯಲ್ಲಿ ಇದು ಸಾಬೀತಾಗಿದ್ದು, ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರು (ಜ.18): ‘ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದೆ. ತನಿಖೆಯಲ್ಲಿ ಇದು ಸಾಬೀತಾಗಿದ್ದು, ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು?’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಕಲಿ ಸೋಪು ತಯಾರಿಸುವ ಕಾರ್ಖಾನೆ ಮೇಲೆ ದಾಳಿ ಮಾಡಿ ಸೀಜ್ ಮಾಡಿದ್ದು, ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಇಬ್ಬರೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಯೋಗಿ ಆದಿತ್ಯನಾಥ್ ಹಾಗೂ ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳು. ಜತೆಗೆ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜತೆ ಒಡನಾಟ ಇರೋದು ಪತ್ತೆಯಾಗಿದೆ. ಈ ಬಗ್ಗೆ ಬಿಜೆಪಿಗರು ಉತ್ತರಿಸಲಿ ಎಂದರು.
ಹೈಕಮಾಂಡ್ ನಿರ್ಧಾರವೇ ಅಂತಿಮ: ಜಾತಿಗೊಬ್ಬ ಡಿಸಿಎಂ ವಿಚಾರವಾಗಿ ಪಕ್ಷದಲ್ಲಿ ಯಾರು ಏನೇ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರೂ ಅಂತಿಮವಾಗಿ ಈ ವಿಷಯದಲ್ಲಿ ನಿರ್ಧಾರ ಕೈಗೊಳುವುದು ಹೈಕಮಾಂಡ್ ಮಾತ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ಸರ್ಕಾರ ಸಚಿವರ ನಡುವೆಯೇ ಪುನಃ ‘ಜಾತಿಗೊಬ್ಬ ಡಿಸಿಎಂ’ ನೇಮಿಸುವ ಕುರಿತಂತೆ ಕೂಗೆದ್ದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಸ್ವಾತಂತ್ರ್ಯವಿದೆ. ಯಾರೇ ಆದರೂ ಡಿಸಿಎಂ ಹುದ್ದೆಯ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರರು. ಆದರೆ ಅಂತಿಮವಾಗಿ ಹೈಕಮಾಂಡ್ ಈ ವಿಷಯದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಮರು ನುಡಿದರು.
ಅವನೊಬ್ಬ ಮೂರ್ಖ: ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸಿದ್ದು ಪರೋಕ್ಷ ತರಾಟೆ
ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಕಾಂಗ್ರೆಸ್ ಪಕ್ಷದ ಅಳಿವು-ಉಳಿವಿನ ಕುರಿತು ಮಾತನಾಡುವ ಮೊದಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗಾಗಲೇ ತೂತಾಗಿರುವ ಹಡಗಿನಂತಿರುವ ಜೆಡಿಎಸ್ ಪಕ್ಷ ಉಳಿಸಿಕೊಳ್ಳಲು ಯತ್ನ ಮಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ದೇವೇಗೌಡರ ಮಾತಿಗೆ ತಿರುಗೇಟು ನೀಡಿದ್ದಾರೆ. ಈ ಹಿಂದೆ ಯಾರು ಹೇಗೆ ಸಿಎಂ ಹಾಗೂ ಪ್ರಧಾನಿ ಆಗಿದ್ದರು ಎಂದು ಅವರು ನೋಡಲಿ, ಅದೆಲ್ಲ ಎಲ್ಲರಿಗೂ ಗೊತ್ತಿದೆ, ಅದನ್ನೆಲ್ಲ ಬಿಟ್ಟು ಈಗ ಕಾಂಗ್ರೆಸ್ ಪಕ್ಷದ ನಾಶ ಮಾಡುವ ಮಾತನ್ನಾಡುತ್ತಿದ್ದಾರೆ. ಇಂತಹ ಮಾತನ್ನಾಡಿದವರು ಇತಿಹಾಸದ ಪುಟ ಸೇರಿದ್ದಾರೆಂದು ಪ್ರಿಯಾಂಕ್ ಟಾಂಗ್ ಕೊಟ್ಟರು. ಕಾಂಗ್ರೆಸ್ ಪಕ್ಷದ ನೂರಾರು ವರ್ಷದ ಸುದೀರ್ಘ ಇತಿಹಾಸವಿರುವ ಪಕ್ಷ. ಜನಸೇವೆಯೇ ಕಾಯಕವಾಗಿರುವ ಕಾಂಗ್ರೆಸ್ ಅಳಿವು- ಉಳಿವು ಈ ದೇಶದ ಜನ ನಿರ್ಧರಿಸುತ್ತಾರೆ. ದೇವೇಗೌಡರಂತಹ ಅನೇಕರು ನಾಶ ಮಾಡುವ ಮಾತನ್ನಾಡಿದ್ದಾರೆ, ಇಂದೂ ಲೆಕ್ಕಕ್ಕಿಲ್ಲವೆಂದು ಲೇವಡಿ ಮಾಡಿದರು.