ಬೊಮ್ಮಾಯಿ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನಗೊಳ್ಳಬಹುದು: ಹೀಗೊಂದು ಭವಿಷ್ಯ

* ಬಸವರಾಜ ಬೊಮ್ಮಾಯಿ ಸರ್ಕಾರದ ಭವಿಷ್ಯ ನುಡಿದ ಮಾಜಿ ಸಿಎಂ
* ಯಾವುದೇ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರ  ಪತನಗೊಳ್ಳುವ ಸಾಧ್ಯತೆ ಇದೆ ಎಂದು ಸಿದ್ದು
* ಬೆಂಗಳೂರಿನಲ್ಲಿ ಇಂದು (ಶನಿವಾರ) ಸಿದ್ದರಾಮಯ್ಯ ಹೇಳಿಕೆ

Bommai Karnataka govt will collapse any time says former CM Siddaramaiah rbj

ಬೆಂಗಳೂರು, (ಆ.14): ಬಸವರಾಜ ಬೊಮ್ಮಾಯಿ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ. ಸರ್ಕಾರದಲ್ಲಿ ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ನನ್ನ ತೀರ್ಮಾನ ‌ನಾನು ಮಾಡ್ತೇನೆ: ತಮ್ಮ ನಾಯಕರಿಗೆ ಬಿಜೆಪಿ ಶಾಸಕ ಖಡಕ್ ಎಚ್ಚರಿಕೆ

 ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ ಎಂದರು.

ಕೋವಿಡ್ ಮೂರನೇ ಅಲೆ ಆರಂಭವಾಗುತ್ತಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು ಸೇರಿದಂತೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಮೂರನೇ ಅಲೆಯಿಂದ ಜನ ತೊಂದರೆಗೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ವಾರಾಂತ್ಯದ ಲಾಕ್‌ ಡೌನ್ ಘೋಷಣೆ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವುದು ಉತ್ತಮ ಎಂದು ಸಲಹೆ ನೀಡಿದರು.

Latest Videos
Follow Us:
Download App:
  • android
  • ios