Asianet Suvarna News Asianet Suvarna News

Congress vs BJP ಆರು ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

* ಆರು ತಿಂಗಳ ಪೂರೈಸಿದ ಸಂಭ್ರಮದಲ್ಲಿ ಬೊಮ್ಮಾಯಿ ಸರ್ಕಾರ
*ಅರ್ಧ ವರ್ಷ ಪೂರೈಸಿದ   ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌  6 ಪ್ರಶ್ನೆ
* ಸರ್ಕಾರಕ್ಕೆ 6 ಪ್ರಶ್ನೆಗಳನ್ನು ಕೇಳುವ ಮೂಲಕ ಕಾಂಗ್ರೆಸ್‌ ಚಾಟಿ 

Bommai Govt Six Month Complete  Karnataka Congress Asks 6 questions rbj
Author
Bengaluru, First Published Jan 28, 2022, 11:15 PM IST

ಬೆಂಗಳೂರು, (ಜ.28): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಇಂದು (ಜ.28) 62ನೇ ಜನ್ಮದಿನದ ಖುಷಿ ಒಂದು ಕಡೆಯಾದರೆ, ಮತ್ತೊಂದೆಡೆ ಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣವಾಗಿದೆ.

CM Bommai: 6 ತಿಂಗಳಲ್ಲಿ ಅನೇಕ ಅಭಿವೃದ್ಧಿ ಕಾರ‍್ಯ, ಜನಪರ ಆಡಳಿತ ನೀಡಿದ ಬೊಮ್ಮಾಯಿ

ಅರ್ಧ ವರ್ಷ ಆಡಳಿತವನ್ನು ಪೂರೈಸಿದ ಸಂಭ್ರಮಾಚರಣೆಯಲ್ಲಿರುವ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌  6 ಪ್ರಶ್ನೆಗಳೊಂದಿಗೆ ಕುಟುಕಿದೆ. ಆರು ತಿಂಗಳ ಸರ್ಕಾರಕ್ಕೆ ಟ್ವಿಟ್ಟರ್‌ನಲ್ಲಿ ಕಾಂಗ್ರೆಸ್ ಕೇಳಿರುವ ಆರು ಪ್ರಶ್ನೆಗಳು ಈ ಕೆಳಗಿನಂತಿವೆ ನೋಡಿ.

ಪ್ರಶ್ನೆ ನಂಬರ್ 1
ನೋಟ್ ಬ್ಯಾನ್ ಹಾಗೂ ಗಬ್ಬರ್ ಸಿಂಗ್ ಟ್ಯಾಕ್ಸ್‌ಗಳಿಂದಾಗಿ ಶುರುವಾದ ನಿರುದ್ಯೋಗ ಸಮಸ್ಯೆ ಲಾಕ್‌ಡೌನ್‌ ನಂತರ ಉತ್ತುಂಗಕ್ಕೇರಿದೆ. ಸಿಎಂ ಆಗಿ ಅರ್ಧ ವರ್ಷ ಅಧಿಕಾರ ಪೂರೈಸಿದ ಬೊಮ್ಮಾಯಿ ಅವರೇ, ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು? ರೂಪಿಸಿದ ಯೋಜನೆಗಳೇನು? ಎಷ್ಟು ಉದ್ಯೋಗ ಸೃಷ್ಟಿಯಾಗಿದೆ?

ಪ್ರಶ್ನೆ ನಂಬರ್ 2
ಮುಖ್ಯಮಂತ್ರಿಯಾಗಿ ಹಣಕಾಸು ಖಾತೆಯನ್ನು ಖಾತೆಯನ್ನು ನಿಭಾಯಿಸುತ್ತಿರುವ ಬೊಮ್ಮಾಯಿ ಅವರೇ, ತಮ್ಮ ಅಧಿಕಾರದ 6 ತಿಂಗಳಲ್ಲಿ ಹಾಗೂ ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಕೇಂದ್ರದಿಂದ ಯಾವ್ಯಾವ ಯೋಜನೆಗೆ ಎಷ್ಟು ಅನುದಾನ ತಂದಿದ್ದೀರಿ? GST ಬಾಕಿ, ನೆರೆ ಪರಿಹಾರ ಸೇರಿದಂತೆ ಎಷ್ಟು ನೆರವನ್ನು ತಂದಿದ್ದೀರಿ?

ಪ್ರಶ್ನೆ ನಂಬರ್ 3
ಬಿಬಿಎಂಪಿಯಲ್ಲಿ ಭ್ರಷ್ಟಾಚಾರ, ಬಿಡಿಎಯಲ್ಲಿ ಭ್ರಷ್ಟಾಚಾರ, ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ. ಈ ಸರ್ಕಾರದಲ್ಲಿ ಎಲ್ಲೆಲ್ಲೂ ಭ್ರಷ್ಟಾಚಾರವೇ. ಬೊಮ್ಮಾಯಿ ಅವರೇ, ಈ 6 ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು?

ಪ್ರಶ್ನೆ ನಂಬರ್ 4
ಸಿಗದ ನೆರೆ ಪರಿಹಾರ, ದೊರಕದ ಕರೋನಾ ಪರಿಹಾರ, ಕುಂಟುವ ಅಡಳಿತಯಂತ್ರ, ಇಲ್ಲದ ವಸತಿ ಯೋಜನೆಗಳು. ಜನರ ಸಮಸ್ಯೆ ಹಲವಾರಿದ್ದರೂ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲವೇಕೆ? ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ತಮಗೆ ಜನತಾದರ್ಶನಕ್ಕೆ ಸಮಯವಿರಲಿಲ್ಲವೇ?

ಪ್ರಶ್ನೆ ನಂಬರ್ 5
ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಬೊಮ್ಮಾಯಿ ಅವರು, ರಾಜ್ಯದ ಹಣಕಾಸು ಸ್ಥಿತಿಯನ್ನು ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು? ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೇನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು?

ಪ್ರಶ್ನೆ ನಂಬರ್ 6
ಬೊಮ್ಮಾಯಿ ಅವರೇ, ನಿಮ್ಮ ಸರ್ಕಾರಕ್ಕೆ 6 ತಿಂಗಳಗಿದೆ, ನಿಮ್ಮ ಸಚಿವರ ಕೆಲಸಗಳ ಬಗ್ಗೆ ನಿಮಗೆ ತೃಪ್ತಿ ಇದೆಯೇ? ಅಸಮಾಧಾನದಿಂದ ಒಲ್ಲದ ಖಾತೆ ನಿಭಾಯಿಸುತ್ತಿರುವವರು, ಉಸ್ತುವಾರಿಗಾಗಿ ಕಿತ್ತಾಡುವವರು, ತಮ್ಮದೇ ಶಾಸಕರೊಂದಿಗೆ ಮುನಿಸಿಟ್ಟುಕೊಂಡ ಸಚಿವರುಗಳು ನಿಮ್ಮಲ್ಲಿದ್ದಾರೆ, ಅವರ ಕೆಲಸಗಳ ಬಗ್ಗೆ ಸಮಾಧಾನವಿದೆಯೇ ಎಂದು 6 ತಿಂಗಳು ಪೂರೈಸಿರುವ ಬೊಮ್ಮಾಯಿ ಸರ್ಕಾರಕ್ಕೆ 6 ಪ್ರಶ್ನೆಗಳನ್ನು ಕೇಳುವ ಮೂಲಕ ಕಾಂಗ್ರೆಸ್‌ ಚಾಟಿ ಬೀಸಿದೆ.

 

Follow Us:
Download App:
  • android
  • ios